ಕಾರವಾರ ಕಾಜುಭಾಗ: ಅ.31 ರಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತನಲ್ಲಿ 144 ರನ್ವಯ ನಿಷೇಧಾಜ್ಞೆ ಜಾರಿ

Source: S.O. News Service | By S O News | Published on 26th October 2021, 1:47 PM | Coastal News |

ಕಾರವಾರ : ನಗರದ  ಕಾಜುಭಾಗದ ಸರ್ಕಾರಿ  ಪಿಯುಸಿ ಕಾಲೇಜಿನಲ್ಲಿ ಅ.31 ರಂದು UPSC/KAS/GROUPC/SSC/BANKING/RRB 2021ರ ನೇಮಕಾತಿಯ ಪ್ರವೇಶಾತಿಗಾಗಿ ಪರೀಕ್ಷೆ ಜರುಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತವಾತಾವರಣದಲ್ಲಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. 

ಅಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ಬಳಸಬಾರದು ಹಾಗೂ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝರಾಕ್ಸ್ ಅಂಗಡಿ, ಸೈಬರ್, ಕೆಫೆ, ಖಾಸಗಿ ತರಬೇತಿ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕು. ಹಾಗೂ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಇಲೆಕ್ಟ್ರಾನಿಕ್ಸ್ ವಸ್ತುಗಳು ಮೊಬೈಲ್, ಮೈಕ್ರೋ ಪೋನ್, ಸ್ಮಾರ್ಟ್ ವಾಚ್, ಬ್ಲ್ಯುಟುತ್ , ಹೆಡ್ ಪೋನ್ ಬಳಸಲು ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ  ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...