ಕಾರವಾರ : ಯುವ ಸಬಲೀಕರಣ ಕ್ರೀಡಾ ಇಲಾಖೆಯು ಖೇಲೋ ಇಂಡಿಯಾ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Source: SO News | Published on 7th October 2021, 1:03 PM | Coastal News |

ಕಾರವಾರ : ಯುವ ಸಬಲೀಕರಣ ಕ್ರೀಡಾ ಇಲಾಖೆಯು ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ young professional, Sports Masseur and Sports Nutritionis  ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ    ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಪಡೆದು, ಭರ್ತಿ ಮಾಡಿ  ಅ. 11 ರೊಳಗಾಗಿ ಸಲ್ಲಿಸಬಹುದಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿದೇರ್ಶಕಿ ಜಿ.ಗಾಯತ್ರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಆಸಕ್ತರು  ಜಿಲ್ಲಾ  ನೆಹರು ಯುವ ಕೇಂದ್ರ, ಹಳೆ ಧಾರ್ ಪಿ. ಕಟ್ಟಡ, ತಹಶೀಲ್ದಾರ ಕಛೇರಿಯ ಮೊದಲನೆ ಮಹಡಿ, ಕಾರವಾರ ಕಛೇರಿಯನ್ನು ಸಂಪರ್ಕಿಸಿ,   ಅರ್ಜಿ ನಮೂನೆ ಪಡೆದು ಅಕ್ಟೋಬರ್ 15 ರ ಒಳಗಾಗಿ ನೆಹರು ಯುವ ಕೇಂದ್ರ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:9449992195, 08382226965 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಕೇಂದ್ರದ  ಅಧಿಕಾರಿ ಯಶವಂತ ಯಾದವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next