ಕಾರವಾರ: ಪರಿಸರ ರಕ್ಷಣೆ  ಎಲ್ಲರ ಕರ್ತವ್ಯ; ಬಿ.ಕೆ.ಸಂತೋಷ್

Source: S O News | By I.G. Bhatkali | Published on 25th November 2023, 11:44 PM | Coastal News |

ಕಾರವಾರ:  ಜಾಗತಿಕ ತಾಪಮಾನ ಹೆಚ್ಚಳದಿಂದ  ಪರಿಸರದಲ್ಲಿ  ಅಸಮತೋಲನ ಉಂಟಾಗಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗುತ್ತಿವೆ. ಕಲುಷಿತ ವಾತಾವರಣದಿಂದ ಪರಿಸರವನ್ನು ರಕ್ಷಣೆ  ಮಾಡುವುದು ಎಲ್ಲರ ಕರ್ತವ್ಯ ಎಂದು ಜಿಲ್ಲಾ ಪರಿಸರ ಅಧಿಕಾರಿ ಬಿ.ಕೆ.  ಸಂತೋಷ್ ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಕಾರವಾರ ಹಾಗೂ ಸಂಗಮ ಸೇವಾ ಸಂಸ್ಥೆ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ , ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಂಗವಾಗಿ , ಪರಿಸರ ರಕ್ಷಣಾ ದಿನದ ಪ್ರಯುಕ್ತ  ಪರಿಸರ ಜಾಗೃತಿ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪರಿಸರದ  ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು.ಪ್ರಸ್ತುತ ದಿನಗಳಲ್ಲಿ ಪರಿಸರವನ್ನು  ಉಳಿಸಿ ಬೆಳಸುವ ನಿಟ್ಟಿನಲ್ಲಿ ಜನರು ಪ್ರಯತ್ನಿಸುತ್ತಿಲ್ಲ. ಇದರಿಂದ ಪರಿಸರ ಮಾಲಿನ್ಯ ಉಂಟಾಗಿ   ದುಷ್ಪರಿಣಾಮ ಬೀರುತ್ತದೆ. ಜನರು ತಮ್ಮ ಮನೆಯ ತಾಜ್ಯಗಳನ್ನು  ಮನೆಯಲ್ಲಿಯೆ ವಿಂಗಡಿಸಿ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದರೆ  ಪರಿಸರ ಮಾಲಿನ್ಯ ತಡೆಯಲು ಬಹಳಷ್ಟು ಸಹಕಾರಿಯಾಗುತ್ತದೆ ಎಂದರು.

ಪರಿಸರವನ್ನು  ಸಂರಕ್ಷಿಸುವ ನಿಟ್ಟಿನಲ್ಲಿ , ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ವವಾಗಿಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು,   ಪರಿಸರವನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನೀಡಲು  ಸಾಧ್ಯವಾಗಲ್ಲಿದ್ದು, ಮಾಲಿನ್ಯ ತಡೆಗಟ್ಟಲು ಎಲ್ಲರು ಪ್ರಯತ್ನಿಸಬೇಕು ಎಂದರು.

ಉಪ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ‌ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಹೊಣೆ. ಗಿಡ-ಮರ ಬೆಳೆಸುವುದರಿಂದ ಸಕಾಲಕ್ಕೆ ಮಳೆ, ಶುದ್ಧ ಗಾಳಿ ಸಿಗುವ ಜತೆಗೆ ಭೂಮಿಯ ಉಷ್ಣತೆಯಲ್ಲಿ ಸಮತೋಲನವಾಗುತ್ತದೆ. ಭೂಮಿಯ ಮೇಲಿನ ಪ್ರತಿಯೊಂದು ಜೀವಿಯು ಪರಿಸರವನ್ನು ಅವಲಂಬಿಸಿದೆ. ಹಾಗಾಗಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ  ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲರಾದ ವಿದ್ಯಾ ದೇವಿದಾಸ ನಾಯಕ,  ಸಂಗಮ ಸೇವಾ ಸಂಸ್ಥೆಯ ಅಧ್ಯಕ್ಷ ರವೀಂದ್ರ ಎನ್ ಶೆಟ್ಟಿ,  ಕಾಲೇಜು ಉಪನ್ಯಾಸಕ ಡಾ. ಮಹೇಂದ್ರ ಕುಮಾರ, ವಿದ್ಯಾರ್ಥಿಗಳು ಇತರರು ಇದ್ದರು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...