ಕಾರವಾರ: ಯಕ್ಷಗಾನದ  ಸಾಂಸ್ಕ್ರತಿಕ ಶ್ರೀಮಂತಿಕೆಯ ಅನಾವರಣದ ಮಾಧ್ಯಮ

Source: so english | By Arshad Koppa | Published on 21st June 2017, 8:03 AM | Coastal News | Special Report | Guest Editorial |

 ನಮ್ಮ ಸಾಂಸ್ಕ್ರತಿಕ ಶ್ರೀಮಂತಿಕೆ ಬಹುಶ್ರೀಮಂತವಾದದು ಪರಂಪರಾಗತವಾಗಿ ಬಂದ ಮೌಲ್ಯಗಳು ಯಕ್ಷಗಾನದ ಕಲೆಯ ಮೂಲಕ ಅನಾವರಣ ಗೊಳುತ್ತಿದ್ದು ಅದರ ಹಿಂದೆ ಶ್ರಮಿಸುವ ಕೈಗಳನ್ನು ಗುರುತಿಸಿ ಗೌರವಿಸುವುದು ಪ್ರಶಂಸನೀಯವಾದುದು ಎಂದು ಡಾ.ಶಿವಾನಂದ ನಾಯಕ ತಿಳಿಸಿದರು. ದಿನಾಂಕ. 18.06.2017 ರಂದು ಇಡಗುಂಜಿಯ ಮಹಾಗಣಪತಿ ಯಕ್ಷಗಾನ ವೇಷಭೂಷಣ ಮಂಡಳಿ(ರಿ) ಆಡುಕುಳ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕಾರವಾರ ಇವರ ಸಹಯೋಗದಲ್ಲಿ ನಡೆದ ಸಂಘದ 8ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ವಿವಿಧ ಯಕ್ಷಗಾನ ಮೇಳಗಳಿಗೆ ವೇಶ ಭೂಷಣ ಪರಿಕರಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡುತ್ತಿರುವ ಭಾಸ್ಕರ ಗೌಡ ಹಾಗೂ ಅವರ ಕುಟುಂಬದವರ ಕಾರ್ಯವನ್ನು ಅಭಿನಂದಿಸಿ ಯಕ್ಷಗಾನ ಕಲಾವಿದರನ್ನು ಗೌರವಿಸುವ ಪರಂಪರೆ ನಿರಂತರವಾಗಿ ಮುಂದುವರೆಯಲಿ ಎಂದು ಆಶಿಸಿದರು.
         ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಗೌಡ ಹಾಗೂ ಕುಟುಂಬದವರು ಖ್ಯಾತ ಯಕ್ಷಗಾನ ಹಾಸ್ಯಕಲಾವಿದರಾದ ಶ್ರೀಧರ ಹೆಗಡೆ, ಕಾಸರಕೊಡು, ಹಿರಿಯ ಚಂಡೆವಾದಕ ಕಲಾವಿದ ಶ್ರೀ ವೆಂಕಪ್ಪ ಮಂಜು ಭಂಡಾರಿಯವರನ್ನು ಹಾಗೂ ಕಲಾವಿದರೂ, ಪ್ರಾಂಶುಪಾಲರಾದ ಡಾ.ಶಿವಾನಂದ ನಾಯಕರನ್ನು ಸನ್ಮಾನಿಸಿ ಗೌರವಿಸಿದರು.
    ನಂತರ ಹಿರಿಯ ಭಾಗವತರಾದ ಕೃಷ್ಣ ಭಂಡಾರಿ, ಉಮೇಶ ತಲಕೋಡ ಹಾಗೂ ಅತಿಥಿ ಕಲಾವಿದರ ಸಹಕಾರದಲ್ಲಿ  ಯಕ್ಷಗಾನ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಎಮ್.ಪಿ.ಭಂಡಾರಿಯವರು ಅಚ್ಚುಕಟ್ಟಾಗಿ ನಿಭಾಯಿಸಿದರು. 
                
 
 
ವರದಿ.ಡಾ.ಶಿವಾನಂದ.ವಿ.ನಾಯಕ.    

Read These Next

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...