ಕಾರವಾರ ಸಾಗರಮಾಲಾ ಯೋಜನೆ; ವಿಚಾರಣೆ ಏ.2ಕ್ಕೆ ಮುಂದೂಡಿಕೆ

Source: S O News Service | By SahilOnline Staff | Published on 26th February 2020, 10:03 PM | Coastal News | Incidents |

ಕಾರವಾರ: ಸಾಗರಮಾಲಾ ಯೋಜನೆಯಡಿ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಗೆ ಸಂಬಂಧಿಸಿದಂತೆ ಹೈಕೋರ್ಟ್‍ನಲ್ಲಿ ಬುಧವಾರ ವಿಚಾರಣೆ ನಡೆದಿದೆ.

ಈ ವೇಳೆ, ಕಡಲತೀರದಲ್ಲಿ ಯತಾಸ್ಥಿತಿ ಕಾಪಾಡಿರುವ ಕುರಿತು ಬಂದರು ಇಲಾಖೆ ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದೆ. ಅಲ್ಲದೇ, ಯೋಜನೆಗೆ ಪರಿಸರ ಅನುಮತಿ ನೀಡಿರುವುದು ಸರಿಯಾಗಿದೆ ಎಂದು ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದ (ಎಸ್‍ಇಐಎಎ) ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. 

ಮುಂದಿನ ವಿಚಾರಣೆ ನಡೆಯುವವರೆಗೂ ತಡೆಯಾಜ್ಞೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ ನ್ಯಾಯಾಲಯ, ವಿಚಾರಣೆಯನ್ನು ಏಪ್ರಿಲ್ 2ರಂದು ನಿಗದಿಗೊಳಿಸಿದೆ. ಸಾಗರಮಾಲಾ ಯೋಜನೆ ಬಂದರು ವಿಸ್ತರಣೆಗೆ ಮೀನುಗಾರರು, ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

Read These Next

ಭಟ್ಕಳ ಶಿರಾಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲೆಯ ಉತ್ತಮ ಆಸ್ಪತ್ರೆ ಪ್ರಶಸ್ತಿ

2019-20ನೇ ಸಾಲಿನ ಆರೋಗ್ಯ ಇಲಾಖೆಯ ಕಾಯಕಲ್ಪ ಕಾರ್ಯಕ್ರಮ ಅನುಷ್ಠಾನ ಯೋಜನೆಯಡಿಯಲ್ಲಿ ಶಿರಾಲಿ ಸಮುದಾಯ ಆರೋಗ್ಯ ಕೇಂದ್ರವು, ಜಿಲ್ಲೆಯ ...

ಜಿಲ್ಲಾ ಮೀನು ಮಾರಾಟ ಫೆಡರೇಶನ್ ಚುನಾವಣೆ. ರಾಜು ತಾಂಡೇಲ್ ಟೀಮ್ಗೆ ಭರ್ಜರಿ ಗೆಲುವು.

ಕಾರವಾರ : ಕರಾವಳಿಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಉತ್ತರಕನ್ನಡ ಜಿಲ್ಲಾ ಸಹಕಾರ ಮೀನು ಮಾರಾಟ ಫೆಡರೇಶನ್ ಚುನಾವಣೆಯಲ್ಲಿ ಮೀನುಗಾರ ...

ಹಳೆಯ ವೈಷಮ್ಯ; ವ್ಯಕ್ತಿಯ ಕೊಲೆ  

ಭಟ್ಕಳ : ಹಳೆಯ ವೈಷಮ್ಯ ಹಾಗೂ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೊಲೆಗೀಡಾಗಿರುವ ಘಟನೆ ತಾಲೂಕಿನ ಬೆಣಂದೂರು ...