ಶಾಲಾ ಪಠ್ಯ ಪುಸ್ತಕಗಳು ಆರೆಸಸ್ ಮಯ; ಕೇಜ್ರಿವಾಲ್, ಭಗವಂತ್ ಮಾನ್ ಸಹಿತ ಹಲವು ಮುಖಂಡರಿಂದ ಆಕ್ರೋಶ

Source: Vb | By I.G. Bhatkali | Published on 19th May 2022, 1:52 AM | State News | National News |

ಬೆಂಗಳೂರು: ಪಠ್ಯ ಪುಸ್ತಕದಿಂದ ಭಗತ್ ಸಿಂಗ್‌ರಂತಹ ರಾಷ್ಟ್ರ ಪ್ರೇಮಿಗಳ ಅಧ್ಯಾಯಗಳನ್ನು ಕಿತ್ತು ಹಾಕಿ, ಸ್ವಾತಂತ್ರ್ಯ ಹೋರಾಟದಲ್ಲಿ ಯಾವ ಪಾತ್ರವೂ ಇರದ ಹೆಡಗೆವಾರ್‌ ರಂತಹ ಜಾತಿವಾದಿಗಳನ್ನು ಸೇರಿಸಿರುವುದರ ವಿರುದ್ಧ ದಿಲ್ಲಿ ಮುಖ್ಯಮಂತ್ರಿ ಕೇಜ್ರವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್, ಜೆಡಿಎಸ್ ನಾಯಕ ಎಚ್.ಡಿ. ಕುಮಾರ ಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಕರ್ನಾಟಕ ಸರಕಾರದ ಈ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, “ಭಗತ್ ಸಿಂಗ್ ವಿರುದ್ಧದ ಬಿಜೆಪಿಯ ದ್ವೇಷ ಹೆಚ್ಚಾಗುತ್ತಿದೆ. ಸಣ್ಣ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ವಿಚಾರಗಳು ಯುವಕರಲ್ಲಿ ದೇಶಭಕ್ತಿ ಹೆಚ್ಚಿಸುತ್ತದೆ. ಜನರಲ್ಲಿ ದೇಶಭಕ್ತಿ ಜಾಗೃತ ಗೊಳ್ಳುವುದರಿಂದ ಭಯಗೊಂಡು ಬಿಜೆಪಿ ಈ ರೀತಿ ಮಾಡುತ್ತಿದೆ' ಎಂದು ಟ್ವಿಟ್ ಮಾಡಿದ್ದಾರೆ.

ಪಠ್ಯಪುಸ್ತಕಗಳನ್ನು 'ಪಕ್ಷ ಪುಸ್ತಕ'ಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಕೃತರೂಪವೇ ಆಯ್ದ ಪಠ್ಯಗಳನ್ನು ಮಾಡಿ ಡಿಲೀಟ್ ಮಾಡುವುದು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ. ಮಂಗಳವಾರ ಸರಣಿ ಟ್ವಿಟ್ ಮಾಡಿರುವ ಅವರು, ಬಿಜೆಪಿಗರು ಮತ್ತು ಬ್ರಿಟಿಷರು ಇಬ್ಬರೂ ಒಂದೇ, ಒಡೆದು ಆಳುವುದೇ ಇವರ ನೀತಿ ಮತ್ತು ಧರ್ಮ. ಬ್ರಿಟಿಷ್ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ.

ಜನರ ಸ್ವಾತಂತ್ರ್ಯವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ' ಎಂದು ವಾಗ್ದಾಳಿ ನಡೆಸಿದ್ದಾರೆ.ಈ ಕುರಿತಂತೆ ಮಂಗಳವಾರ ದಿಲ್ಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ನಾಗಪುರ ಯುನಿವರ್ಸಿಟಿಯ ಅಜೆಂಡಾವನ್ನು ಪಠ್ಯ ಪುಸ್ತಕದಲ್ಲಿ ತರಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಶಿಕ್ಷಣವನ್ನು ಕೇಸರೀಕರಣ ಮಾಡಲಾಗುತ್ತಿದೆ. ಮುಗ್ಧ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಭವಿಷ್ಯದಲ್ಲಿ ಭಯಾನಕ ವಾತಾವರಣ ಸೃಷ್ಟಿಮಾಡಲು ಹುನ್ನಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮಂಗಳವಾರ ಸರಣಿ ಟ್ವಿಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ಭಗತ್ ಸಿಂಗ್ ಕುರಿತ ಪಾಠವನ್ನು ಪಠ್ಯದಿಂದ ತೆಗೆಯಲು ನಿರ್ಧರಿಸಿರುವುದು ದೇಶವಿರೋಧಿ ಕ್ರಮ. ಇಂದು ಭಗತ್ ಸಿಂಗ್ ಪಾಠ ತೆಗೆದು ಹಾಕುತ್ತಿದ್ದಾರೆ, ನಾಳೆ ಮಹಾತ್ಮಾ ಗಾಂಧಿ ಅವರನ್ನು ತೆಗೆದುಹಾಕುತ್ತಾರೆ' ಎಂದು ಪಠ್ಯಪುಸ್ತಕ ಪರಿಷ್ಕರಣೆಯ ಕುರಿತು ಬೇಸರ ಹೊರಹಾಕಿದ್ದಾರೆ.

ಶಾಲೆಯ ಪಠ್ಯ ಕ್ರಮದಲ್ಲಿ ಲೋಕದ ತೀವ್ರ ಅನುಭವಗಳನ್ನು ಅನಾವರಣ ಗೊಳಿಸುವಂತಹ ಮತ್ತು ಸ್ವಾತಂತ್ರ್ಯದ ಹೋರಾಟ ಮತ್ತು ಹೋರಾಟಗಾರರ ಮಹತ್ವವನ್ನು ತಿಳಿಸುವಂತಹ ಪಠ್ಯಗಳನ್ನು ಕೈಬಿಟ್ಟು, ದುರುದ್ದೇಶ ಮತ್ತು ಅಪ್ಪಟ ಜಾತಿ ಪ್ರೇಮದ ಕಾರಣಕ್ಕೆ ಕೇವಲ ಒಂದು ನಿರ್ದಿಷ್ಟ ಜಾತಿಗೆ ಸೇರಿದ ಬರಹಗಾರರ ಪಠ್ಯಗಳನ್ನು ಅಳವಡಿಸಲು ಹೊರಟಿರುವುದು ವಿಪರ್ಯಾಸದ ಸಂಗತಿ' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ.

“ಬ್ರಿಟಿಷರ ನೇಣುಗಂಬವನ್ನೇ ಅಣಕಿಸಿದಂತಹ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್, ಇಡೀ ಜಗತ್ತಿಗೇ ಜ್ಞಾನದ ಬೆಳಕಾಗಬಲ್ಲ ಬಸವಣ್ಣನವರ ವಚನಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಭಾಷೆ ಮತ್ತು ದಟ್ಟವಾದ ಅನುಭವದ ಸ್ಪರ್ಶ ನೀಡಿದ ಪಿ. ಲಂಕೇಶರ ಬರಹಗಳು ಮತ್ತು ವೈಚಾರಿಕತೆಗೆ ಹೆಸರಾಗಿದ್ದ ಎ.ಎನ್. ಮೂರ್ತಿರಾಯರ ಬರಹಗಳಿಗೆ ಕತ್ತರಿ ಹಾಕಿರುವುದು, ಸರಕಾರದ ಅಜ್ಞಾನ ಮತ್ತು ಅಯೋಗ್ಯತನದ ಸಂಕೇತವಾಗಿದೆ' ಎಂದು ಟೀಕಿಸಿದ್ದಾರೆ.

ಭಗತ್ ಸಿಂಗ್ ಅವರನ್ನು ಬಿಜೆಪಿಯು ಇಷ್ಟೊಂದು ದ್ವೇಷಿಸುವುದಕ್ಕೆ ಕಾರಣವೇನು? ಪಠ್ಯಪುಸ್ತಕದಿಂದ ಅವರ ಪಠ್ಯವನ್ನು ತೆಗೆಯುವ ನಿರ್ಧಾರವು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನವಾಗಿದೆ. ದೇಶವು ಇದನ್ನು ಸಹಿಸುವುದಿಲ್ಲ. ಬಿಜೆಪಿ ಸರಕಾರವು ತನ್ನ ನಿರ್ಧಾರವನ್ನು ಹಿಂಪಡೆಯಲೇಬೇಕು.
ಅರವಿಂದ ಕೇಜ್ರಿವಾಲ್, ದಿಲ್ಲಿ ಸಿಎಂ

ಮಹಾನ್ ರಾಷ್ಟ್ರಪ್ರೇಮಿ, ಬ್ರಿಟಿಷರಿಗೆ ಸಿಂಹಸಪ್ರ ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್ ಭಗತ್ ಸಿಂಗ್ ಅವರ ಪಠ್ಯಕ್ಕೆ ಕೊಕ್ ಕೊಟ್ಟು, ಆರೆಸ್ಸೆಸ್ ಸಂಸ್ಥಾಪಕ ಹೆಡಗೆವಾರ್ ಕುರಿತ ಮಾಹಿತಿಯನ್ನು ಪಠ್ಯಕೆ ತುರುಕು ತಿರುವುದು ಬಿಜೆಪಿ ಮತ್ತವರ ಪಟಾಲಂನ ವಿಕೃತಿಯ ಪರಾಕಾಷ್ಠೆಯಾಗಿದೆ. ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. 'ಆಪರೇಷನ್ ಕಮಲ'ದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಸ್ವಘೋಷಿತ ಡೋಂಗಿ ರಾಷ್ಟ್ರ ಭಕ್ತರು' ಇನ್ನೇನು ಮಾಡಲು ಸಾಧ್ಯ
ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ

ಆರೆಸಸ್ ಸಂಸ್ಥಾಪಕ ಕೇಶವ ಬಲರಾಮ ಹೆಡಗೆವಾರ್ ದೇಶದಲ್ಲಿ ಕೋಮು ಭಾವನೆ ಬೆಳೆಸಿದ ವ್ಯಕ್ತಿ. ಸ್ವಾತಂತ್ರ್ಯ ಹೋರಾಟ ಗಾರನೇ ಅಲ್ಲ, ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿಲ್ಲ. ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ಧ ವಾಗಿದ್ದವರು, ಧರ್ಮ ಸಂಘಟನೆಯ ಮುಖ್ಯಸ್ಥರಾಗಿ ದವರು. ಸ್ವಾತಂತ್ರ್ಯ ಪ್ರೇಮಿ ಭಗತ್ ಸಿಂಗ್, ನಾರಾಯಣ ಗುರು, ಕುವೆಂಪುರವರ ವಿಚಾರಗಳನ್ನು ಕೈ ಬಿಟ್ಟಿರುವುದನ್ನು ಒಪ್ಪಲು ಸಾಧ್ಯವಿಲ್ಲ.
ಬಿ.ಕೆ. ಹರಿಪ್ರಸಾದ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...