ಕೇರಳ: ದೇಶದ ಮೊದಲ 'ಮಂಕಿಪಾಕ್ಸ್' ರೋಗಿ ಗುಣಮುಖ

Source: The New Indian Express | By MV Bhatkal | Published on 30th July 2022, 11:53 PM | National News |

ತಿರುವನಂತಪುರಂ: ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡು, ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.
ಕೊಲ್ಲಂನಿಂದ ಬಂದಿದ್ದ 35 ವರ್ಷದ ವ್ಯಕ್ತಿಯನ್ನು ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದ್ದರಿಂದ  ರಾಷ್ಟ್ರೀಯ ವೈರಾಣು ಸಂಸ್ಥೆ ಸೂಚನೆಯಂತೆ 72 ಗಂಟೆಯಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಎರಡು ಬಾರಿಯೂ ಎಲ್ಲಾ ಸ್ಯಾಂಪಲ್ ಗಳಲ್ಲಿ ನೆಗೆಟಿವ್ ವರದಿಯಾಗಿದೆ. ರೋಗಿ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದ ಮೇಲಿನ ದುದ್ದುಗಳು ಸಂಪೂರ್ಣವಾಗಿ ಗುಣಮುಖವಾಗಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆತನ ಕುಟುಂಬ ಸದಸ್ಯರ ಸ್ಯಾಂಪಲ್ ಪರೀಕ್ಷೆ ಫಲಿತಾಂಶದಲ್ಲೂ ನೆಗೆಟಿವ್ ವರದಿಯಾಗಿದೆ.  ಪ್ರಸ್ತುತ ಪಾಸಿಟಿವ್ ಕಾಣಿಸಿಕೊಂಡಿದ್ದ ಇತರ ಇಬ್ಬರ ಆರೋಗ್ಯವೂ ಸುಧಾರಿಸಿದೆ. ಇದೇ ರೀತಿಯಲ್ಲಿ ರೋಗ ತಡೆ ಕ್ರಮಗಳು ಮುಂದುವರೆಯಲಿವೆ ಎಂದು  ಸಚಿವರು ಹೇಳಿದ್ದಾರೆ. ವಿದೇಶದಿಂದ ಕೇರಳಕ್ಕೆ ಮರಳಿದ್ದ ಕೊಲ್ಲಂ ನಿವಾಸಿಗೆ ಜುಲೈ 14 ರಂದು ಮಂಕಿಪಾಕ್ಸ್ ಲಕ್ಷಣಗಳು ಹಾಗೂ ಪಾಸಿಟಿವ್  ಕಂಡುಬಂದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...