ಪಿಎಫ್‌ಐ ಪ್ರತಿಭಟನೆ ಸಂದರ್ಭ ಸಾರ್ವಜನಿಕ ಸೊತ್ತಿಗೆ ಹಾನಿ; 5.20 ಕೋ.ರೂ. ಠೇವಣಿ ಇರಿಸಲು ಕೇರಳ ಹೈಕೋರ್ಟ್‌ ಆದೇಶ

Source: Vb | By I.G. Bhatkali | Published on 30th September 2022, 9:58 AM | National News |

ತಿರುವನಂತಪುರ: ಕಳೆದ ವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಡೆಸಿದ ದಾಳಿಯನ್ನು ಖಂಡಿಸಿ ನಡೆದ ಪ್ರತಿಭಟನೆ ಸಂದರ್ಭ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗೆ ಉಂಟು ಮಾಡಿದ ಹಾನಿಯ ವೆಚ್ಚವನ್ನು ಭರಿಸಲು 5.20 ಕೋಟಿ ರೂ. ಠೇವಣಿ ಇರಿಸುವಂತೆ ಕೇರಳ ಉಚ್ಚ ನ್ಯಾಯಾಲಯ ಗುರುವಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಕ್ಕೆ ನಿರ್ದೇಶಿಸಿದೆ.

ಭಯೋತ್ಪಾದನೆ ಚಟುವಟಿಕೆಯ ಆರೋಪದಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಅಡಿ ಕೇಂದ್ರ ಸರಕಾರ ಪಾಪ್ಯುಲರ್ ಫ್ರಂಟ್ ಆಫ್ 0 7 ಇಂಡಿಯಾವನ್ನು 5 ವರ್ಷಗಳಿಗೆ ನಿಷೇಧ ವಿಧಿಸಿದ ಒಂದು ದಿನದ ಬಳಿಕ ಕೇರಳ ಹೈಕೋರ್ಟ್‌ನ ಈ ಆದೇಶ ಹೊರ ಬಿದ್ದಿದೆ. ಕಳೆದ ವಾರ ಕರೆ ನೀಡಲಾಗಿದ್ದ ಪ್ರತಿಭಟನೆ ಸಂದರ್ಭ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾವನ್ನು ಬೆಂಬಲಿಸಿದ ಪ್ರತಿಭಟನಕಾರರು ಕೋಝಿಕ್ಕೋಡ್, ವಯನಾಡ್, ತಿರುವನಂತಪುರ, ಆಲಪ್ಪುಳ, ಪಂದಳಂ, ಕೊಲ್ಲಂ, ತ್ರಿಶೂರು ಹಾಗೂ ಕಣ್ಣೂರಿನಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯ ಬಸ್‌ಗಳ ಕಿಟಕಿಗಳಿಗೆ ಹಾನಿ ಉಂಟು ಮಾಡಿದ್ದರು. ಕೋಝಿಕ್ಕೋಡ್‌ನಲ್ಲಿ ಬಸ್ ಚಾಲಕನಿಗೆ ಗಾಯವಾಗಿತ್ತು.

ಹಿಂಸಾತ್ಮಕ ಪ್ರತಿಭಟನೆ ಹಿನ್ನೆಲೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರ ವಿರುದ್ಧ ಕೇರಳ ಉಚ್ಚ ನ್ಯಾಯಾಲಯ ಸೆಪ್ಟೆಂಬರ್ 23ರಂದು ನ್ಯಾಯಾಂಗ ನಿಂದನೆ ಕಲಾಪವನ್ನು ಆರಂಭಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳವಾರ ಉಚ್ಚ ನ್ಯಾಯಾಲ ಯ ವನ್ನು ಸಂಪರ್ಕಿಸಿ ಪ್ರತಿಭಟನೆ ಸಂದರ್ಭ ಸಂಸ್ಥೆಗೆ ಉಂಟಾದ ಹಾನಿಗೆ ಪರಿಹಾರವಾಗಿ 5.06 ಕೋಟಿ ರೂಪಾಯಿ ನೀಡುವಂತೆ ಕೋರಿತ್ತು.

ಈ ಮನವಿಯನ್ನು ನ್ಯಾಯಮೂರ್ತಿಗಳಾದ ಎ.ಕೆ. ಜಯ ಶಂಕರನ್ ನಂಬಿಯಾರ್ ಹಾಗೂ ಮುಹಮ್ಮದ್ ನಿಯಾಸ್ ಸಿ.ಪಿ. ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಂಬಲಿಗರಿಂದ ಪ್ರಜೆಗಳಿಗೆ ಗಾಯಗಳಾಗಲು ಹಾಗೂ ಸಾರ್ವಜನಿಕ, ಖಾಸಗಿ ಸೊತ್ತುಗಳಿಗೆ ಹಾನಿ ಉಂಟಾಗಲು ಪಿಎಫ್‌ಐ ಹಾಗೂ ಅದರ ಪ್ರಧಾನ ಕಾರ್ಯದರ್ಶಿ ಸಂಪೂರ್ಣವಾಗಿ ಹಾಗೂ ನೇರ ಹೊಣೆ ಎಂದು ಅಭಿಪ್ರಾಯಿಸಿತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...