ನಿಪಾಹ್ ವೈರಸ್: ಕೇರಳದ ನಾಲ್ಕು ಜಿಲ್ಲೆಗಳ ಪ್ರವಾಸ ಬೇಡ

Source: sonews | By Staff Correspondent | Published on 23rd May 2018, 10:22 PM | State News | National News | Don't Miss |

ತಿರುವನಂತಪುರ: ನಿಪಾಹ್ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಕೇರಳ ಸರಕಾರ, ರಾಜ್ಯದ ಉತ್ತರ ಜಿಲ್ಲೆಗಳಾದ ಕೋಯಿಕ್ಕೋಡ್, ಮಲಪ್ಪುರಂ, ವಯನಾಡ್ ಹಾಗೂ ಕಣ್ಣೂರಿಗೆ ಭೇಟಿ ನೀಡದಂತೆ ಪ್ರವಾಸಿಗಳಲ್ಲಿ ವಿನಂತಿಸಿದೆ. ಪ್ರವಾಸಿಗರು ರಾಜ್ಯದ ಯಾವುದೇ ಭಾಗಕ್ಕೆ ಭೇಟಿ ನೀಡುವುದು ಸುರಕ್ಷಿತ. ಆದರೆ, ಹೆಚ್ಚುವರಿ ಎಚ್ಚರಿಕೆ ಅನುಸರಿಸಬೇಕು. ಈ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ಕಾರ್ಯದರ್ಶಿ ರಾಜೀವ್ ಸದಾನಂದನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ಕೆಲವು ನಿಪಾಹ್ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಎಲ್ಲ ಪ್ರಕರಣಗಳು ಒಂದೇ ಕುಟುಂಬದಲ್ಲಿ ಕಂಡು ಬಂದಿದೆ ಎಂದು ಅವರು ಹೇಳಿದ್ದಾರೆ.

 ಅತ್ಯಧಿಕ ಪ್ರಕರಣಗಳು ವರದಿಯಾಗಿರುವ ಕೋಝಿಕೋಡ್‌ನಲ್ಲಿ ಹಾಗೂ ನೆರೆಯ ಜಿಲ್ಲೆಗಳಾದ ಮಲಪ್ಪುರಂ, ವಯನಾಡ್ ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ನಿಪಾಹ್ ವೈರಸ್ ಸೋಂಕಿನ ಬಗ್ಗೆ ಸರಕಾರ ನಿಗಾ ವಹಿಸಿದೆ ಎಂದು ಅವರು ತಿಳಿಸಿದ್ದಾರೆ. ವರದಿಯಾಗಿರುವ ಪ್ರಕರಣಗಳನ್ನು ನಿರ್ವಹಿಸಲು ಆರೋಗ್ಯ ಇಲಾಖೆ ಪರಿಣಾಮಕಾರಿ ಹೆಜ್ಜೆಗಳನ್ನು ಇರಿಸಿದೆ. ಈ ವ್ಯಕ್ತಿಗಳ ಸಂಪರ್ಕವನ್ನು ಪತ್ತೆ ಹಚ್ಚುವ ಮೂಲಕ ನಿಗಾ ವಹಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಈ ನಡುವೆ ಆ್ಯಂಟಿ ವೈರಲ್ 2,000 ರೆಬಾವಿರಿನ್ ಟ್ಯಾಬ್ಲೆಟ್‌ಗಳು ಕೋಝಿಕೋಡ್‌ಗೆ ತಲುಪಿದೆ. ಇನ್ನು ಕೆಲವೇ ದಿನಗಳಲ್ಲಿ 8000 ಟ್ಯಾಬ್ಲೆಟ್‌ಗಳನ್ನು ಪೂರೈಕೆ ಮಾಡಲಾಗುವುದು ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ನಿಪಾಹ್ ವೈರಸ್ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ ಬಳಿಕ ಸೋಂಕಿಗೆ ಒಳಗಾಗಿ ಮೃತಪಟ್ಟ 31ರ ಹರೆಯದ ನರ್ಸ್ ಲಿನಿ ಪುದುಶ್ಶೇರಿ ಕುಟುಂಬಕ್ಕೆ ಕೇರಳ ಸರಕಾರ 20 ಲಕ್ಷ ರೂ. ಪರಿಹಾರ ಧನ ಘೋಷಿಸಿದೆ. ಕೇರಳದಲ್ಲಿ ನೆಲೆಸುವುದಾದಲ್ಲಿ ಲಿನಿ ಅವರ ಪತಿಗೆ ಸರಕಾರಿ ಉದ್ಯೋಗ ನೀಡುವುದಾಗಿ ಕೂಡ ಸರಕಾರ ಹೇಳಿದೆ. ಮೃತಪಟ್ಟ ಇತರರ ಕುಟುಂಬಕ್ಕೆ 5 ಲಕ್ಷ ಪರಿಹಾರ ಧನವನ್ನು ಸರಕಾರ ಘೋಷಿಸಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...