ಭಟ್ಕಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ - ಖಡಕ್ ಎಚ್ಚರಿಕೆ

Source: SO News | By Laxmi Tanaya | Published on 7th September 2020, 8:52 PM | Coastal News | Don't Miss |

ಭಟ್ಕಳ : ಕೋವಿಡ್ 19 ನಿಯಂತ್ರಣ ಸಂಬಂಧ ಸೋಮವಾರ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ   ಮುಖ್ಯಾಧಿಕಾರಿ ಅಜೇಯ ಭಂಡಾರ್ಕರ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಲಾಯಿತು.

ಜಾಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕರೋನಾ ಪ್ರಕರಣಗಳ ಹತೋಟಿ ಹಾಗೂ ಮುಂಜಾಗ್ರತ ಕ್ರಮವಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ  ಮಾಸ್ಕ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ  ಇರುವವರಿಗೆ  ದಂಡ ವಿಧಿಸಲಾಯಿತು. ಈ ವೇಳೆ ಮಾಸ್ಕ್ ಧರಿಸುವಂತೆ ತಿಳಿ ಹೇಳಿ  ಮಾಸ್ಕ್ ವಿತರಿಸಲಾಯಿತು.

ಭಟ್ಕಳ ಸಹಾಯಕ  ಆಯುಕ್ತರ ನಿರ್ದೇಶನದ ಮೇರೆಗೆ ಆರೋಗ್ಯ ನಿರೀಕ್ಷಕರಾದ ವಿನಾಯಕ  ನಾಯ್ಕ   ಹಾಗೂ ಸಹಾಯಕ ಪೊಲೀಸ್ ಉಪ ನಿರೀಕ್ಷಕರು ರವಿ ನಾಯ್ಕ ಇವರ ತಂಡದೊಂದಿಗೆ ಈ ಕಾರ್ಯಾಚರಣೆ ನಡೆಸಿದರು

ಜಾಲಿ ಮುಖ್ಯರಸ್ತೆ, ತಂಜೀಮ್ ರಸ್ತೆ, ಅಮಿನುದ್ದೀನ್ ರಸ್ತೆ ಸೇರಿದೆಡೆ ವಿವಿದೆಡೆ ವಾಹನ ಸವಾರರಿಗೆ, ನಾಗರಿಕರಿಗೆ ಜಾಗೃತಿ ಮೂಡಿಸಲಾಯಿತು. ಒಟ್ಟು 1800 ರೂ.ದಂಡ ವಸೂಲಿ ಮಾಡಲಾಯಿತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...