ಕಾರವಾರ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Source: S O News service | By I.G. Bhatkali | Published on 23rd October 2021, 3:49 PM | Coastal News |

ಕಾರವಾರ : ಸಣ್ಣ ಸಂಸ್ಥಾನದ ರಾಣಿ ಕಿತ್ತೂರು ಚೆನ್ನಮ್ಮ ಬೃಹತ್ ಬ್ರಿಟಿμï ಸೈನ್ಯವನ್ನು ಎದುರಿಸಲು ತೋರಿದ ಧೈರ್ಯ ಮತ್ತು ಸಾಹಸ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ದೊಡ್ಡ ಮೈಲಿಗಲ್ಲು ಎಂದು ಅಪರ ಜಿಲ್ಲಾಧಿಕಾರಿ ಎಚ್ ಕೆ ಕೃಷ್ಣಮೂರ್ತಿ ಅಭಿಪ್ರಾಯ ಪಟ್ಟರು.

ಶನಿವಾರ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎವಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ  ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ವಿಶೇಷ ಅಥಿತಿಯಾಗಿ ಆಗಮಿಸಿ ಮಾತನಾಡಿ ಬ್ರಿಟಿμïರ ವಿರುದ್ಧ ಹೋರಾಡಿದ ಮೊಟ್ಟಮೊದಲ ರಾಣಿ ಕಿತ್ತೂರು ಚೆನ್ನಮ್ಮ, ಅವರ ಸ್ವಾಭಾಮಾನದ ಬದುಕು ನಮ್ಮೆಲ್ಲರಿಗೂ ಮಾದರಿ ಎಂದರು.

ನಗರಸಭೆಯ ಉಪಾಧ್ಯಕ್ಷ ಪ್ರಕಾಶ್ ಪಿ ನಾಯ್ಕ್  ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ- ಸ್ಥೈರ್ಯ ಎಲ್ಲರಿಗೂ ಮಾದರಿ,  ಅವರಿಂದ ಸ್ಫೂರ್ತಿ ಪಡೆದು ಇಂದಿನ ಯುವಜನತೆ ದೇಶಕ್ಕೆ ಕೀರ್ತಿ ತರುವಂತಾಗಲಿ ಎಂದರು.
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ನಿವೃತ್ತ ಅಧ್ಯಾಪಕ  ವೆಂಕಟೇಶ ಗಿರಿ ಉಪನ್ಯಾಸ ನೀಡಿ,  ನಾವೂ ಕೇವಲ ವ್ಯಕ್ತಿಗಳಾಗಿ ಬದುಕಬಾರದು ವ್ಯಕ್ತಿತ್ವವಾಗಿ ರೂಪುಗೊಳ್ಳಬೇಕು. ಭಿಮಾನದ ಪ್ರತೀಕವಾಗಿ ಬದುಕಿನ ಕೊನೆಯವರೆಗೂ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷ್‍ರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ವ್ಯಕ್ತಿತ್ವ  ನಮ್ಮೆಲ್ಲರಿಗೂ ಸ್ವೂರ್ತಿ ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್ ಎಫ್ ನರೋನಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಜಿ ನಾಯ್ಕ್, ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲೆ ವಿಜಯಾ ಡಿ ನಾಯ್ಕ್ ಹಾಗೂ ಸಿಬ್ಬಂದಿ, ಮತ್ತಿತರು ಉಪಸ್ಥಿತಿತರಿದ್ದರು.


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...