ಕೋಲಾರ: ಸರ್ಕಾರಿ ನೌಕರರಿಗೆ ಶೇ.30 ರಷ್ಟು ತಾತ್ಕಾಲಿಕ ಪರಿಹಾರಕ್ಕೆ ಆಗ್ರಹ

Source: shabbir | By Arshad Koppa | Published on 18th August 2017, 1:50 PM | State News | Guest Editorial |

ಕೋಲಾರ:- ವೇತನ ಆಯೋಗದ ವರದಿಗೂ ಮುನ್ನಾ ನೌಕರರಿಗೆ ಶೇ.30 ರಷ್ಟು ತಾತ್ಕಾಲಿಕ ಪರಿಹಾರ ನೀಡಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್ ಆಗ್ರಹಿಸಿದರು.
ಜಿಲ್ಲಾ ನೌಕರರ ಭವನದಲ್ಲಿ ನಡೆದ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ದೇಶದ 27 ರಾಜ್ಯಗಳಲ್ಲಿ ಈಗಾಗಲೇ ಕೇಂದ್ರ ಸರ್ಕಾರದ ಸಮಾನ ವೇತನ ಜಾರಿ ಮಾಡಲಾಗಿದೆ ಎಂದರು.
ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಲ್ಲಿ ನೌಕರರಿಗೆ ಅನ್ಯಾಯವಾಗಿದ್ದು, ಕೆಲವು ನೌಕರರಿಗೆ 12 ಸಾವಿರದವರೆಗೂ ಮೂಲ ವೇತನದಲ್ಲೇ ವ್ಯತ್ಯಾಸವಿದೆ ಎಂದು ತಿಳಿಸಿದರು.
7ನೇ ವೇತನ ಆಯೋಗದ ವರದಿ ನೀಡಿಕೆಗಾಗಿ ಸರ್ಕಾರ ಸಮಿತಿ ರಚಿಸಿದೆ, ಈ ಸಮಿತಿ ಮುಂದೆ ನೌಕರರು ವೇತನ ತಾರತಮ್ಯದ ಕುರಿತು ಇರುವ ದಾಖಲೆಗಳೊಂದಿಗೆ ಇಲಾಖಾವಾರು ಪ್ರಶ್ನಾವಳಿಗಳಿಗೆ ಉತ್ತರಿಸಿ ಸಲ್ಲಿಸಲು ಅವರು ಕೋರಿದರು.
ವೇತನ ಆಯೋಗದ ವರದಿ ಶೀಘ್ರ ನೀಡಿಕೆಗೆ ರಾಜ್ಯ ನೌಕರರ ಸಂಘ ಒತ್ತಡ ಹಾಕಿದೆ, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಈಗಾಗಲೇ ಹಲವಾರು ಬಾರು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.
ಆ.29 ರಂಗಮಂದಿರದಲ್ಲಿ
ಪ್ರತಿಭಾ ಪುರಸ್ಕಾರ
ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಶಿಕ್ಷಕರ ಗೆಳೆಯರ ಬಳಗದಿಂದ ಇದೇ ಆ.29 ರಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಅಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿ ಶಾಲೆಯ ಇಬ್ಬರು ಶಿಕ್ಷಕರಿಗೆ ಒಒಡಿ ಸೌಲಭ್ಯ ಒದಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಮಾಡುವುದಾಗಿ ತಿಳಿಸಿದರು.
ಜಿಲ್ಲೆಯ 1 ರಿಂದ 10ನೇ ತರಗತಿ ಮಕ್ಕಳಿಗೆ ವಿವಿಧ ಕಂಪನಿಗಳ ಸಹಯೋಗದಲ್ಲಿ ನೌಕರರ ಸಂಘ ಹಾಗೂ ಶಿಕ್ಷಕರ ಗೆಳೆಯರ ಬಳಗ ಉಚಿತ ನೋಟ್ ಪುಸ್ತಕ ವಿತರಿಸುವ ಕಾರ್ಯಕ್ರಮ ನಡೆಸುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಲು ಕೋರಿದರು.
ಕಾಲೇಜು ಶಿಕ್ಷಣ ಇಲಾಖೆಯ ಲಕ್ಷ್ಮೀಪತಿ, ಸಹಶಿಕ್ಷಕರ ಸಂಘದ ಶಂಕರಪ್ಪ, ಮುಖ್ಯ ಶಿಕ್ಷಕರ ಸಂಘದ ಆರ್.ಶ್ರೀನಿವಾಸನ್, ಉರ್ದು ಶಿಕ್ಷಕರ ಸಂಘದ ಖದೀರ್ ಮತ್ತಿತರರು ಮಾತನಾಡಿ, ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ವೇತನ ಆಯೋಗದ ಮೇಲೆ ಒತ್ತಡ ತರಲು ನಮ್ಮ ರಾಜ್ಯ ಸಂಘಗಳು ನಿರ್ಧರಿಸಿದೆ ಎಂದು ತಿಳಿಸಿದರು.
ಸಭೆಯಲ್ಲಿ ನೌಕರರ ಸಂಘದ ಗೌರವಾಧ್ಯಕ್ಷ ರವಿಚಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಬಿ.ಅಶೋಕ್, ಖಜಾಂಚಿ ಎಸ್.ಚೌಡಪ್ಪ, ಉಪಾಧ್ಯಕ್ಷರಾದ ಖಾದರ್ ಇಲಾಹಿ, ನಂಜುಂಡರೆಡ್ಡಿ, ಸಂಘಟನಾ ಕಾರ್ಯದರ್ಶಿ ಶ್ರೀನಿವಾಸಮೂರ್ತಿ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಇ.ಶ್ರೀನಿವಾಸಗೌಡ, ವಿವಿಧ ತಾಲ್ಲೂಕು ಅಧ್ಯಕ್ಷರಾದ ನಾಗಾನಂದ್, ಗುಂಡಪ್ಪ, ವೃಂದ ಸಂಘಗಳ ಖಜಾನೆ ಶಂಕರ್, ವಿಜಯಮ್ಮ, ಭಾರತಿ, ಶೈಲಾ,ಇಂಚರನಾರಾಯಣಸ್ವಾಮಿ, ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ಸಿ.ಎಲ್.ಶ್ರೀನಿವಾಸಲು ಮತ್ತಿತರರಿದ್ದರು. 

ಕೋಲಾರ ಜಿಲ್ಲಾ ನೌಕರರ ಸಂಘದ ಕಚೇರಿಯಲ್ಲಿ ನಡೆದ ನೌಕರರ ಸಭೆಯಲ್ಲಿ ವೇತನ ತಾರತಮ್ಯ ನಿವಾರಣೆಗಾಗಿ ಕೂಡಲೇ ಶೇ.30 ರಷ್ಟು ತಾತ್ಕಾಲಿಕ ಪರಿಹಾರ ನೀಡುವಂತೆ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್ ಆಗ್ರಹಿಸಿದರು.  

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...