ಕೋಲಾರ: ಅಕ್ರಮ ಪಡಿತರ ಗೋಧಿ, ರಾಗಿ ಅಕ್ರಮ ದಾಸ್ತಾನು ಹರಾಜು 

Source: shabbir | By Arshad Koppa | Published on 25th July 2017, 8:28 AM | State News | Guest Editorial |

ಕೋಲಾರ, ಜುಲೈ 24 :ಬಿ.ಎನ್. ರಾಘವೇಂದ್ರ ಬಿನ್ ನಾರಾಯಣ ಶೆಟ್ಟಿರವರ ಅಂಗಡಿ ಮಳಿಗೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಪಡಿತರ ಗೋಧಿ 458 ಕೆ.ಜಿ ಮತ್ತು ರಾಗಿ 1052 ಕೆ.ಜಿ. ಯನ್ನು ಕರ್ನಾಟಕ ಅಗತ್ಯ ವಸ್ತುಗಳ ಕಾಯ್ದೆ 1955 ರ ಸೆಕ್ಷನ್ 6ಎ ರಂತೆ ದಾಸ್ತಾನನ್ನು ಮುಕ್ತ ಮಾರುಕಟ್ಟೆಯಲ್ಲಿ ಹರಾಜು ಮಾಡಲು ಮಾನ್ಯ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಆದೇಶದಲ್ಲಿ ಆದೇಶಿಸಿರುತ್ತಾರೆ.
      ದಿನಾಂಕ 27-07-2017 ರಂದು ಕೋಲಾರದ ಟಿ.ಎ.ಪಿ.ಸಿ.ಎಂ.ಎಸ್. ಸಗಟು ಮಳಿಗೆ, ಅಮ್ಮವಾರಿಪೇಟೆಯಲ್ಲಿ ಮುಕ್ತ ಹರಾಜನ್ನು ಹಮ್ಮಿಕೊಳ್ಳಲಾಗಿದ್ದು, ಎ.ಪಿ.ಎಂ.ಸಿ ಪರವನಗಿದಾರರು ಹರಾಜಿನಲ್ಲಿ ಪಾಲ್ಗೊಳ್ಳಬೇಕೆಂದು ಆಹಾರ ಪರಿವೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗವಿಕಲರಿಂದ ಅರ್ಜಿ ಅಹ್ವಾನ
ಕೋಲಾರ, ಜುಲೈ 24:    2017-18 ನೇ ಸಾಲಿಗೆ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ “ಆಧಾರ ಯೋಜನೆ” ಯಡಿಯಲ್ಲಿ ಅಂಗವಿಕಲರಿಂದ ಅರ್ಜಿಗಳನ್ನು ಅಹ್ವಾನಿಸಿಲಾಗಿದೆ. 
    ಅರ್ಜಿ ನಮೂನೆಗಳನ್ನು ತಾಲ್ಲೂಕು ಪಂಚಾಯತಿಗಳಲ್ಲಿರುವ  ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡ್ಲೂ.) ಗಳಿಂದ ಪಡೆಯಬಹುದಾಗಿದೆ. ಹಾಗೂ ಇಲಾಖಾ ವೆಬ್‍ಸೈಟ್ ತಿತಿತಿ.ಜisಚಿbಟeತಿeಟಜಿಚಿಡಿe.ಛಿom ನಲ್ಲಿ ಅರ್ಜಿಗಳನ್ನು ಪಡೆಯಬಹುದು. 
    ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕು ಪಂಚಾಯತಿಯಲ್ಲಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡ್ಲೂ.) ರವರಿಗೆ ಸಲ್ಲಿಸುವುದು. 
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-08-2017 ಆಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ 08152-228250, 9164088120, 8904317589, 8095024543, 9916952966, 8711924638 ಸಂಪರ್ಕಿಸಬಹುದಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...