ಕೋಲಾರ: ಬಾಗಲಕೋಟೆಯಲ್ಲಿ ಹೈನುಗಾರಿಕೆ ತರಬೇತಿ ಶಿಬಿರ

Source: shabbir | By Arshad Koppa | Published on 7th July 2017, 2:53 PM | State News | Tour |

ಕೋಲಾರ, ಜುಲೈ 05 :    ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಮೂರು ದಿನಗಳ ಹೈನುಗಾರಿಕೆ ತರಬೇತಿ ಶಿಬಿರವನ್ನು ಬಾಗಲಕೋಟೆಯಲ್ಲಿ ಜುಲೈ ಮತ್ತು ಆಗಸ್ಟ್‍ನಲ್ಲಿ ನಡೆಯಲಿದೆ. 
    ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಸೇರಿದಂತೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು. ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ಸೇರಿದಂತೆ ಮುಂತಾದವರು ತಮ್ಮ ಹೆಸರು, ವಿಳಾಸ, ದೂರವಾಣ  ಸಂಖ್ಯೆ ಇತ್ಯಾದಿ ವಿವಗಳನ್ನು ನೋಂದಾಯಿಸಿಕೊಳ್ಳಬೇಕಾಗಿರುತ್ತದೆ. 
    ನೋಂದಾಯಿಸಿಕೊಳ್ಳಲು ಜು.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ ಇವರನ್ನು 9482630790 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಕೋಲಾರ:ವಿವಿಧ ಸಂಘಟನೆಗಳ ವತಿಯಿಂದ ಜಾನಪದ ಬೆಳದಿಂಗಳು ಪ್ರಯುಕ್ತ ತತ್ವಪದ ಮತ್ತು ಜಾನಪದ ಗಾಯನ ಕಾರ್ಯಕ್ರಮ

 ಪ್ರತಿ ಹಳ್ಳಿಗಳಲ್ಲಿರುವ ಕಲಾವಿದರುಗಳನ್ನು ಇಲಾಖೆ ಮತ್ತು ಸರ್ಕಾರ ಗುರ್ತಿಸಿ ಪ್ರೋತ್ಸಾಹಿಸಬೇಕಾಗಿದೆ - ಜಿ. ಮುನಿಕೃಷ್ಣ