ಬೆಳ್ಳೂರನ್ನು ಬಯಲು ಬಹಿರ್ದೆಸೆ ಮುಕ್ತ ಮಾಡಲು ಪಣತೊಡಿ: ಸೂಲೂರು ಎಂ.ಆಂಜಿನಪ್ಪ 

Source: shabbir | By Arshad Koppa | Published on 2nd August 2017, 8:09 AM | State News | Guest Editorial |

ಕೋಲಾರ, ಆಗಸ್ಟ್ 01 :    ಬೆಳ್ಳೂರು ಗ್ರಾಮ ಪಂಚಾಯಿತಿಯನ್ನು 14 ದಿನಗಳೊಳಗಾಗಿ ಬಯಲು ಬರ್ಹಿದೆಸೆ ಮುಕ್ತ ಪಂಚಾಯ್ತಿಯನ್ನಾಗಿ ಮಾಡಲು ಪ್ರತಿಯೊಬ್ಬರೂ ಪಣತೊಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಎಂ. ಆಂಜಿನಪ್ಪ ಅವರು ತಿಳಿಸಿದರು. 
    ತಾಲ್ಲೂಕಿನ ಬೆಳ್ಳೂರು ಗ್ರಾಮದ ರಮಾಮಣ  ಕಾಲೇಜಿನಲ್ಲಿ ಇಂದು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಶೌಚಾಲಯಕ್ಕಾಗಿ ಸಮರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 162 ಶೌಚಾಲಯಗಳನ್ನು ನಿರ್ಮಾಣ ಮಾಡುವುದು ಬಾಕಿ ಇದೆ. ಇವುಗಳ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಆಸಕ್ತಿ ತೋರಬೇಕು. ಅದರಂತೆ ಗ್ರಾಮ ಪಂಚಾಯ್ತಿ ಸದಸ್ಯರುಗಳು ತಲಾ 10 ಶೌಚಾಲಯಗಳ ನಿರ್ಮಾಣ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯರುಗಳು 20 ಶೌಚಾಲಯಗಳ ನಿರ್ಮಾಣ ಮಾಡಲು ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದರು. 
ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 139 ಶೌಚಾಲಯಗಳ ನಿರ್ಮಾಣ ಕಾರ್ಯವು ಬಾಕಿ ಉಳಿದಿದೆ. ಗ್ರಾಮ ಪಂಚಾಯ್ತಿ ಸದಸ್ಯರು, ಅಧ್ಯಕ್ಷರು ಜೊತೆಗೂಡಿ 10 ದಿನಗಳೊಳಗಾಗಿ ಪಂಚಾಯಿತಿಯನ್ನು  ಬಯಲು ಬರ್ಹಿದೆಸೆ ಮುಕ್ತವಾಗಿಸಲು ಶ್ರಮಿಸಬೇಕು ಎಂದು ತಿಳಿಸಿದರು.


ಬೆಳಮಾರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾಕಿ ಇರುವ 34 ಶೌಚಾಲಯಗಳನ್ನು ಒಂದು ವಾರದೊಳಗಾಗಿ ನಿರ್ಮಾಣ ಮಾಡಬೇಕು. ಈಗಾಗಲೇ ನರಸಾಪುರ ಬಯಲು ಬರ್ಹಿದೆಸೆ ಮುಕ್ತ ಎಂದು ಘೋಷಣೆ ಮಾಡಲಾಗಿದೆ. ಅದರಂತೆ ನರಸಾಪುರ ಹೋಬಳಿಯಲ್ಲಿ ಆಗಸ್ಟ್ 15 ರೊಳಗಾಗಿ ಬಾಕಿಯಿರುವ 300 ಶೌಚಾಲಯಗಳ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು. 
ತಾಲ್ಲೂಕು ವೈದ್ಯಾಧಿಕಾರಿ ಡಾ|| ಲತಾ ಪ್ರಮೀಳಾ ಅವರು ಮಾತನಾಡಿ, ಆರೋಗ್ಯ ದೃಷ್ಟಿಯಿಂದ, ಆತ್ಮಗೌರವಕ್ಕೋಸ್ಕರ ಎಲ್ಲರೂ ಸ್ವ ಪ್ರೇರಿತರಾಗಿ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಜನರಿಗೆ ಇದರ ಬಗ್ಗೆ ಸೂಕ್ತ ಅರಿವು ಮತ್ತು ಮಾಹಿತಿ ಇಲ್ಲವಾಗಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಶೌಚಾಲಯಗಳ ಅಗತ್ಯತೆ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು. 
ಎ.ಪಿ.ಎಂ.ಸಿ ಸದಸ್ಯರಾದ ಶ್ರೀ ಮಂಜುನಾಥ್ ಅವರು ಮಾತನಾಡಿ, ಜನತೆಯು ಶೌಚಾಲಯಗಳ ನಿರ್ಮಾಣಕ್ಕೆ ಹೆಚ್ಚಿನ ಕಾಳಜಿ ತೋರಿಸುತ್ತಿಲ್ಲ. ಸರ್ಕಾರದ ಸಹಾಯಧನಕ್ಕಾಗಿ ಕಾಯದೆ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಳ್ಳಲು ಎಲ್ಲರೂ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು. 
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಸಿ.ಲಕ್ಷ್ಮೀ ಅವರು ಮಾತನಾಡಿ, ಎಲ್ಲರೂ ಕೈಜೋಡಿಸಿದರೆ ಜಿಲ್ಲೆಯನ್ನು ಬಯಲು ಬರ್ಹಿದೆಸೆ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕೆಂದರು.   ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 15 ಸಾವಿರ ರೂಗಳು ಹಾಗೂ ಇತರೆ ವರ್ಗದವರಿಗೆ  12 ಸಾವಿರ ರೂ ಸಹಾಯಧನ ನೀಡಲಾಗುತ್ತಿದೆ. ಇದನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೂಪಶ್ರೀ ಮಂಜುನಾಥ್,  ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸರೋಜಮ್ಮ, ಉಪಾಧ್ಯಕ್ಷ ಶ್ರೀ ಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಶ್ರೀ ಜಿ.ಮುನಿರಾಜು, ಪಿಡಿಓ ಶ್ರೀ ಸಂಪರಾಜ್, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮಪಂಚಾಯಿತಿ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ನೋಡಲ್ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಮುಂತಾದವರು  ಉಪಸ್ಥಿತರಿದ್ದರು.
    

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...