ಕೋಲಾರ: ಡೆಂಘಿ, ಚಿಕೂನ್‍ಗುನ್ಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಡಾ.ಕೆ.ವಿ.ತ್ರಿಲೋಕ್ ಚಂದ್ರ 

Source: shabbir | By Arshad Koppa | Published on 22nd July 2017, 10:18 AM | State News | Guest Editorial |

ಕೋಲಾರ, ಜುಲೈ 21 :   ಜಿಲ್ಲೆಯಲ್ಲಿ ಇದುವರೆಗೂ 136 ಡೆಂಘಿ ಪ್ರಕರಣಗಳು ಕಂಡುಬಂದಿದ್ದು ಇವುಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
    ನಗರದ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಚಿಕೂನ್‍ಗುನ್ಯಾ ಕಾಯಿಲೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರೆಯಲಾಗಿದ್ದ ಜಿಲ್ಲಾಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
    ಯಾವುದೇ ಮನೆಯಲ್ಲಿ ಧೀರ್ಘ ಕಾಲ ಬಳಸದೆ ತೆರದ ಪಾತ್ರೆ / ಸ್ಥಳಗಳಲ್ಲಿ ನೀರನ್ನು ಸಂಗ್ರಹಿಸಿದ್ದರೆ, ಅದನ್ನು ಬದಲಾಯಿಸಲು ಸೂಚಿಸಿ. ಸೂಚನೆಯನ್ನು ಪಾಲಿಸದೆ ಇದ್ದರೆ ಪ್ರಕರಣವನ್ನು ದಾಖಲಿಸಿ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಮಟ್ಟದಲ್ಲಿ ಶಿಕ್ಷಕರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ನೀಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಡೆಂಗ್ಯೂ ಜ್ವರವು ವೈರಸ್‍ನಿಂದ ಉಂಟಾಗುವ ಕಾಯಿಲೆ. ಇದು ಸೋಂಕು ಹೊಂದಿದ ಈಜಿಪ್ಟ್‍ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತದೆ. ನೀರಿನಲ್ಲಿ ಮೊದಲು ಮೊಟ್ಟೆ-ಲಾರ್ವಾ-ಕ್ಯೂಬಾ-ಸೊಳ್ಳೆ ಹೀಗೆ ಮೊಟ್ಟೆಯಿಂದ ಸೊಳ್ಳೆಯಾಗಿ ಪರಿವರ್ತನೆಯಾಗಲು 10 ದಿನಗಳ ಅವಧಿ ತೆಗೆದುಕೊಳ್ಳುತ್ತದೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ದಿನಗಳ ಕಾಲ ನೀರನ್ನು ನಿಲ್ಲಲು ಬಿಡಬಾರದು ಎಂದು ತಿಳಿಸಿದರು. 
    ಸೊಳ್ಳೆಗಳ ನಿಯಂತ್ರಣ ಮಾಡಲು ನೀರನ್ನು ಶೇಖರಿಸಿಡುವ ಸಿಮೆಂಟ್‍ತೊಟ್ಟಿ, ಡ್ರಮ್, ಬ್ಯಾಕ್‍ರೆಲ್, ಮಣ್ಣಿನ ಮಡಿಕೆ, ಉಪಯೋಗಿಸದ ಒಳಕಲ್ಲು, ತೆಂಗಿನಚಿಪ್ಪು, ಹಾಳಾದ ಟೈರುಗಳಲ್ಲಿ ನೀರು ನಿಲ್ಲದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪೊರದೆಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. 
        ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ವಿನಯ್‍ಗಡ್‍ರವರು ಮಾತನಾಡಿ, ಜಿಲ್ಲೆಯಲ್ಲಿ 3.48 ಲಕ್ಷ ಮನೆಗಳಿವೆ. ನಾವು ಈಗಾಗಲೇ 2 ಲಕ್ಷ ಮನೆಗಳಿಗೆ ಭೇಟಿ ನೀಡಿ ಜನರಿಗೆ ಅರಿವು ಮೂಡಿಸುತ್ತಿದ್ದೇವೆ. ಪ್ರತಿ ವಾರ ನೀರನ್ನು ಬದಲಾಯಿಸಲು ಹಾಗೂ ಬಟ್ಟೆಯನ್ನು ಮುಚ್ಚಿ ನೀರನ್ನು ಸಂಗ್ರಹಿಸಲು ತಿಳಿಸುತ್ತಿದ್ದೇವೆ ಎಂದರು. 
    ಹಳ್ಳಿಹಳ್ಳಿಗೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳನ್ನು ತಂಡಗಳನ್ನಾಗಿ ಮಾಡಿ ಅರಿವು ಮೂಡಿಸುತ್ತಿದ್ದೇವೆ. ಕರಪತ್ರಗಳನ್ನು ಹಂಚುವುದು ಹಾಗೂ ಉಪನ್ಯಾಸ ನೀಡುವ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಲಾರ್ವಾ ಹಳ್ಳಿಗಳಲ್ಲಿ ಕಡಿಮೆ ಇದ್ದು ನಗರ ಪ್ರದೇಶಗಳಲ್ಲಿ ಹೆಚ್ಚಿದೆ. ನಗರಸಭೆಗಳಿಂದ ಪಾಗ್ ಮತ್ತು ಹಬೆಯನ್ನು ಪ್ರತಿ ವಾರ್ಡ್‍ಗೂ ಹಾಕಿಸುವ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು. 

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...