ಕೋಲಾರ:ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ದೀಮಂತ ನಾಯಕ-ಸಚಿವ ಕೆ.ಆರ್.ರಮೇಶ್ ಕುಮಾರ್

Source: shabbir | By Arshad Koppa | Published on 24th August 2017, 8:18 AM | State News | Guest Editorial |

ಕೋಲಾರ, ಆಗಸ್ಟ್ 23 :    ಡಿ.ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದರೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹಲವಾರು ದಿಟ್ಟ ನಿರ್ಣಯಗಳನ್ನು ತೆಗೆದುಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರೆಯುವಂತೆ ಮಾಡಿದರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಅವರು ತಿಳಿಸಿದರು. 


    ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಿ.ದೇವರಾಜ ಅರಸುರವರ 102 ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 
    ದೇವರಾಜ ಅರಸುರವರು ಮೊದಲ ಬಾರಿಗೆ ಹಿಂದುಳಿದ ವರ್ಗಗಳ ಆಯೋಗವನ್ನು ರಚನೆ ಮಾಡುವ ಮೂಲಕ ಪ್ರತಿಯೊಂದು ಹಿಂದುಳಿದ ವರ್ಗಗಳ ಸರ್ವತೋಮುಖ ಬೆಳವಣ ಗೆಗೆ ಅಪಾರ ಕೊಡುಗೆ ನೀಡಿದರು. ಅರಸುರವರಿಗೆ ಹಠ ಇರಲಿಲ್ಲ. ದ್ವೇಷ ಎಂದರೇನು ಎಂಬುವುದೇ ಗೊತ್ತಿರಲಿಲ್ಲ. ಇಂದಿರಾಗಾಂಧಿ ಅವರು ಘೋಷಣೆ ಮಾಡಿದ ಋಣ ಪರಿಹಾರ ಕಾಯ್ದೆಯನ್ನು ಮೊದಲ ಬಾರಿಗೆ ಜಾರಿಗೆ ತಂದ ಕೀರ್ತಿ ಅರಸುರವರಿಗೆ ಸಲ್ಲುತ್ತದೆ ಎಂದರು. 
    ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಭೂ ರಹಿತರಿಗೆ ಭೂಮಿಯನ್ನು ಹಂಚಿಕೆ ಮಾಡಿ ಪ್ರತಿಯೊಬ್ಬರಿಗೂ ಭೂಮಿ ಸಿಗುವ ಹಾಗೆ ಕ್ರಾಂತಿ ಮಾಡಿದ ಮಹಾಪುರಷ ಅರಸು. ಇವರು ಅಧಿಕಾರಕ್ಕೆ ಅಂಟಿಕೊಳ್ಳದೆ ಒಮ್ಮೆ ಕಾಂಗ್ರೆಸ್ ಕರ್ನಾಟಕ ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗಳಿಸಿತು ಎಂಬ ಕಾರಣದಿಂದ ಅರಸುರವರಿಗೆ ಕರ್ನಾಟಕ ವಿಧಾನ ಸಭೆಯಲ್ಲಿ ಬಹುಮತವಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಹೃದಯಿ ಅರಸು ಆಗಿದ್ದರು ಎಂದು ಶ್ಲಾಘಿಸಿದರು. 
    ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಮಾತನಾಡಿ, ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದರು. ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ನಡೆಯುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಬೇಕಿದೆ ಎಂದು ತಿಳಿಸಿದರು. 
    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣ  ಕಟೋಚ್ ಸೆಫೆಟ್, ಉಪವಿಭಾಗಾಧಿಕಾರಿ ಶುಭಾ, ಹಿಂದುಳಿದ ವರ್ಗಗಳ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಗೋಕುಲ್ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಸೂಲೂರು ಎಂ.ಆಂಜಿನಪ್ಪ, ಉಪಾಧ್ಯಕ್ಷರಾದ ಲಕ್ಷ್ಮೀ ಸೇರಿದಂತೆ ಸಮುದಾಯದ ಮುಖಂಡರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...