ಕೋಲಾರ:ಡಿಜಿಟಲ್ ನರ್ವ್ ಸೆಂಟರ್ ಗೆ ಸಚಿವ ರಮೇಶ್ ಕುಮಾರ್ ರಿಂದ ಚಾಲನೆ 

Source: shabbir | By Arshad Koppa | Published on 29th August 2017, 8:25 AM | State News | Special Report |

ಕೋಲಾರ, ಆಗಸ್ಟ್ 27 :    ಕೋಲಾರದ ಕೆ.ಎನ್.ಟಿ.ಬಿ ಸ್ಯಾನಿಟೋರಿಯಂ ಆವರಣದಲ್ಲಿ ಇಂದು ನೂತನವಾಗಿ ಪ್ರಾರಂಭಿಸಲಾಗಿರುವ ಡಿಜಿಟಲ್ ನರ್ವ್ ಸೆಂಟರ್‍ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್. ರಮೇಶ್ ಕುಮಾರ್ ಅವರು ಚಾಲನೆ ನೀಡಿದರು.       
    ಡಿಜಿಟಲ್ ನರ್ವ್ ಸೆಂಟರ್ ಉತ್ತಮ ತಂತ್ರಜ್ಞಾನಗಳನ್ನು ಒಳಗೊಂಡಿತ್ತು. ಸಾರ್ವಜನಿಕರ ಆರೋಗ್ಯ ಸೇವೆಗೆ ಸಿದ್ದವಾಗಿ ಸಿಬ್ಬಂದಿ ಇತ್ತು. ದೂರವಾಣ , ಮೆಸೆಜ್, ಇ-ಮೆಲ್ ಗಳ ಮೂಲಕ ಸಮಸ್ಯೆಗಳನ್ನು ತಿಳಿಸಿದಲ್ಲಿ ಅದಕ್ಕೆ ಸೂಕ್ತ ಪರಿಹಾರ ನೀಡಲು ವೈದ್ಯರು ಸಿದ್ದರಿದ್ದರು. 
    ಸಚಿವರು, ಡಿಜಿಟಲ್ ನರ್ವ್ ಸೆಂಟರನ್ನು ವೀಕ್ಷಿಸಿ, ನಂತರ ಅಲ್ಲಿನ ವೈದ್ಯರು ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗೆ ಅವಶ್ಯಕ ಚಿಕಿತ್ಸೆ ನೀಡುವ ಕುರಿತು ಬೇರೊಬ್ಬ ವೈದ್ಯರಿಗೆ ವೀಡಿಯೋ ಕರೆ ಮೂಲಕ ಮಾಹಿತಿ ನೀಡಿದರು. ಅಷ್ಟೇ ಅಲ್ಲದೆ ಅದರಲ್ಲಿ ಇ.ಸಿ.ಜಿ. ಹಾಗೂ ಸ್ಕಾನ್ ದಾಖಲೆಗಳನ್ನು ಅಲ್ಲಿಂದ ಇಲ್ಲಿಗೆ ಅಪ್‍ಲೋಡ್ ವ್ಯವಸ್ಥೆ ಇರುವ ಬಗ್ಗೆಯೂ ಸಚಿವರಿಗೆ ತೋರಿಸಿಕೊಟ್ಟರು. 
    ರೋಗಿಗಳ ಅವಶ್ಯಕ ಮಾಹಿತಿಗಳನ್ನು ಪಡೆದುಕೊಳ್ಳಲು ಸಹಾಯವಾಣ  ತೆರೆಯಲಾಗಿದೆ. ಅನಾರೋಗ್ಯದ ಸಮಸ್ಯೆಗೆ ಒಳಗಾದವರು 800-425-4325 ಈ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಸೂಕ್ತ ಮಾಹಿತಿ ಪಡೆದುಕೊಳ್ಳಬಹುದು. 
    ಇದಕ್ಕೂ ಮುನ್ನ ಕಿವಿ ಕೇಳದ ಮಕ್ಕಳಿಗೆ ಕೇಳುವ ಉಪಕರಣಗಳನ್ನು ಅಳವಡಿಸಲಾಯಿತು. ಸಚಿವರು ಇಲ್ಲಿಗೂ ಭೇಟಿ ನೀಡಿ ವೀಕ್ಷಿಸಿದರಲ್ಲದೆ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. 
    ಸುಮಾರು 40 ಕ್ಕೂ ಹೆಚ್ಚು ಮಂದಿ ಮಕ್ಕಳಿಗೆ ಕೇಳುವ ಉಪಕರಣವನ್ನು ಅಳಡಿಸಲಾಯಿತು. ಮಿಷನ್ ಅಳವಡಿಸಿಕೊಂಡ ಮಕ್ಕಳು ವೈದ್ಯರ ಮಾತುಗಳನ್ನು ಆಲಿಸಿದರು. ಉಪಕರಣ ಅಳವಡಿಸಿದ ಬಳಿಕೆ ಇತರರ ಮಾತುಗಳು ಕೇಳುವ ಕುರಿತು ಮಾಹಿತಿ ನೀಡಿದರು. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...