ಕೋಲಾರ: ಜಿಲ್ಲಾ ಪತ್ರಕರ್ತರ ಸಮ್ಮೇಳನ ಹಾಗೂ ಸರ್ವ ಸದಸ್ಯರ ಸಭೆ

Source: Shabbir Ahmedd | By S O News | Published on 27th October 2021, 11:56 AM | State News |

ಕೋಲಾರ: ಪತ್ರಕರ್ತರು ರಾಜಕಾರಣಿಗಳ ಮನೆ ಬಾಗಿಲಿಗೆ ಹೋಗಬಾರದು, ಅವರು ನಿಮ್ಮ ಸಂಘ ಬರುವಂತೆ ಪರಿಸ್ಥಿತಿ ನಿರ್ಮಾಣ ಮಾಡಿ ತಮ್ಮ ವೃತ್ತಿಯ ಗೌರವ ಘನತೆಯನ್ನು ಕಾಪಾಡಿ ಕೊಳ್ಳುವಂತಾಗ ಬೇಕೆಂದು ಸಂಸದ ಎಸ್. ಮುನಿಸ್ವಾಮಿ ಕಿವಿಮಾತು ಹೇಳಿದರು.

ಮಾಲೂರು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ೨ ನೇ ಕೋಲಾರ ಜಿಲ್ಲಾ ಪತ್ರಕರ್ತರ ಸಮ್ಮೇಳನ ಹಾಗೂ ಸರ್ವ ಸದಸ್ಯರ ಸಭೆ ಮತ್ತು ಮಾಲೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನವೀಕೃತ ಭವನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು .

ಪತ್ರಕರ್ತರು ಸಮಾಜದಲ್ಲಿನ ಲೋಪದೋಷಗಳ ಜೊತೆಗೆ ಒಳ್ಳೆಯ ಕೆಲಸಗಳನ್ನು ಗುರುತಿಸುವಂತಾಗ ಬೇಕು. ಕೋವಿಡ್ ಸಂದರ್ಭದಲ್ಲಿನ ಪ್ರಕರಣಗಳನ್ನು ಉದಾಹರಿಸಿದ ಅವರು ಯಾವುದೇ ರಾಜಕಾರಣಿ ಅಥವಾ ಅಧಿಕಾರಿಯ ಪರವಾಗಿ ವಿರುದ್ಧವಾಗಿ ಪತ್ರಕರ್ತರು ಇರದೆ ತಮ್ಮ ಪ್ರಾಮಾಣಿಕತೆಯನ್ನು ಉಳಿಸಿ ಕೊಂಡು ಪತ್ರಿಕಾ ರಂಗದ ಮೌಲ್ಯಗಳನ್ನು ಉಳಿಸಿ ಕೊಳ್ಳಬೇಕೆಂದರು. ಮಾಲೂರು ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ ಎಲ್ಲರೂ ಶಿಕ್ಷಣಸ್ಥರಾಗಿದ್ದಾರೆ ಮಾತ್ರ ತಿಳುವಳಿಕೆ ಇರಲು ಸಾಧ್ಯ. ಮಾತಿಗಿಂತ ಅನುಭವ ಮತ್ತು ನೋಡಿ, ಕೇಳುವುದರಿಂದಲೂ ಸುಲಭವಾಗಿ ತಿಳುವಳಿಕೆ ಪಡೆಯಲು ಸಾಧ್ಯ ಎಂದು ಅಭಿಪ್ರಾಯಿಸಿದರು. ವಿಧಾನ ಪರಿಷತ್‌ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ ಕೋಲಾರ ಜಿಲ್ಲೆಯ ಪತ್ರಕರ್ತರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ಹೇಳಿದರು .

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಪತ್ರಿಕಾ ವೃತ್ತಿಯ ಬಗ್ಗೆ ಜನಪ್ರತಿನಿಧಿಗಳ ನೇರ ನುಡಿಗಳಿಂದ ಪ್ರತಿಯೊಬ್ಬ ಪತ್ರಕರ್ತರು ತಮ್ಮ ನಡುವಳಿಕೆಗಳ ಬಗ್ಗೆ ಆತ್ಮವಲೋಕನ ಮಾಡಿ ಕೊಳ್ಳುವಂತಾಗ ಬೇಕೆಂದರು.  ಕೋವಿಡ್ ಸಂದರ್ಭದಲ್ಲಿ ಸರ್ಕಾರದಿಂದ ನೆರವು ಘೋಷಣೆಯಾಗುವಂತೆ ಮಾಡಲು ರಾಜ್ಯ ಸಂಘದ ಪದಾಧಿಕಾರಿಗಳ ಶ್ರಮವನ್ನು ವಿವರಿಸಿದ ಅವರು ಕೋವಿಡ್‌ಗೆ ಬಲಿಯಾದ ಪತ್ರಕರ್ತರನ್ನು ನೆನಪಿಸಿದರು .

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ ತಮ್ಮ ಅಧ್ಯಕ್ಷ ಸ್ಥಾನದ ಅವಧಿಯ ಕಾರ್ಯ ಸಾಧನೆಯನ್ನು ಸುಧೀರ್ಘವಾಗಿ ವಿವರಿಸಿದರು . ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ಗೋಪಿನಾಥ್ ಮಾತನಾಡಿ ಜಿಲ್ಲಾ ಪತ್ರಕರ್ತರ ಸಂಘವು ಸಮರ್ಥವಾಗಿದ್ದು, ಮಾಲೂರು ಸಂಘವು ಅದೇ ಹಾದಿಯಲ್ಲಿ ಕ್ರಿಯಾಶೀಲತೆಯಿಂದ ಸಾಗುತ್ತಿರುವುದು ಶ್ಲಾಘನೀಯ ಎಂದರು.

ಮರಸಭೆ ಅಧ್ಯಕ್ಷ ಎನ್‌.ಪಿ.ಮುರಳೀಧರ್‌, R ರಾಮೇಗೌಡ ಟ್ರಸ್ಟ್‌ನ ಲಕ್ಷ್ಮೀ ರಾಮೇಗೌಡ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಬಿಜೆಪಿ ಮುಖಂಡ ಹೂಡಿ ವಿಜಯ್‌ ಕುಮಾರ್‌, ಮಾಲೂರು ಪಟ್ಟಣದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಆರಾಧ್ಯ ಮತ್ತು ಇತರರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು۔

ಮಾಲೂರು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್‌.ಎ . ಲೋಕೇಶ್ ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಎಲ್ಲಾ ಜನಪ್ರತಿನಿಧಿಗಳು ತಾಲ್ಲೂಕು ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಅರ್ಥಿಕ ನೆರವು ನೀಡುವುದಾಗಿ ಘೋಷಿಸಿದರು.

ವಿಶಿಷ್ಟ ಸೇವಾ ಪ್ರಶಸ್ತಿ ಪುರಸ್ಕೃತರಾದ ಎನ್.ಮುನಿವೆಂಕಟೇಗೌಡ , ವರದಿಗಾರರಾದ ಕೆಜಿಎಫ್‌ನ ಶ್ರೀಧರ್‌ ಪಿಳ್ಳೆ ಮಾಲೂರಿನ ರಮೇಶ್ ಚಂದ್ರಪ್ರಸಾದ್ , ಕೋಲಾರದ ಸಿ.ಜಿ.ಮುರಳಿ , ಕೆ.ಗೋಪಿಕಾಮಲ್ಲೇಶ್ , ಎ.ಸದಾನಂದ , ಸಿ.ವಿ. ನಾಗರಾಜ , ಬಂಗಾರಪೇಟೆಯ ಎಸ್.ಪಿ.ವೆಂಕಟೇಶ್ , ಮುಳಬಾಗಿಲಿನ ಎ.ಅಪ್ಪಾಜೀಗೌಡ , ಶ್ರೀನಿವಾಸಮರದ ಜಿ.ಎಸ್.ಚಂದ್ರಶೇಖರ್‌ ಅವರಿಗೆ ಮುಖ್ಯ ಅತಿಥಿಗಳಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ರಾಜ್ಯ ಸಮಿತಿಯ ಸದಸ್ಯ ಡಾ.ಮಹಮ್ಮದ್ ಯೂನುಸ್, ಕೋಲಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್‌, ಉಪಾಧ್ಯಕ್ಷ ಎಂ.ಸಿ.ಮಂಜುನಾಥ್, ಜೆ.ಜಿ ಶ್ರೀನಿವಾಸಮೂರ್ತಿ, ಕಾರ್ಯದರ್ಶಿಗಳಾದ ಅಪ್ಪಾಜಿಗೌಡ, ಶಬೀರ್‌ಅಹ್ಮದ್, ಕಾರ್ಯಕಾರಿ ಸಮಿತಿ ಸದಸ್ಯರಾದ ರವಿಕುಮಾರ್‌, ರವೀಂದ, ಮಲ್ಲಿಕಾರ್ಜುನಯ್ಯ, ಪ್ರಕಾಶ್, ನಾಗರಾಜ್‌, ಉಪೇಂದ್ರ, ಎಸ್‌.ರವಿಕುಮಾರ್, ಎನ್.ರಾಮು, ಮಾಲೂರು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಂ.ವಿಜಯಕುಮಾರ್, ತಾ.ಪಂ ಇ.ಓ. ವಿ.ಕೃಷ್ಣಪ್ಪ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಖಜಾಂಜಿ ಎ.ಜಿ.ಸುರೇಶ್ ಸ್ವಾಗತಿಸಿದರು .

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...