ಕೋಲಾರ : 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ

Source: ಶಬ್ಬೀರ್ ಅಹಮ್ಮದ್ | By S O News | Published on 26th January 2021, 1:10 AM | State News |

ಕೋಲಾರ : ಭಾರತ ದೇಶ ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ , ಎಲ್ಲಾ ಜಾತಿ , ಧರ್ಮ ಭಾಷೆಗಳನ್ನೊಳಗೊಂಡ ಜಾತ್ಯಾತೀತ ರಾಷ್ಟ್ರ , ಯುವಕರು ಮತದಾರದಿಂದ ಹೊರಗುಳಿಯಬಾರದು . ಜನರಿಗೆ ಒಳಿತನ್ನು ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು . ಅಭಿವೃದ್ಧಿಗೆ ಪ್ರತಿ ಮತವು ಮುಖ್ಯ ಆದರಿಂದ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ನಾಯಕರನ್ನು ಆರಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗಂಗಾಧರ ಚನ್ನಬಸಪ್ಪ ಹಡಪದ್ ಅವರು ತಿಳಿಸಿದರು. ಇಂದು ಕೋಲಾರ ನಗರದ ಶ್ರೀ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ , 11 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು .

ಮತದಾನ ಮೂಲಭೂತ ಹಕ್ಕು, ಮತದಾನದ ಮಹತ್ವ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿ ಕುರಿತು ಜಾಗೃತಿ ಅವರು ಮೂಡಿಸಲು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುವುದು. ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶದಲ್ಲಿ ಮತದಾನ ಕಡಿಮೆಯಾಗುತ್ತಿದೆ. ಮತದಾರರು ಮತದಾನದ ಮಹತ್ವವನ್ನು ತಿಳಿಯಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯುವಕರು ಹೆಚ್ಚು ಪಾಲ್ಗೊಳ್ಳುವಂತೆ ಮಾಡುವ ಉದ್ದೇಶದಿಂದ ಮತದಾನದ ವಯಸ್ಸನ್ನು 21 ರಿಂದ 18 ಕ್ಕೆ 1989 ರಲ್ಲಿ ಇಳಿಸಲಾಯಿತು. ಚುನಾವಣೆ ಆಯೋಗವು ನ್ಯಾಯ ನಿರ್ಭಿತವಾಗಿ ಚುನಾವಣೆಯನ್ನು ನಡೆಸುತ್ತಿದೆ . ಚುನಾವಣಾ ಅಭ್ಯರ್ಥಿಗಳು ಯಾವುದೇ ಜಾತಿ ಮತ ಧರ್ಮದ ಮೇಲೆ ಮತ ಕೇಳುವಂತಿಲ್ಲ.

18 ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸಿ.ಸತ್ಯಭಾಮ ಅವರು ಮಾತನಾಡಿ , 2011 ರಿಂದ ಜನವರಿ 25 ರನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ . “ ಮತದಾರರನ್ನು ಅಧಿಕಾರಯುಕ್ತ , ಜಾಗರೂಕ , ಸುರಕ್ಷಿತ ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವುದು.

ಈ ವರ್ಷದ ಮತದಾರರ ದಿನಾಚರಣೆಯ ಘೋಷವಾಕ್ಯವಾಗಿದೆ . ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು , ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸುತ್ತಿದೆ . 12 ನೇ ಶತಮಾನದಲ್ಲಿಯೇ ಉತ್ತಮ ಪ್ರಜಾಪ್ರಭುತ್ವದ ವ್ಯವಸ್ಥೆ ಇತ್ತು.

ಬಸವಣ್ಣನವರ ಅನುಭವ ಮಂಟಪ ಉತ್ತಮ ಸಂಸತ್ ಆಗಿತ್ತು. ಹಿಂದೆ ಅನಕ್ಷರಸ್ಥರು, ದಲಿತರು, ಮಹಿಳೆಯರು, ಹಿಂದುಳಿದವರು, ಭೂರಹಿತರು, ಇವರಿಗೆ ಮತದಾನ ಮಾಡಲು ಅವಕಾಶ ಇರಲಿಲ್ಲ. ಆದರೆ ನಮ್ಮ ಸಂವಿಧಾನ ಎಲ್ಲರಿಗೂ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು. ಶ್ರೀಮಂತರೇ ಇರಲಿ , ಬಡವರೇ ಇರಲಿ ಎಲ್ಲರಿಗೂ ಒಂದೇ ಮತದ ಹಕ್ಕನ್ನು ನೀಡಲಾಗಿದೆ. ಪ್ರತಿ ವರ್ಷ ಜನವರಿ 1 ಕ್ಕೆ 18 ವರ್ಷ ತುಂಬಿದ ಎಲ್ಲರನ್ನೂ ಮತದಾರರ ಪಟ್ಟಿಗೆ ಸೇರಿಸಿ ಕೊಳ್ಳಲಾಗುವುದು. ಮತದಾರರಿಗೆ ಎಪಿಕ್ ಕಾರ್ಡ್‌ಗಳನ್ನು ನೀಡಲಾಗುವುದು.
ಜಿಲ್ಲೆಯಲ್ಲಿ 12,37,309 ಮತದಾರರಿದ್ದಾರೆ. ಇದರಲ್ಲಿ ಪುರುಷರು 6,18,139 ಹಾಗೂ ಮಹಿಳೆಯರು 6,19,170 ಮತದಾರರಿದ್ದಾರೆ. ಇದರಲ್ಲಿ 13,145 ಯುವ ಮತದಾರರನ್ನು ನೋಂದಣಿ ಮಾಡಲಾಗಿದೆ ಎಂದು ಮತದಾನದ ಶ್ರೇಷ್ಟತೆ ಬಗ್ಗೆ ಅರಿವು ಮೂಡಿಸಿದರು.

ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಎನ್.ಎಂ.ನಾಗರಾಜ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮಾತನಾಡಿ, ಭಾರತೀಯ ಚುನಾವಣಾ ಆಯೋಗ ಪ್ರಪಂಚದಲ್ಲೇ ಹೆಚ್ಚು ವಿಶ್ವಾಸನೀಯವಾಗಿದೆ. ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುತ್ತದೆ. ಬಿ.ಎಲ್.ಓ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದು, ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವುದು. ಪಟ್ಟಿಯಿಂದ ತೆಗೆದು ಹಾಕುವ ಕೆಲಸ ಉತ್ತಮವಾಗಿ ಮಾಡುತ್ತಿದ್ದಾರೆ.

ಮತದಾರರ ಪಟ್ಟಿಯ ಲೋಪದೋಷಗಳನ್ನು ಬಿ.ಎಲ್.ಓಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬಹುದು . ಮತದಾರರು ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಷ್ಟ ಇಲ್ಲದವರು ನೋಟಾ ಆಯ್ಕೆಗೆ ಮತ ಚಲಾಯಿಸಬಹುದಾಗಿದೆ . ರಹಸ್ಯ ಮತದಾನವನ್ನು ಎಲ್ಲರೂ ಪಾಲಿಸಬೇಕು.

ಇದರಗಳು ಉಲ್ಲಂಘನೆಯಾದರೇ ಕಾನೂನು ಅಪರಾಧವಾಗುತ್ತದೆ . ಪೂರ್ವಗ್ರಹ ಪೀಡಿತರಾಗದೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಭಾಗವಹಿಸಿ ಎಂದು ತಿಳಿಸಿದರು .
ಕೋಲಾರ ಉಪ ವಿಭಾಗಾಧಿಕಾರಿಗಳಾದ ವಿ.ಸೋಮಶೇಖರ್ ಅವರು ಮಾತನಾಡಿ , ಮತದಾರರ ಪಟ್ಟಿ ಪಾರದರ್ಶಕವಾಗಿದ್ದರೆ ಮಾತ್ರ ಪ್ರಜಾಪ್ರಭತ್ವ ಯಶಸ್ವಿಯಾಗುತ್ತದೆ.

18 ವರ್ಷ ತುಂಬಿದ ಎಲ್ಲಾ ನಾಗರೀಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ ಎಪಿಕ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಯಿತು . ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿ.ಎಲ್.ಓ ಗಳಿಗೆ ಪ್ರಶಂಸನೀಯ ಪತ್ರ ಮತ್ತು ನಗದು ಬಹುಮಾನವನ್ನು ನೀಡಲಾಯಿತು.

ಪ್ರೌಢಶಾಲೆ, ಕಾಲೇಜು ಹಂತಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ಗಳನ್ನು ಸ್ಥಾಪಿಸಿ ಸ್ಪರ್ಧೆಗಳನ್ನು ನಡೆಸಿದ್ದು, ಉತ್ತಮ ಮತದಾರರ ಸಾಕ್ಷರತಾ ಕ್ಲಬ್ಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ || ಸ್ನೇಹಾ, ತಹಶೀಲ್ದಾರರಾದ ಶೋಭಿತಾ, ಜವಳಿ ಮತ್ತು ಕೈಮಗ್ಗ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ತಿಮ್ಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಮೂರ್ತಿ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಗಂಗಾಧರ್ ರಾವ್ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...