ಕೋಲಾರ: ಆಗಸ್ಟ್ 18 ರಿಂದ 24 ರವರೆಗೆ ಮಕ್ಕಳ ಚಲನಚಿತ್ರೋತ್ಸವ

Source: shabbir | By Arshad Koppa | Published on 24th July 2017, 8:16 AM | Coastal News | Guest Editorial |

ಕೋಲಾರ, ಜುಲೈ 22 :ಪ್ರತಿವರ್ಷದಂತೆ ಈ ವರ್ಷವೂ ಸಹ ಮಕ್ಕಳ ಚಲನಚಿತ್ರೋತ್ಸವವನ್ನು ಆಗಸ್ಟ್ 18 ರಿಂದ 24 ರವರೆಗೆ ನಡೆಸಲು ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. 


ಅಪರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸುಮಾರು 07 ಚಲನಚಿತ್ರಗಳನ್ನು ಪ್ರದರ್ಶಿಸಲು ನಿರ್ಧರಿಸಲಾಯಿತು. ಅದರಂತೆ ಚಿಲಿಪಿಲಿ ಹಕ್ಕಿಗಳು, ಕು.ಕು, ಹಾರೋಹಕ್ಕಿ, ಕಂಸಾಳೆ-ಕೈಸಾಳೆ, ಅರಿವು, ಮಾನಿತ ಮತ್ತು ಬಾಲ್‍ಪೆನ್ ಚಿತ್ರಗಳನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವುದು. 
ವಿದ್ಯಾರ್ಥಿಗಳಿಗೆ ತಲಾ 15 ರೂ ಪ್ರವೇಶಧರವನ್ನು ನಿಗಧಿಪಡಿಸಲಾಗಿದೆ. ಉಪಾಧ್ಯಾಯರುಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರದರ್ಶನವನ್ನು ಬೆಳಗ್ಗೆ 08 ರಿಂದ 10 ಗಂಟೆಯವರೆಗೆ ನಡೆಸಲು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಆಯ್ದ ಚಿತ್ರಮಂದಿರಗಳಲ್ಲಿ ಪ್ರದರ್ಶನ ನಡೆಸಲಾವುದು.     
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚಿತ್ರಮಂದಿರಗಳ ಮಾಲೀಕರು ಸೇರಿದಂತೆ ಮುಂತಾದವರು ಹಾಜರಿದ್ದರು. 

ಪ್ರಥಮ ಧರ್ಜೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಪ.ಜಾ, ಪ.ವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕೋಲಾರ, ಜುಲೈ 22 :ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2016-17 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ, ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿ, ವೈದ್ಯಕೀಯ ಪದವಿ, ಬಿ.ಇಡಿ, ಬಿ.ಪಿಇಡ್ ತರಗತಿಗಳಲ್ಲಿ ಪ್ರಥಮ ಧರ್ಜೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಬಹುಮಾನ ಹಣದ ವಿತರಣೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಆಸಕ್ತರು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ನಂತರ ಕಚೇರಿಗೆ ದಾಖಲೆಗಳನ್ನು ನೀಡಬೇಕು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 31-07-2017. ಪದವಿ ಮತ್ತು ಇತರೆ ಕೋರ್ಸ್‍ಗಳ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 30-09-2017 ಆಗಿರುತ್ತದೆ. 
ಹೆಚ್ಚಿನ ಮಾಹಿತಿಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಾಲೂರು ಇವರನ್ನು 08151-232190 ಮೂಲಕ ಸಂಪರ್ಕಿಸಬಹುದಾಗಿದೆ.
 

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...