ಕೋಲಾರ: ಒಳ್ಳೆಯ ನಾಯಕರನ್ನು ಆಯ್ಕೆ ಮಾಡಲು ಮೊದಲು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ:  ಡಾ|| ಕೆ.ವಿ. ತ್ರಿಲೋಕ್‍ಚಂದ್ರ.

Source: shabbir | By Arshad Koppa | Published on 22nd July 2017, 10:13 AM | State News | Guest Editorial |

ಕೋಲಾರ, ಜುಲೈ 21:ಪ್ರಜಾಪ್ರಭುತ್ವದಲ್ಲಿ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ತಮ್ಮನ್ನು ತಾವು ಒಳಗೂಡಿಸಿಕೊಂಡಲ್ಲಿ ಮಾತ್ರ ಆಯ್ಕೆಯಾದವರ ಬಗ್ಗೆ ಟಿಪ್ಪಣ  ಮಾಡಲು ಹಕ್ಕನ್ನು ಹೊಂದಿರುತ್ತೀರಿ. ಹಾಗಾಗಿ, ಒಳ್ಳೆಯ ನಾಯಕರನ್ನು ಆಯ್ಕೆ ಮಾಡುವುದು ಮತದಾರರಾದ ನಿಮ್ಮ ಜವಾಬ್ದಾರಿ ಆಗಿರುತ್ತದೆ. ಆದರೆ, ಮೊದಲು ನಿಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ನೋಂದಾಯಿಸಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ 
ಡಾ|| ಕೆ.ವಿ. ತ್ರಿಲೋಕ್ ಚಂದ್ರ ಅವರು ಹೇಳಿದರು.
ಇಂದು ತಮ್ಮ ಕಛೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಬಿ.ಬಿ.ಕಾವೇರಿ ಅವರ ಸಹಭಾಗಿತ್ವದಲ್ಲಿ ನಡೆದ ಮತದಾರರ ಪಟ್ಟಿಗೆ ಸೇರಿಸಲು ಜಾರಿಯಾಗಿರುವ ವಿಶೇಷ ಆಂದೋಲನ ಕಾರ್ಯಕ್ರಮದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಬಂದಂತ ವಿವಿಧ ಕಾಲೇಜುಗಳ ಕ್ಯಾಂಪಸ್ ಅಂಬ್ಯಾಸಿಡರ್‍ಗಳನ್ನು (ಆಯ್ದ ವಿದ್ಯಾರ್ಥಿಗಳು) ಉದ್ದೇಶಿಸಿ ಅವರು ಮಾತನಾಡಿದರು.
18 ರಿಂದ 21 ವರ್ಷದೊಳಗಿನ ಯಾವೊಬ್ಬ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಧ್ಯೇಯದೊಂದಿಗೆ ಜುಲೈ 01 ರಿಂದ ಜುಲೈ 31 ರವರೆಗೆ ನಡೆಯುತ್ತಿರುವ ವಿಶೇಷ ಸೇರ್ಪಡೆ ಆಂದೋಲನಕ್ಕೆ ಕ್ಯಾಂಪಸ್ ಅಂಬ್ಯಾಸಿಡರ್‍ಗಳು ಹೆಚ್ಚಿನ ಜವಾಬ್ದಾರಿ ಹೊತ್ತು ಇತರೆ ಅರ್ಹ ಮತದಾರರು ಪಟ್ಟಿಗೆ ಸೇರಿಸಲು ಪ್ರೇರಣೆಯಾಗಬೇಕು ಎಂದು ಅಭಿಪ್ರಾಯಪಟ್ಟರು.
ನೋಂದಣ ಗೆ ಮಾತ್ರ ತಮ್ಮನ್ನು ಸೀಮಿತಗೊಳಿಸದೆ, ಮುಂದಿನ ಚುನಾವಣೆಯಲ್ಲೂ ಮತದಾನ ಮಾಡುವ ಕುರಿತು ಜಿಲ್ಲೆಯ ಯುವಜನತೆಯನ್ನು ಪ್ರೇರೇಪಿಸಬೇಕು ಎಂದು ಕಿವಿಮಾತು ಹೇಳಿದರು. ನೋಂದಣ  ಪ್ರಕ್ರಿಯೆಯಲ್ಲಿ ಇತರರಿಗೆ ಮಾರ್ಗದರ್ಶನ ನೀಡುವುದಲ್ಲದೆ, ತಿದ್ದುಪಡಿ, ಮತದಾನ ಪ್ರಕ್ರಿಯೆ ಹಾಗೂ ನೈತಿಕ ಮತದಾನ ಕುರಿತು ಯುವ ಮತದಾರರಲ್ಲಿ ಅರಿವು ಮೂಡಿಸಬೇಕು ಎಂದ ಜಿಲ್ಲಾಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಅಳವಡಿಸಿಕೊಳ್ಳಬಹುದಾದ ಮಾರ್ಪಾಡುಗಳನ್ನು ಕ್ಯಾಂಪಸ್ ಅಂಬ್ಯಾಸಿಡರ್‍ಗಳು ಜಿಲ್ಲಾಡಳಿತಕ್ಕೆ ಸೂಚಿಸಬಹುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ.ವಿದ್ಯಾಕುಮಾರಿ ಅವರು ಮಕ್ಕಳು ಹಾಗೂ ಕಾಲೇಜು ಪ್ರಾಂಶುಪಾಲರಿಗೆ ನೋಂದಣ  ಆಂದೋಲನದ ಕುರಿತು ಮಾಹಿತಿ ನೀಡಿ ಅತ್ಯಧಿಕ ನೋಂದಣ ಗಳಿಗೆ ಪ್ರೇರೆಪಿಸಿದ ವಿದ್ಯಾರ್ಥಿ/ವಿದ್ಯಾರ್ಥಿನಿಗೆ ಜಿಲ್ಲಾಡಳಿತದ ವತಿಯಿಂದ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಈ ವಿಶೇಷ ಆಂದೋಲನದಿಂದ ಬಿಟ್ಟುಹೋದಂತಹ ಹಾಗೂ ಹೊಸ ಮತದಾರರನ್ನು ಪಟ್ಟಿಗೆ ಸೇರಿಸುವುದಲ್ಲದೆ ಬೋಗಸ್ ಮತದಾರರನ್ನು ತೆಗೆದು ಹಾಕಲು ಸಹಾಯವಾಗಲಿದೆ ಎಂದ ಅವರು, ನಿಮ್ಮ ಕಾಲೇಜು ಕ್ಯಾಂಪಸ್ಸಿನ ಒಳಗೆ ಅಲ್ಲದೆ ನಿಮ್ಮ ನೆರೆಹೊರೆಯವರು, ಕುಟುಂಬದವರು ಹಾಗೂ ಇತರೆ ಯಾರಿಗಾದರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲವಾದಲ್ಲಿ ಅದನ್ನು ಸೇರಿಸಲು ಪ್ರೇರೇಪಿಸಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ವಿಶೇಷ ಆಂದೋಲನದಲ್ಲಿ ಸ್ವೀಪ್ ಸಮಿತಿಯು ವಿವಿಧ ಇಲಾಖೆಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸಾಕಷ್ಟು ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದ ಅಪರ ಜಿಲ್ಲಾಧಿಕಾರಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಿಕಾ ಪ್ರಕಟಣೆಗಳು ಹಾಗೂ ಕಲಾ ಜಾಥಾಗಳ ಮೂಲಕ ನಿರಂತರ ಅಭಿಯಾನದ ಉದ್ದಕೂ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪ್ರಚಾರ ನೀಡುತ್ತಿದೆ ಎಂದರು.
ಜುಲೈ 26 ರಂದು ಸರ್ಕಾರಿ ಕಾಲೇಜು, ವಿಶ್ವವಿದ್ಯಾನಿಲಯಗಳು ಹಾಗೂ ಇತರೆ ಶೈಕ್ಷಣ ಕ ಸಂಸ್ಥೆಗಳಲ್ಲಿ ವಿಶೇಷ ನೋಂದಣ  ಕ್ಯಾಂಪನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಂದಿನ ದಿನದಂದು ಪಟ್ಟಿಗೆ ನೋಂದಾವಣೆ ಮಾಡಿಸಲು ಕ್ರಮ ವಹಿಸುವಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಿದರು.
ಅಲ್ಲದೆ, ಜುಲೈ 22 ಮತ್ತು 23 ರಂದು ಬೂತ್ ಮಟ್ಟದಲ್ಲಿ ವಿಶೇಷ ಕ್ಯಾಂಪ್‍ಗಳ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಮಾಡಲಾಗುವುದು ಎಂದು ಹೇಳಿದ ಅವರು, ಈ ಅವಕಾಶವನ್ನು ಅರ್ಹರಿರುವ ಪ್ರತಿಯೊಬ್ಬ ಯುವ ಮತದಾರರು ಬಳಸಿಕೊಳ್ಳಬೇಕೆಂದು ತಿಳಿಸಿದರು.
ಚುನಾವಣಾ ವಿಭಾಗದ ಅಧಿಕಾರಿಗಳು ಸಾಕಷ್ಟು ಸಂಖ್ಯೆಯಲ್ಲಿ ಫಾರಂ 6 ಅನ್ನು ಎಲ್ಲಾ ಕಾಲೇಜುಗಳಿಗೆ ವಿತರಿಸುವಂತೆ ಶ್ರೀಮತಿ ವಿದ್ಯಾಕುಮಾರಿ ಸಭೆಯಲ್ಲಿ ಸೂಚಿಸಿದರು.  

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...