ಜಂತುಹುಳು ನಿವಾರಣೆಗಾಗಿ ವೈಯಕ್ತಿಕ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ - ಸಿ.ಎಸ್ ವೆಂಕಟೇಶ್

Source: S O News Service | By Office Staff | Published on 10th February 2020, 11:03 PM | State News |

ಕೋಲಾರ: ಜಂತುಹುಳು ನಿವಾರಣೆಗಾಗಿ ವೈಯಕ್ತಿಕ ಸ್ವಚ್ಚತೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕೆಂದು ಜಿಲ್ಲಾ ಪಂಚಾಯತ್‍ನ ಅಧ್ಯಕ್ಷರಾದ ಸಿ.ಎಸ್ ವೆಂಕಟೇಶ್ ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಇವರ ವತಿಯಿಂದ ಸರ್ಕಾರಿ ಮಹಿಳಾ ಕಾಲೇಜು ಕೋಲಾರ ಇಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ -10 ಫೆಬ್ರವರಿ 2020 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಂತು ಹುಳುಗಳನ್ನು ಜಂತುಹುಳು ನಾಶಕದಿಂದ ನಿವಾರಣೆ ಮಾಡುವುದಷ್ಟೇ ಅಲ್ಲದೆ, ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಸಹ ಅತಿ ಮುಖ್ಯ. ವಿದ್ಯಾರ್ಥಿಗಳು ಜಂತುಹುಳು ನಿವಾರಣೆಯ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿಜಯ್ ಕುಮಾರ್ ಅವರು ಮಾತನಾಡಿ ಫೆಬ್ರವರಿ 2015 ರಿಂದ ಭಾರತ ಸರ್ಕಾರವು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಪ್ರಾರಂಭ ಮಾಡಿದು,್ದ ವರ್ಷದಲ್ಲಿ 2 ಬಾರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. 1 ರಿಂದ 19 ವರ್ಷ ವಯಸ್ಸಿನೊಳಗಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಣೆ ಮಾತ್ರೆಯನ್ನು ಎಲ್ಲಾ ಶಾಲೆಗಳಲ್ಲಿ, ಕಾಲೇಜುಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್ 2019 ರಲ್ಲಿ 4,45,507 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಗಿತ್ತು. ಜಿಲ್ಲೆಯ ವ್ಯಾಪ್ತಿಯಲ್ಲಿ ಈ ವರ್ಷ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಹಾಗೂ ಖಾಸಗಿ ಶಾಲೆಗಳು ಮತ್ತು ಐ.ಟಿ.ಐ, ಡಿಪ್ಲೋಮೋ ಕಾಲೇಜುಗಳಲ್ಲಿ 5,18,941 ಮಕ್ಕಳಿಗೆ ಕಾರ್ಯಕ್ರಮದ ಮುಖಾಂತರ ಜಂತುಹುಳು ನಿವಾರಣೆ ಮಾತ್ರೆಯನ್ನು ನೀಡಲಾಗುತ್ತದೆ. ಜಂತು ಹುಳು ನಿವಾರಣೆ ಮಾತ್ರೆಯನ್ನು ಸೇವಿಸುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಜಿಲ್ಲಾ ಅನುಷ್ಠಾನಾಧಿಕಾರಿಗಳಾದ ಡಾ. ಚಂದನ್ ಅವರು ಮಾತನಾಡಿ ದೇಶ ಪ್ರಗತಿಯತ್ತ ಸಾಗಲು ಸೂಚ್ಯಾಂಕ ಮುಖ್ಯ, ತಾಯಿ ಮಗುವಿನ ಮರಣ ಪ್ರಮಾಣವನ್ನು ಕಡಿಮೆ ಮಾಡುವುದರ ಜೊತೆಯಲ್ಲಿ ಅವರ ಆರೋಗ್ಯವನ್ನು ಕಾಪಾಡುವುದು ಅತಿ ಮುಖ್ಯವಾಗುತ್ತದೆ. ವಿಶ್ವ ಸಂಸ್ಥೆಯ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಶೇಕಡ 49% ರಷ್ಟು ಮಕ್ಕಳು ಜಂತುಹುಳು ಸೋಂಕಿನಿಂದ ನರಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಜಂತುಹುಳು ಸೋಂಕಿನಿಂದ ರಕ್ತಹೀನತೆ, ಅಪೌಷ್ಠಿಕತೆ, ಹಸಿವು ಆಗದಿರುವುದು, ನಿಶಕ್ತಿ, ಹೊಟ್ಟೆನೋವು, ವಾಂತಿ, ಭೇದಿ, ಮಲದಲ್ಲಿ ರಕ್ತ ಕಾಣಿಸುವುದು ಮುಂತಾದ ರೋಗಗಳಿಗೆ ಮಕ್ಕಳು ತುತ್ತಾಗಬಹುದು. ಮಗು ಯಾವಾಗಲು ಆಯಾಸವಾಗಿರುವುದು ಮತ್ತು ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆ ದುರ್ಬಲಗೊಳ್ಳುತ್ತದೆ ಎಂದು ತಿಳಿಸಿದರು.

ಜಂತುಹುಳು ಸೋಂಕು ಬಯಲು ಮಲ ವಿಸರ್ಜನೆ ಮಾಡುವುದರಿಂದ ರೋಗಾಣುಗಳು ಮಣ್ಣಿನಲ್ಲಿ   ಬೆರತು ಸುತ್ತ ಮುತ್ತಲಿನ ತರಕಾರಿಗಳಲ್ಲಿ ಸೇರುತ್ತದೆ, ತರಕಾರಿಗಳನನು ಸರಿಯಾಗಿ ತೊಳೆಯದೆ ಹಾಗೂ ಬೇಯಿಸದೇ ಸೇವನೆ ಮಾಡುವುದು. ಬರಿಗಾಲಿನಿಂದ ನಡೆಯುವುದು ಮುಂತಾದ ಕಾರಣಗಳಿಂದ ಜಂತುಹುಳು ಸೊಂಕು ಹರಡುತ್ತದೆ. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದರ ಮೂಲಕ ಜಂತುಹುಳ ನಿವಾರಣೆಯನ್ನು ಮಾಡಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಂತುಹುಳು ಕುರಿತು ಅರಿವು ಮೂಡಿಸುವ ಕರ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ಷಯ ರೋಗ ನಿಯಂತ್ರಣಾಧಿಕಾರಿಗಳಾದ ಡಾ.ಜಗದೀಶ್, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರೇಮ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜೇಂದ್ರ,  ಕಾಲೇಜಿನ ರೆಡ್ ಕ್ರಾಸ್ ಕಮಿಟಿಯ ಯೋಜನಾಧಿಕಾರಿಗಳಾದ ಸೌಮ್ಯ, ವಿನುತ, ಕಾಲೇಜಿನ ಉಪನ್ಯಾಸಕರಾದ ನಾಗೇಶ್, ಗಂಗರಾಜು ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...