ಕೋಲಾರ: ಅ.02 ರಂದು ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತವೆಂದು ಘೋಷಿಸುವುದು ಸರ್ಕಾರದ ಸಂಕಲ್ಪ

Source: shabbir | By Arshad Koppa | Published on 7th July 2017, 2:52 PM | State News | Guest Editorial |

ಕೋಲಾರ, ಜುಲೈ 05: ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳು ಹೆಚ್ಚಿನ ಕಾಳಜಿ ವಹಿಸಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಬಯಲು ಬರ್ಹಿದೆಸೆ ಮುಕ್ತ ಜಿಲ್ಲೆಗಳನ್ನಾಗಿ ಮಾಡಲು ಪಣತೊಟ್ಟಿದ್ದಾರೆ ಎಂದು  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನಾ ಸಮಿತಿ ಅಧ್ಯಕ್ಷರಾದ ಶ್ರೀ ನಂಜಯ್ಯ ಮಠ ಅವರು ತಿಳಿಸಿದರು.
ನಗರದ ಶ್ರೀ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳಿಗೆ ಬುಧವಾರ ಏರ್ಪಡಿಸಿದ್ದ `ಶೌಚಾಲಯಕ್ಕಾಗಿ ಸಮರ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್ 2 ರಂದು ರಾಜ್ಯವನ್ನು ಬಯಲು ಬರ್ಹಿದೆಸೆ ಮುಕ್ತಗೊಳಿಸಲು ಸರ್ಕಾರವು ಸಂಕಲ್ಪ ತೊಟ್ಟಿದೆ. ಈಗಾಗಲೇ ರಾಜ್ಯದಲ್ಲಿ ಐದು ಜಿಲ್ಲೆಗಳನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ನಗರ ಜಿಲ್ಲೆ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳು ಬಯಲು ಬರ್ಹಿದೆಸೆ ಮುಕ್ತ ಜಿಲ್ಲೆಗಳಾಗಿವೆ ಎಂದರು. 
ಈ ಹಿಂದೆ ಶೌಚಾಲಯಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿರಲಿಲ್ಲ. ಇದರಿಂದ ಸಾಕಷ್ಟು ಕುಟುಂಬಗಳಿಗೆ ಶೌಚಾಲಯಗಳೇ ಇರಲಿಲ್ಲ. ಇದೀಗ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಶೌಚಾಲಯಗಳ ನಿರ್ಮಾಣಕ್ಕೆ ಹೆಚ್ಚು ಕಾಳಜಿ ವಹಿಸಲಾಗಿದೆ. ಇದಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪಿ.ಡಿ.ಓ.ಗಳು, ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶ್ರಮವಹಿಸುತ್ತಿದ್ದಾರೆ ಎಂದು ಹೇಳಿದರು.   
    ಸರ್ಕಾರವು ನಾಲ್ಕು ವರ್ಷಗಳ ಆಡಳಿತದಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆಗೆ ತಂದಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡಿರುವುದೇ ಅಲ್ಲದೆ ಸುಮಾರು 460 ಕ್ಕೂ ಹೆಚ್ಚು ಗ್ರಾಮಪಂಚಾಯಿತಿಗಳನ್ನು ನೂತನವಾಗಿ ರಚಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರಗಳನ್ನು ತೆರೆಯುವ ಮೂಲಕ ಜನರಿಗೆ ಸಹಕಾರ ಮಾಡಿದೆ ಎಂದು ವಿವರಿಸಿದರು. 
 ಸರ್ಕಾರವು ಶೌಚಾಲಯಗಳ ನಿರ್ಮಾಣಕ್ಕೆ ಪ್ರೋತ್ಸಾಹಧನವನ್ನು ನೀಡುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 15 ಸಾವಿರ, ಇತರೆ ವರ್ಗದವರಿಗೆ 12 ಸಾವಿರ ರೂಗಳನ್ನು ನೀಡಲಾಗುತ್ತದೆ. ಶೌಚಾಲಯಗಳ ನಿರ್ಮಾಣದ ಬಗ್ಗೆ ಮಹಿಳೆಯರು ಆಸಕ್ತಿ ತೋರಬೇಕಾಗಿದೆ. ಮಹಿಳೆಯರು ಮನಸ್ಸು ಮಾಡಿದರೆ ಶೌಚಾಲಯಗಳ ನಿರ್ಮಾಣ ಮಾಡಿಕೊಳ್ಳುವುದು ಕಷ್ಟವೇನೂ ಅಲ್ಲ ಎಂದರು. 
ಮಹಿಳಾ ಶಿಕ್ಷಕರಿಂದಲೇ ಶಿಕ್ಷಣ ರಂಗದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ಗ್ರಾಮಾಂತರ ಪ್ರದೇಶದಲ್ಲಿ ಶಿಕ್ಷಕರು ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು. ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಶೌಚಾಲಯ ನಿರ್ಮಾಣ ಕುರಿತು ಮಾಹಿತಿ ನೀಡಬೇಕು ಎಂದು ತಿಳಿಸಿದರು. 
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿದೆ. ಇದಕ್ಕಾಗಿ ಜನತೆ ಶುದ್ಧ ನೀರನ್ನು ಕುಡಿಯಬೇಕು. ಜನತೆಗೆ ಶುದ್ಧ ನೀರನ್ನು ನೀಡಬೇಕೆಂಬ ಉದ್ದೇಶದಿಂದ ಸರ್ಕಾರವು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದು ಇವುಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. 
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಅವರು, ಶೌಚಾಲಯಗಳನ್ನು ಸರ್ಕಾರವೇ ನಿರ್ಮಿಸಿ ಕೊಡಲಿ ಎಂಬ ಮನೋಭಾವನೆಯನ್ನು ಬಿಟ್ಟು ಜನತೆ ಸ್ವಯಂ ಪ್ರೇರಿತವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.  
ಐಶಾರಮಿ ಜೀವನಕ್ಕೆ ಅವಶ್ಯಕವಾದ ಎಲ್ಲಾ ಸಾಮಗ್ರಿಗಳನ್ನು ಹಣ ನೀಡಿ ಕೊಳ್ಳುತ್ತೀರಿ. ಆದರೆ ಶೌಚಾಲಯ ನಿರ್ಮಾಣಕ್ಕೆ ಮಾತ್ರ ಹೆಚ್ಚು ಕಾಳಜಿ ತೋರುತ್ತಿಲ್ಲ. ಈ ಕುರಿತು ಮಹಿಳೆಯರು ಹೆಚ್ಚು ಆಸಕ್ತಿ ತೋರಬೇಕು. ಅಷ್ಟೇ ಅಲ್ಲದೆ ಹೆಣ್ಣು ಮಕ್ಕಳು ಶೌಚಾಲಯಗಳು ಇಲ್ಲದ ಕುಟುಂಬಗಳಿಗೆ ಅರಿವು ಮೂಡಿಸುವುದೇ ಅಲ್ಲದೆ ನಾಯಕತ್ವ ವಹಿಸಿ ಶೌಚಾಲಯ ನಿರ್ಮಿಸಿಕೊಡಬೇಕು ಎಂದು ತಿಳಿಸಿದರು. 
ಪಂಚಾಯಿತಿಗಳಲ್ಲಿ ಶೇ.50 ರಷ್ಟು ಮಹಿಳಾ ಸದಸ್ಯರು ಇದ್ದಾರೆ. ನೀವು ಶೌಚಾಲಯ ನಿರ್ಮಾಣಕ್ಕೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಬಡ ಕುಟುಂಬಗಳಿಗೆ ಸದಸ್ಯರುಗಳು ಆರ್ಥಿಕ ನೆರವು ನೀಡಿ ಶೌಚಾಲಯಗಳ ನಿರ್ಮಾಣಕ್ಕೆ ಪ್ರೇರಣೆ ನೀಡಬೇಕು. ಶೌಚಾಲಯಗಳ ನಿರ್ಮಾಣಕ್ಕೆ ಸರ್ಕಾರದಿಂದ ನೀಡುವ ಪ್ರೋತ್ಸಾಹಧನವನ್ನು ಎಲ್ಲರೂ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು. 
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನಾ ಸಮಿತಿ ಸದಸ್ಯರಾದ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಗೀತಮ್ಮ ಆನಂದರೆಡ್ಡಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮೀನಾರಾಯಣ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಾಸ್ಕರ್, ವಿಮಲ, ಮುನಿರಾಜು, ಮಾಲ, ಚೇತನ್ ಗಂಗಾ, ಅರುಣ, ಪ್ರಫುಲ್ಲಾ, ಸದಾನಂದ ನಾಯಕ್, ಸರೋಜಾಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 

ಸಚಿವರೊಂದಿಗೆ ಚರ್ಚಿಸಿ ಕೆಂಪೇಗೌಡ ಜಯಂತಿ ಆಚರಣೆಗೆ ದಿನಾಂಕ ನಿಗದಿ: ಡಿ.ಸಿ

ಜಿಲ್ಲಾಡಳಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಆರ್. ರಮೇಶ್ ಕುಮಾರ್ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಲು ಸಭೆಯಲ್ಲಿ ತಿರ್ಮಾನಿಸಲಾಯಿತು. 
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ‘ಕೆಂಪೇಗೌಡ ಜಯಂತಿಯ ಆಚರಣೆ ಕುರಿತು’ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರ ಅಧ್ಯಕ್ಷತೆಯಲ್ಲಿ  ಕರೆದಿದ್ದ  ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕೆಂಪೇಗೌಡರ ಜೀವನ ಚರಿತ್ರೆ ಹಾಗೂ ಸಾಧನೆಗಳ ಬಗ್ಗೆ ಉಪನ್ಯಾಸ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖಂಡರು ಸಲಹೆ ನೀಡಿದರು. 
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣೇಗೌಡ ಮಾತನಾಡಿ, ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು. ವಿವಿಧ ಇಲಾಖೆಗಳಿಂದ ಪಲ್ಲಕ್ಕಿಗಳನ್ನು ಮೆರವಣ ಗೆಗೆ ತರಲು ಸೂಚನೆ ನೀಡಬೇಕು. ನಗರದ ಒಂದು ವೃತ್ತಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡಬೇಕು. ಕೆಂಪೇಗೌಡರ ಪುತ್ಥಳಿಯನ್ನು ಅನಾವರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಭೆಯ ಮೂಲಕ ಮನವಿ ಮಾಡಿಕೊಂಡರು. 
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು, ಈಗಾಗಲೇ ಜಯಂತಿ ಆಚರಣೆ ತಡವಾಗಿದೆ. ಸರ್ಕಾರದಿಂದ ಪ್ರಥಮ ಬಾರಿ ಜಯಂತಿ ಆಚರಿಸಲಾಗುತ್ತಿದೆ. ಹಾಗಾಗಿ ಈ ಬಾರಿಗೆ ಹೆಚ್ಚು ಆಡಂಬರವನ್ನು ಮಾಡದೆ ಆಚರಿಸೋಣ. ಮುಂದಿನ ವರ್ಷ ಸಕಲ ಸಿದ್ದತೆಗಳೊಂದಿಗೆ ನಿಮ್ಮೆಲ್ಲಾ ಸಲಹೆಗಳಂತೆ ಆಚರಣೆ ನಡೆಸೋಣ ಎಂದರು. 
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕೆ.ವಿ.ಶಂಕರಪ್ಪ ಇದಕ್ಕೆ ಧ್ವನಿಗೂಡಿಸಿ, ಜಿಲ್ಲೆಯಲ್ಲಿ ಈಗಾಗಲೇ ಕೆಂಪೇಗೌಡ ಜಯಂತಿಯನ್ನು ಮೆರವಣ ಗೆಯೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿದೆ. ಹಾಗಾಗಿ ವೇದಿಕೆ ಕಾರ್ಯಕ್ರಮ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸೋಣ ಎಂದರು. 
ಈ ಸಂದರ್ಭದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...