ಕೋಲಾರ: ಶೌಚಾಲಯ ನಿರ್ಮಾಣ ಮಾತ್ರವಲ್ಲ, ಶೌಚಾಲಯ ಬಳಕೆಯ ಮಹತ್ವವನ್ನು ಅರಿಯಬೇಕು: ಸೂಲೂರು ಅಂಜಿನಪ್ಪ

Source: shabbir | By Arshad Koppa | Published on 24th August 2017, 8:18 AM | State News | Special Report |

ಕೋಲಾರ, ಆಗಸ್ಟ್ 23 :    ಜನರು ಶೌಚಾಲಯ ನಿರ್ಮಿಸಿಕೊಂಡರು ಅವುಗಳನ್ನು ಬಳಕೆ ಮಾಡಿಕೊಳ್ಳದೆ ಹಾಗೆ ಉಳಿದಿವೆ ಅದ್ದರಿಂದ ಅವರಲ್ಲಿ ಶೌಚಾಲಯ ಬಳಕೆಯಿಂದ ಆಗುವ ಅನುಕೂಲಗಳನ್ನು ಜನರಲ್ಲಿ ಅರಿವು ಮೂಡಿಸಿ ಬಳಸುವಂತೆ ಆಗಬೇಕು ಎಂದು ತಾಲ್ಲೂಕು ಪಂಚಾಯತಿಯ ಅಧ್ಯಕ್ಷ ಸೂಲೂರು ಅಂಜಿನಪ್ಪ ತಿಳಿಸಿದರು.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯ ಸಂಯುಕ್ತ ಆಶ್ರಯದಲ್ಲಿ ಇಂದು ತಾಲ್ಲೂಕು ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೋಳ್ಳಲಾಗಿದ್ದ ಶೌಚಾಲಯಕ್ಕಾಗಿ ಸಮರ ಎಂಬ ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸರ್ಕಾರ ಶೌಚಾಲಯ ನಿರ್ಮಾಣ ಕಾಮಾಗಾರಿಯನ್ನು ಯಾವುದಾದರೂ ಕಂಪನಿಗೆ ವಹಿಸಿದ್ದರೆ 2 ತಿಂಗಳೊಳಗೆ ಸಂಪೂರ್ಣ ಶೌಚಾಲಯ ನಿರ್ಮಾಣವಾಗುತ್ತಿದ್ದವು ಆದರೆ ಜನರೆ ಶೌಚಾಲಯ ನಿರ್ಮಿಸಿಕೊಂಡರೆ ಅದರ ಬಳಕೆಯ ಮಹತ್ವ ಅರಿತು ಉಪಯೋಗಿಸುತ್ತಾರೆ ಎಂಬ ಸದುದ್ದೇಶದಿಂದ ಸ್ವತಃ ಅವರೆ ನಿರ್ಮಿಸಿಕೊಳ್ಳಲಿ ಪ್ರೋತ್ಸಾಹಧನ ನೀಡುತ್ತಿದೆ ಎಂದರು.
    ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 15 ಸಾವಿರ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ 12 ಸಾವಿರ ಪ್ರೋತ್ಸಾಹ ಧನವನ್ನು ನೀಡುತ್ತಿದೆ. ಪ್ರತಿಯೊಬ್ಬರು ಶೌಚಾಲಯ ನಿರ್ಮಿಸಿಕೊಂಡು ಬಳಕೆ ಮಾಡಬೇಕು.  ತಾಲ್ಲೂಕಿನಲ್ಲಿ ಒಟ್ಟು 36 ಗ್ರಾಮಪಂಚಾಯತಿಗಳಿದ್ದು  ಇದರಲ್ಲಿ ಇಗಾಗಲೇ 8 ಪಂಚಾಯತಿಗಳು ಸಂಪೂರ್ಣ ಶೌಚಾಲಯ ನಿರ್ಮಾಣ ಆಗಿವೆ. ಇಗಾಗಲೇ 6 ಸಾವಿರ ಶೌಚಾಲಯ ಕಾಮಾಗಾರಿಗಳು ಪ್ರಗತಿಯಲ್ಲಿದ್ದು ಕೇವಲ 282 ಕುಟುಂಬಗಳ ಶೌಚಾಲಯ ನಿರ್ಮಾಣ ಪ್ರಾರಂಭವೇ ಆಗಿಲ್ಲ ಇವುಗಳನ್ನು ಪ್ರಾರಂಬಿಸಿ ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಬೇಕು ಎಂದರು.


    ಶೌಚಾಲಯ ನಿರ್ಮಿಸಿಕೊಳ್ಳದಿರುವುದು ಆ ಕುಟುಂಬ ಮಹಿಳೆಗೆ ಮಾಡುವ ಅವಮಾನ. ಶೌಚಾಲಯ ಇಲ್ಲದ ಮನೆಯ ಮಹಿಳೆಯರು ಬೆಳಿಗ್ಗೆ 5.30 ರೊಳಗೆ ಹಾಗೂ ಸಂಜೆ 7.00 ಗಂಟೆ ನಂತರ ಶೌಚಾಲಯಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಾಚಿಕೆಯ ವಿಷಯ ಎಂದು ವಷಾದ ವ್ಯಕ್ತಪಡಿಸಿದರು.
    ತಾಲ್ಲೂಕು ಪಂಚಾಯತಿಯ ಉಪಾಧ್ಯಕ್ಷೆ ಲಕ್ಷ್ಮಿ ಅವರು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಉದ್ದೇಶಿ ಮಾತಾನಾಡಿ ಶೌಚಾಲಯ ನಿರ್ಮಾಣದಲ್ಲಿ ಯುವಕ ಯುವತಿಯರ ಪಾತ್ರ ಪ್ರಮುಖವಾದುದು. ಇಬ್ಬರು ವಿದ್ಯಾರ್ಥಿಗಳಂತೆ ಒಂದೊಂದು ತಂಡ ಮಾಡಿ ಒಂದು ಪಂಚಾಯತಿಯನ್ನು ವಹಿಸಿ ಜನರಿಗೆ ಶೌಚಾಲಯ ಮಹತ್ವವನ್ನು ತಿಳಿಸಿ ನಿರ್ಮಾಣಕ್ಕೆ ಮನವೋಲಿಸಲಾಗುವುದು ಎಂದರು. 
    ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಬಾಲಾಜಿ ಸೇರಿದಂತೆ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...