ಕೋಲಾರ:ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Source: shabbir | By Arshad Koppa | Published on 2nd August 2017, 8:13 AM | State News | Guest Editorial |

ಕೋಲಾರ, ಆಗಸ್ಟ್ 01 :ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಆಸಾಧಾರಣಾ ದೈರ್ಯ-ಸಾಹಸ ಪ್ರದರ್ಶಿದ 06 ರಿಂದ 18 ವರ್ಷದ ವಯೋಮಿತಿಯೊಳಗಿನ ಮಕ್ಕಳಿಗೆ 2017 ನೇ ಸಾಲಿನ ಶೌರ್ಯ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. 


ದಿನಾಂಕ: 01-07-2016 ರಿಂದ 30-06-2017ರ ಒಳಗೆ ಈ ಸಾಹನ ನಡೆದಿರಬೇಕು. ಆಸಕ್ತರು ಅರ್ಜಿಗಳನ್ನು ದಿನಾಂಕ: 25-08-2017 ರೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನ್ಯೂ ಕೋಲಾರ ನರ್ಸಿಂಗ್ ಹೋಂ, ಕಟ್ಟಡ ಮೊದಲನೇ ಮಹಡಿ, ಕುವೆಂಪು ನಗರ, ಕೋಲಾರ ಇಲ್ಲಿಗೆ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣ ಸಲಾಗುವುದಿಲ್ಲ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ. 

ಕಿತ್ತೂರು ರಾಣಿ  ಚೆನ್ನಮ್ಮ/ವೀರ ಮಹಿಳೆ ಪ್ರಶಸ್ತಿ
ಕೋಲಾರ, ಆಗಸ್ಟ್ 01 :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
 ಜಿಲ್ಲೆಯ ವ್ಯಾಪ್ತಿಯಲ್ಲಿ ಮಹಿಳಾ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಹಾಗೂ 05 ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಕ್ರೀಡೆ, ಕಲೆ, ಸಾಹಿತ್ಯ ಮತ್ತು ಶಿಕ್ಷಣ ಅತ್ಯುತ್ತಮ ಸೇವೆ ಸಲ್ಲಿಸಿರುವ ಮಹಿಳೆಯರಿಗೂ ಸಹ ಕಿತ್ತೂರುರಾಣ  ಚೆನ್ನಮ್ಮ ಪ್ರಶಸ್ತಿಗಳನ್ನು ನೀಡಲಾಗುವುದು. ಕಿತ್ತೂರು ರಾಣ  ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ.  
    ಸಾಹಸ ಪ್ರದರ್ಶಿಸಿ ಹೋರಾಡಿದ 18 ರಿಂದ 45 ವರ್ಷದೊಳಗಿನ ಮಹಿಳೆಗೆ ವೀರ ಮಹಿಳೆ ಪ್ರಶಸ್ತಿ ನೀಡಲಾಗುತ್ತದೆ. 
    ಒಬ್ಬ ಮಹಿಳೆಯು ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಧೈರ್ಯ, ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡಿರುವುದು ಈ ಪ್ರಶಸ್ತಿ ಸಂಬಂಧಿಸಿದ ತಂದೆ/ತಾಯಿ/ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು. 
    ಆಸಕ್ತರು ಅರ್ಜಿಗಳನ್ನು ದಿನಾಂಕ:15-09-2017 ರೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನ್ಯೂ ಕೋಲಾರ ನರ್ಸಿಂಗ್ ಹೋಂ, ಕಟ್ಟಡ ಮೊದಲನೇ ಮಹಡಿ, ಕುವೆಂಪು ನಗರ, ಕೋಲಾರ” ಇಲ್ಲಿಗೆ ಸಲ್ಲಿಸಬಹುದಾಗಿದೆ.  ನಿಗಧಿತ ದಿನಾಂಕ ಮುಗಿದ ನಂತರ ಅರ್ಜಿಗಳನ್ನು  ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ದೂರವಾಣಿ ಸಂ: 08152-222753, 2223665 ಗೆ ಕರೆ ಮಾಡಿ ಪಡೆದುಕೊಳ್ಳಬಹುದಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...