ಕೋಲಾರ: ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಸಭೆ

Source: shabbir | By Arshad Koppa | Published on 10th July 2017, 8:55 AM | State News | Guest Editorial |

ಕೋಲಾರ, ಜುಲೈ 07 :    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಸಮಾಜ ಕಲ್ಯಾಣ ಇಲಾಖೆಯ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಸಭೆ ನಡೆಯಿತು. ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ವೆಂಕಟಯ್ಯ, ಆಡಳಿತ ಅಪರ ನಿರ್ದೇಶಕರಾದ ಡಾ.ಸುಂದರೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. 


ಪ್ರವಾಸಿ ಟ್ಯಾಕ್ಸಿ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಕೋಲಾರ, ಜುಲೈ 07 :ಪ್ರವಾಸೋದ್ಯಮ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಡುವ ಹಿತ ದೃಷ್ಠಿಯಿಂದ  ಪ್ರವಾಸಿ ಟ್ಯಾಕ್ಸಿಗಳನ್ನು ಖರೀದಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಗೆ 18 ಹಾಗೂ ಪರಿಶಿಷ್ಟ ಪಂಗಡಕ್ಕೆ 05 ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ 20 ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ಖರೀದಿಸಲು ತಲಾ ರೂ.3.00 ಲಕ್ಷಗಳಂತೆ ಸಹಾಯಧನ ನೀಡಲು ಸರ್ಕಾರವು ಆದೇಶಿಸಿದೆ. 
ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿದ್ದು, 20 ರಿಂದ 40 ವರ್ಷ ವಯೋಮಿತಿಯೊಳಗಿರಬೇಕು.   ಕೋಲಾರ ಜಿಲ್ಲೆಯಲ್ಲಿ ವಾಸವಾಗಿದ್ದು,  ಲಘುವಾಹನ ಚಾಲನಾ ಪರವಾನಗಿ ಹಾಗೂ ಚಾಲನಾ ಬ್ಯಾಡ್ಜ್ ಹೊಂದಿರಬೇಕು.  
ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಗೆ ತಗಲುವ ವೆಚ್ಚದಲ್ಲಿ ರೂ. 3.00 ಲಕ್ಷಗಳನ್ನು ಇಲಾಖೆಯಿಂದ ಸಹಾಯಧನ ರೂಪದಲ್ಲಿ ಭರಿಸಲಾಗುತ್ತದೆ.   ಶೇಕಡ 5 ರಷ್ಟನ್ನು ಫಲಾನುಭವಿಗಳು ಭರಿಸುವುದು ಹಾಗೂ ಉಳಿದ ಮೊತ್ತವನ್ನು ರಾಷ್ಟ್ರೀಕೃತ/ವಾಣ ಜ್ಯ ಬ್ಯಾಂಕ್ ಮೂಲಕ ಸಾಲದ ರೂಪದಲ್ಲಿ ಮಂಜೂರು ಮಾಡಲಾಗುವುದು.  
ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ನಂ.1188, 3ನೇ ಅಡ್ಡರಸ್ತೆ, ಹಳೇ ಬಡಾವಣೆ, ಡೂಂಲೈಟ್ ಸರ್ಕಲ್ ಹತ್ತಿರ, ಕೋಲಾರ ರವರ ಕಛೇರಿಯಲ್ಲಿ ದಿನಾಂಕ: 10-07-2017 ರಿಂದ 24-08-2017 ರವರೆಗೆ ಪಡೆದು,   ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ದಿನಾಂಕ: 24-08-2017 ಸಂಜೆ 4.00 ಗಂಟೆಯೊಳಗೆ ಸಲ್ಲಿಸಬೇಕು.  ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಪರಿಗಣ ಸಲಾಗುವುದಿಲ್ಲ.   ಹೆಚ್ಚಿನ ವಿವರಗಳಿಗೆ ಪ್ರವಾಸೋದ್ಯಮ ಇಲಾಖೆಯನ್ನು ಸಂಪರ್ಕಿಸಿ ಪಡೆಯಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...