ಕೋಲಾರ:ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿ ಹಬ್ಬವನ್ನಾಗಿ ಆಚರಿಸಿ-ಪುರಸಭೆಯ ಮುಖ್ಯಾಧಿಕಾರಿಗಳ ಸೂಚನೆ

Source: shabbir | By Arshad Koppa | Published on 23rd August 2017, 8:35 AM | Coastal News | Special Report |

ಕೋಲಾರ, ಆಗಸ್ಟ್ 22 :ಗಣೇಶನ ಹಬ್ಬವನ್ನು ಪ್ರತಿಯೊಬ್ಬರೂ ಸಹ ಪರಿಸರ ಸ್ನೇಹಿ ಹಬ್ಬವನ್ನಾಗಿ ಆಚರಿಸಬೇಕು. ಜೇಡಿ ಮಣ್ಣಿನಿಂದ ಮಾಡಿದ ಹಾಗೂ ನೈಸರ್ಗಿಕ ಬಣ್ಣ ಬಳಸಿ ತಯಾರಿಸಿದ ಗಣೇಶನ ಮೂರ್ತಿಗಳನ್ನು ಮಾತ್ರ ಬಳಸಬೇಕು ಎಂದು ಶ್ರೀನಿವಾಸಪುರ ಪುರಸಭೆಯ ಮುಖ್ಯಾಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತೈಲ ಬಣ್ಣಗಳು ಅಪಾಯಕಾರಿ ರಾಸಾಯನಿಕಗಳಿಂದ ಕೂಡಿರುತ್ತದೆ. ಆದ್ದರಿಂದ ಪ್ಲಾಸ್ಟರ್ ಆಫ್ ಪ್ಯಾರೀಸ್, ವಿವಿಧ ರೀತಿಯ ಸೀಸ ಮತ್ತು ಭಾರ ಲೋಹ ಹೊಂದಿರುವ ಬಣ್ಣ ಉಪಯೋಗಿಸಿರಬಾರದು. ರಾಸಾಯನಿಕ ಬಣ್ಣ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿಗಳನ್ನು ತಯಾರಿಸುವುದು-ಮಾರಾಟ ಮಾಡುವುದು ಮತ್ತು ಪ್ರತಿಸ್ಥಾಪನೆ ನೀಷೇಧಿಸಲಾಗಿದೆ.
ಸಾರ್ವಜನಿಕರ ರಸ್ತೆ, ಕಟ್ಟಗಳಿಗೆ ಯಾವುದೇ ರೀತಿಯ ಹಾನಿಯನ್ನು ಉಂಟು ಮಾಡಬಾರದು. ಧ್ವನಿವರ್ಧಕಗಳನ್ನು ಅಳವಡಿಸಲು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ಮಾತ್ರ ಪೊಲೀಸ್ ಇಲಾಖೆಯ ಅನುಮತಿಯೊಂದಿಗೆ ಅವಕಾಶ ನೀಡಲಾಗುತ್ತದೆ. ಆರ್ಕೆಸ್ಟ್ರಾ, ವಾದ್ಯಗೋಷ್ಠಿಗಳಿಗೆ ಪ್ರತ್ಯೇಕವಾಗಿ ಅನುಮತಿಯನ್ನು ಪಡೆದುಕೊಳ್ಳಬೇಕು. ಗಣೇಶನ ಹಬ್ಬ ಆಚರಣೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದೇ ರೀತಿಯಾಗಿ ವಿದ್ಯುತ್ ಇಲಾಖೆಯಿಂದ ಪ್ರತ್ಯೇಕ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ.
ಹೂವು, ಬಾಳೆಕಂದು, ಮಾವಿನ ಸೊಪ್ಪು ಇತ್ಯಾದಿ, ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಿ ಮೂರ್ತಿಯನ್ನು ವಿಸರ್ಜಿಸಬೇಕು. ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಇಡಲು ಕಡ್ಡಾಯವಾಗಿ ಪುರಸಭಾ ಕಚೇರಿಯಿಂದ ಅನುಮತಿ ಪಡೆಯಬೇಕು. ಪೂಜಿಸಿದ ಗಣಪತಿ ಮೂರ್ತಿಗಳನ್ನು ಮುಳಬಾಗಿಲು ರಸ್ತೆಯಲ್ಲಿರುವ ಹೊಗಳಗೆರೆ ಕ್ರಾಸ್ ಬಳಿ ಇರುವ ನೀರಿನ ಕುಂಟೆಗಳಲ್ಲಿ ಮಾತ್ರ ವಿಸರ್ಜಿಸಬೇಕೆಂದು ತಿಳಿಸಿದ್ದಾರೆ.
ಪಿಓಪಿ ಗಣಪತಿ ವಿಗ್ರಹಗಳು ನಿಷಿದ್ಧ:
ಪೂಜಿಸಿದ ಗಣೇಶನ ಮೂರ್ತಿಗಳನ್ನು ಹಬ್ಬದ ನಂತರ ಹತ್ತಿರವಿರುವ ಕೆರೆ, ಬಾವಿ, ತೊರೆ ಮತ್ತು ನದಿಗಳಲ್ಲಿ ವಿಸರ್ಜಿಸುವ ವಾಡಿಕೆಯಿದ್ದು ಇದರಿಂದ ಜಲ ಮಾಲಿನ್ಯವಾಗುವ ಸಂಭವ ಇರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈಗಗಲೇ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ರಾಜ್ಯದ ಯಾವುದೇ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿ ಅಧಿಸೂಚನೆಯನ್ನು ಹೊರಡಿಸಿದೆ. ಹಾಗಾಗಿ ಜೇಡಿಮಣ ್ಣನಿಂದ ಸಿದ್ದಪಡಿಸಿದ ಬಣ್ಣ ರಹಿತವಾದ ಮೂರ್ತಿಗಳನ್ನು ಮಾತ್ರ ಬಳಸಬೇಕು. ಆ ಮೂಲಕ ಗಣೇಶ ಚುತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕೆಂದು ಪರಿಸರ ಅಧಿಕಾರಿ ಸಿ.ಆರ್.ಮಂಜುನಾಥ್ ಅವರು ತಿಳಿಸಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...