ಕೋಲಾರ: ವಿಶ್ವ ಜೇನು ನೋಣಗಳ ದಿನಾಚರಣೆ

Source: shabbir | By Arshad Koppa | Published on 21st August 2017, 8:19 AM | State News | Guest Editorial |

ಕೋಲಾರ, ಆಗಸ್ಟ್ 18 :    ಜೇನು ನೊಣಗಳು ರೈತರು ಮಾಡುವ ಕೃಷಿಗೆ ಪರೋಕ್ಷವಾಗಿ ಸಹಕಾರಿಯಾಗಿದ್ದು ಎಲ್ಲರೂ ತೋಟಗಳ ಬಳಿ ಜೇನು ಸಾಕಾಣ ಕೆ ಮಾಡಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ತುಳಸಿರಾಮ್ ಅವರು ಅಭಿಪ್ರಾಯಪಟ್ಟರು.  


ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ, ಟಮಕ ತೋಟಗಾರಿಕೆ ಮಹಾವಿದ್ಯಾಲಯ ಹಾಗೂ ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ “ವಿಶ್ವ ಜೇನುನೋಣಗಳ ದಿನಾಚರಣೆ” ಕುರಿತು ಅವರು ಮಾತನಾಡಿದರು. 
ತೋಟಗಾರಿಕೆಯಲ್ಲಿ ಜೇನು ನೊಣಗಳು ಮಹತ್ವದ ಪಾತ್ರ ವಹಿಸಲಿದೆ. ಹಣ್ಣು ಮತ್ತು ತರಕಾರಿ ಉತ್ಪಾದನೆಯಲ್ಲಿ ಜೇನುನೋಣಗಳ ಪಾತ್ರ ಹೆಚ್ಚಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಜೇನು ನೊಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಹಾಗಾಗಿ ಜೇನು ಸಾಕಾಣ ಕೆಗೆ ರೈತರು ಹೆಚ್ಚು ಆದ್ಯತೆ ನೀಡಬೇಕು ಎಂದು ತಿಳಿಸಿದರು. 
ತೋಟಗಾರಿಕಾ ಮಹಾ ವಿದ್ಯಾಲಯದ ಡೀನ್ ಡಾ. ಬಿ.ಜಿ. ಪ್ರಕಾಶ್ ಅವರು ಮಾತನಾಡಿ, ಜೇನುನೋಣಗಳ ಸಂಖ್ಯೆ ಕ್ಷೀಣ ಸಲು ಅರಣ್ಯ ಪ್ರದೇಶವನ್ನು ಕೃಷಿ ಭೂಮಿಯಾಗಿ ಮಾರ್ಪಾಟ ಮಾಡಿರುವುದು ಪ್ರಮುಖ ಕಾರಣವಾಗಿದೆ. ಕೀಟನಾಶಕಗಳ ಹೆಚ್ಚಿನ ಸಿಂಪಡಣೆ ಹಾಗೂ ಕೈಗಾರೀಕರಣದಿಂದ ಜೇನು ನೋಣಗಳ ಸಂಖ್ಯೆ ಸಾಕಷ್ಟು ಕಡಿಮೆಯಾಗುತ್ತಿದೆ.  ಇವುಗಳ ಸಂಖ್ಯೆಯನ್ನು  ಹೆಚ್ಚಿಸಲು ಸಮಗ್ರ ಕೃಷಿ ಪದ್ಧತಿಗಳು, ಪರಿಸರ ಸ್ನೇಹಿ ಪದ್ಧತಿಗಳಿಂದ ಕೀಟ ಮತ್ತು ರೋಗಗಳನ್ನು ನಿರ್ವಹಣೆ ಮಾಡುವುದು ಮುಂತಾದ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಜೇನು ಕೃಷಿ ನಿರ್ದೇಶಕರಾದ ಬಿ.ವಿ. ನಟರಾಜ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಹೆಚ್.ವಿ.ರವೀಂದ್ರ, ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ದೊಡ್ಡಬಸಪ್ಪ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಶಶಿಧರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 

ಪತ್ರಿಕೋದ್ಯಮ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ
ಕೋಲಾರ, ಆಗಸ್ಟ್ 18 :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017-18 ನೇ ಸಾಲಿನ ಎಸ್.ಸಿ.ಎಸ್.ಪಿ ವಿಶೇಷ ಘಟಕ ಯೋಜನೆಯಡಿ ಪತ್ರಿಕೋದ್ಯಮ ಅಪ್ರೆಂಟೀಸ್ ತರಬೇತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. 
ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಪ್ರೆಂಟೀಸ್ ತರಬೇತಿ ಅವಧಿಯು ಸೆಪ್ಟೆಂಬರ್ 2017 ರಿಂದ ಮಾರ್ಚ್ 2018 ರವರೆಗೆ ಒಟ್ಟು ಎಂಟು ತಿಂಗಳ ಅವಧಿಯದ್ದಾಗಿರುತ್ತದೆ. ಈ ಅವಧಿಗೆ ಒಬ್ಬರಿಗೆ ರೂ.20,000/- ಸ್ಟೈಪೆಂಡ್ ನೀಡಲಾಗುವುದು. 
ಅಭ್ಯರ್ಥಿಗಳ ಆಯ್ಕೆಯನ್ನು ಜಿಲ್ಲಾ ಆಯ್ಕೆ ಸಮಿತಿ ಮೂಲಕ ನಡೆಸಲಾಗುವುದು. ಅಭ್ಯರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಜಿಲ್ಲಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಕನ್ನಡ ಭಾಷೆಯ ಹಾಗೂ ಗಣಕ ಯಂತ್ರದ ಜ್ಞಾನ ಹೊಂದಿರಬೇಕು. 22 ರಿಂದ 38 ವರ್ಷ ವಯಸ್ಸಿನವರಾಗಿದ್ದು, ಇತರೆ ಯಾವುದೇ ಉದ್ಯೋಗದಲ್ಲಿ ತೊಡಗಿರಬಾರದು. 
ತಮ್ಮ ಪೂರ್ಣ ವಿವರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ (ಜಾತಿ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಅಥವಾ ಸ್ನಾತಕೋತ್ತರ ಪದವಿ ಅಂಕಪಟ್ಟಿ, ಗಣಕಯಂತ್ರದ ಸಾಮಾನ್ಯ ತರಬೇತಿ ಕುರಿತ ಪ್ರಮಾಣ ಪತ್ರ, ಎರಡು ಇತ್ತೀಚಿನ ಭಾವಚಿತ್ರ) ದ್ವಿ ಪ್ರತಿಯಲ್ಲಿ 
ದಿನಾಂಕ: 04-09-2017 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಕೋಲಾರ-563101 ಇಲ್ಲಿಗೆ ಸಲ್ಲಿಸಲು ಸೂಚಿಸಿದೆ. 
ಸಲ್ಲಿಸಿದಂತಹ ಅರ್ಜಿ ಹಾಗೂ ದಾಖಲಾತಿಗಳ ಸಾಫ್ಟ್ ಪ್ರತಿಯನ್ನು ಇ-ಮೇಲ್ ವಿಳಾಸ: [email protected]  ಗೆ ಕಳುಹಿಸಬಹುದಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣ ಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣ  ಸಂಖ್ಯೆ: 08152-222077 ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ತಿಳಿಸಿದ್ದಾರೆ.
 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...