ಕೋಲಾರ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲು ಪೂರ್ವಭಾವಿ ಸಭೆ

Source: shabbir | By Arshad Koppa | Published on 14th June 2017, 7:45 AM | State News | Guest Editorial |

ಕೋಲಾರ, ಜೂನ್ 13:ದಿನಾಂಕ: 21-06-2017 ರಂದು ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುವ ಬಗ್ಗೆ ಚರ್ಚಿಸಲು ದಿನಾಂಕ: 15-06-2017 ರಂದು ಸಾಯಂಕಾಲ 4.00 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ  ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳು ಕರೆದಿರುತ್ತಾರೆ.

 
ತರಬೇತಿ
ಕೋಲಾರ, ಜೂನ್ 13 :ವೃತ್ತಿಪರ ಕೋರ್ಸ್‍ಗಳ ಮೂಲಕ ವಿಶಾಲ ಶ್ರೇಣ ಯ ಉದ್ಯೋಗ ಅವಕಾಶ ಪಡೆಯಲು 2 ತಿಂಗಳ ಅವಧಿಯ ಉಚಿತ ಊಟ ವಸತಿಯೊಂದಿಗೆ 2 ತಿಂಗಳ ವೀಲರ್ ಸೂಪರ್‍ವೈಸರ್, ವೀಲರ್ ಟೆಕ್ನಿಶಿಯನ್, ವೀಲರ್ ಸಲಹೆಗಾರ, ಹೊಂಡ ಕಂಪನಿ ವತಿಯಿಂದ ಉಚಿತ ತರಬೇತಿ ನೀಡಲಾಗುವುದು.   ಆಸಕ್ತಿಯುಳ್ಳ ಯುವಕ/ಯುವತಿಯರು ಸ್ವ-ವಿವರಗಳೊಂದಿಗೆ  ನೆಹರು ಯುವ ಕೇಂದ್ರ, ಕೋಲಾರ ಇಲ್ಲಿ ನೊಂದಾಯಿಸಿಕೊಳ್ಳುವುದು.   ಹೆಚ್ಚಿನ ಮಾಹಿತಿಗೆ ಕೋಲಾರ ನೆಹರು ಯುವಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು  ಜಿಲ್ಲಾ ಯುವಜನ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
 
ಅರ್ಜಿ ಆಹ್ವಾನ
ಕೋಲಾರ, ಜೂನ್ 13 :ಭಾರತ ಸರ್ಕಾರ ಮಾಹಿತಿ ಮತ್ತು ಪ್ರಸರಣ ಇಲಾಖೆ ಹಾಡು ಮತ್ತು ನಾಟಕ ವಿಭಾಗ, ಬೆಂಗಳೂರು ಇವರು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಅರ್ಹ ಆಸಕ್ತಿಯುಳ್ಳ ಕಲಾವಿದರಿಂದ ಕಾರ್ಯಕ್ರಮಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಸಲು ಜೂ.26 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನೆಹರು ಯುವಕೇಂದ್ರ, ಕೋಲಾರ ಇವರನ್ನು ಕೂಡಲೇ ಸಂಪರ್ಕಿಸಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಯುವಜನ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

 
ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೋಲಾರ, ಜೂನ್ 13 :ಬಂಗಾರಪೇಟೆ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2017-18ನೇ ಸಾಲಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಅರ್ಜಿ ಸಲ್ಲಿಸಬೇಕಾದ ವಿದ್ಯಾರ್ಥಿಗಳು ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಎಸ್‍ಸಿ. ಎಸ್.ಟಿ ಪ್ರವರ್ಗಗಳಿಗೆ ಸೇರಿದವರಾಗಿರಬೇಕು ಮತ್ತು ವಾರ್ಷಿಕ ವರಮಾನ ಪ್ರವರ್ಗ-1 ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2ಎ, 2ಬಿ, 3ಎ, 3ಬಿ,ರೂ.44500-00 ಗಿಂತ ಕಡಿಮೆ ಇರಬೇಕು. ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ.2.00 ಲಕ್ಷಗಳು ಇರಬೇಕು ಮತ್ತು ವಿದ್ಯಾರ್ಥಿಗಳ ವಾಸಸ್ಥಳ ಶಾಲೆಯಿಂದ 5ಕಿ.ಮೀ.ಗಿಂತ ಹೆಚ್ಚು ಇರಬೇಕು ಮತ್ತು ಪ್ರತಿ ವಿಧ್ಯಾರ್ಥಿ ನಿಲಯದಲ್ಲಿ ಶೇ.75% ಸ್ಥಾನಗಳನ್ನು ಹಿಂದುಳಿದ ವರ್ಗಗಳ ವಿಧ್ಯಾರ್ಥಿಗಳಿಗೆ ಹಾಗೂ ಶೇ.25%ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವೇಶದ ಅವಕಾಶ ಇರುತ್ತದೆ.
         ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಬಂಗಾರಪೇಟೆ ಟೌನ್, ಬಡಮಾಕನಹಳ್ಳಿ, ಡಿ.ಪಿ.ಹಳ್ಳಿ, ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಕೆ.ಜಿ.ಎಫ್. ಈ ವಿದ್ಯಾರ್ಥಿನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ದಿ:25-05-2017 ರಿಂದ ನಿಗಧಿತ ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ದೂರದ ಪ್ರಮಾಣ ಪತ್ರ ಹಾಗೂ ನಡತೆಯ ಪ್ರಮಾಣ ಪತ್ರಗಳೊಂದಿಗೆ ಸಂಬಂಧಿಸಿದ ನಿಲಯ ಮೇಲ್ವಿಚಾರಕರು ಅಥವಾ ತಾಲ್ಲೂಕು ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಂಗಾರಪೇಟೆ ರವರಿಂದ ಉಚಿತವಾಗಿ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿ:15-06-2017ರ ಒಳಗೆ ಆಯಾ ನಿಲಯ ಮೇಲ್ವಿಚಾರಕರು/ತಾಲ್ಲೂಕು ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಂಗಾರಪೇಟೆ ಇವರಿಗೆ ಸಲ್ಲಿಸತಕ್ಕದ್ದು, ಆಯ್ಕೆ ಸಮಿತಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಊಟ ಮತ್ತು ವಸತಿ ಇನ್ನಿತರೆ ಸೌಲಭ್ಯಗಳನ್ನು ನೀಡಲಾಗುವುದು. ಅಪೂರ್ಣವಾಗಿ ಅಥವಾ ತಡವಾಗಿ ಬಂದ ಅರ್ಜಿಗಳನ್ನು ಪರಿಗಣ ಸಲಾಗುವುದಿಲ್ಲ ಎಂದು ಬಂಗಾರಪೇಟೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...