ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ,ಉಪಾಧ್ಯರಾಗಿ ಮಂಜುನಾಥ ಆರಾಧ್ಯ

Source: sonews | By Staff Correspondent | Published on 18th July 2019, 10:58 PM | State News | Don't Miss |

ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯರಾಗಿ ಕಾಂಗ್ರೆಸ್‌ನ ಶಂಕರಮ್ಮ ಹಾಗೂ ಉಪಾಧ್ಯರಾಗಿ ಮಂಜುನಾಥ ಆರಾಧ್ಯ ಚುನಾಯಿತರಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ನಾರಾಯಣಮ್ಮ ಹಾಗೂ ಉಪಾಧ್ಯಕ್ಷರಾಗಿದ್ದ ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಶಂಕರಮ್ಮ ಹಾಗೂ ಜೆಡಿಎಸ್‌ನ ಶಿವಮ್ಮ  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಮಂಜುನಾಥ ಆರಾಧ್ಯ ಹಾಗೂ ಜೆಡಿಎಸ್‌ನ ವೆಂಕಟರಮಣರೆಡ್ಡಿ ನಾಮಪತ್ರ ಸಲ್ಲಿಸಿದ್ದರು. 

ಗ್ರಾಮ ಪಂಚಾಯಿತಿಯ ಒಟ್ಟು 23 ಸ್ಥಾನಗಳ ಪೈಕಿ ಕಾಂಗ್ರೆಸ್‌ನ ಶಂಕರಮ್ಮ 14 ಹಾಗೂ ಮಂಜುನಾಥ ಆರಾಧ್ಯ 13 ಮತಗಳನ್ನು ಪಡೆದು ಕ್ರಮವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಚುನಾಯಿತರಾದರು. 

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಶ್ರೀನಿವಾಸಮೂರ್ತಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಿಡಿಒ ಗೌಸ್‌ಸಾಬ್‌, ಕಾರ್ಯದರ್ಶಿ ರವಿಕುಮಾರ್‌ ಇದ್ದರು.

ರಾಯಲ್ಪಾಡ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ್‌ ರೆಡ್ಡಿ, ಮುಖಂಡರಾದ ಸರಿತಾ ಸೋಮಶೇಖರ್‌, ಜಿ.ಆರ್‌.ಸತ್ಯನಾರಾಯಣ, ರಾಜಾರೆಡ್ಡಿ, ಆರ್‌.ವೆಂಕಟೇಶ್‌, ಜಿ.ವಿ.ರಮೇಶ್‌ ಬಾಬು, ವೈ.ಎಂ.ಅಮೀರ್‌ ಖಾನ್‌, ಜಿ.ವಿ.ಸಲ್ಲಪ್ಪ, ಅಮರನಾರಾಯಣ, ರಾಜಣ್ಣ, ಗಂಗಪ್ಪ, ಪೆದ್ದಣ್ಣ, ಮಂಜು ಚುನಾಯಿತ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಭಟ್ಕಳ ಬೆಂಗ್ರೆಯಲ್ಲಿ ಕೊಳೆತು ಹೋಗುತ್ತಿರುವ ಭತ್ತದ ಸಶಿ; ದುಡಿಮೆಯ ಹಣವೆಲ್ಲ ಕೈ ಜಾರಿ ರೈತರು ಕಂಗಾಲು

ತಾಲೂಕಿನ ಮಳೆಯ ಸಂಕಷ್ಟಗಳು ನೆರೆ ಬಂದು ಹಿಂದಿರುಗಿದೊಡನೆ ಒಂದೊಂದಾಗಿ ಹೊರಗೆ ಬಂದು ಕಾಣಿಸಿಕೊಳ್ಳಲಾರಂಭಿಸಿವೆ. ಮಳೆಗಾಳಿಗೆ ಉರುಳಿ ...

ಪ್ರವಾಹ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ ರಾಜ್ಯಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್

ಕೃಷ್ಣಾ ನದಿಯಿಂದ ಬಂದ ಮಹಾಪ್ರವಾಹದಲ್ಲಿ ವಿವಿಧ ಗ್ರಾಮಗಳ ನಿರಾಶ್ರಿತರ ಶಿಬಿರಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ...