ರಿಯೊಡಿಜನೈರೊ: ಕೋವ್ಯಾಕ್ಸಿನ್ ಖರೀದಿ ಒಪ್ಪಂದ ವಿವಾದ: ಬ್ರೆಝಿಲ್ ಅಧ್ಯಕ್ಷರ ವಿರುದ್ಧ ತನಿಖೆಗೆ ಸುಪ್ರೀಂ ಒಪ್ಪಿಗೆ

Source: VB | By S O News | Published on 5th July 2021, 7:12 PM | National News | Global News |

ರಿಯೊಡಿಜನೈರೊ: ಭಾರತದಿಂದ ಕೋವ್ಯಾಕ್ಸಿನ್ ಲಸಿಕೆ ಖರೀದಿ ಪ್ರಕ್ರಿಯೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಎದುರಿಸುತ್ತಿರುವ ಬ್ರೆಝಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊ ವಿರುದ್ಧ ತನಿಖೆ ನಡೆಸಲು ಅಲ್ಲಿನ ಸುಪ್ರೀಂಕೋರ್ಟ್ ಶುಕ್ರವಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ.

ದೇಶದ ಪ್ರಾಸಿಕ್ಯೂಟರ್ ಕಚೇರಿಗೆ ತನಿಖೆ ನಡೆಸುವ ಅಧಿಕಾರ ನೀಡಲಾಗಿದ್ದು 90 ದಿನಗಳೊಳಗೆ ಸಂಬಂಧಿಸಿದ ಪುರಾವೆಗಳನ್ನು ಸಂಗ್ರಹಿಸಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ. ಭಾರತ್ ಬಯೊಟೆಕ್‌ನಿಂದ 316 ಮಿಲಿಯನ್ ಡಾಲರ್ ಮೌಲ್ಯದ 20 ಮಿಲಿಯನ್ ಡೋಸ್ ಕೋವ್ಯಾಕ್ಸಿನ್ ಲಸಿಕೆ ಖರೀದಿಸಲು ಬ್ರೆಝಿಲ್‌ನ ಮಧ್ಯವರ್ತಿ ಸಂಸ್ಥೆ ಮತ್ತು ಭಾರತ್ ಬಯೊಟೆಕ್ ಮಧ್ಯೆ ಕಳೆದ ಫೆಬ್ರವರಿಯಲ್ಲಿ ನಡೆದಿದ್ದ ಒಪ್ಪಂದದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು.

ಸಂಸತ್ತಿನ ಕೆಳಮನೆಯಲ್ಲಿ ಸರಕಾರದ ಮುಖ್ಯ ಸಚೇತಕರಾಗಿರುವ ರಿಕಾರ್ಡೊ ಬಾರೋಸ್ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರಕರಣದನ ಬಗ್ಗೆ ಬ್ರೆಝಿಲ್‌ನ ಫೆಡರಲ್ ಪ್ರಾಸಿಕ್ಯೂಟರ್ ಮತ್ತು ಮಹಾಲೇಖಪಾಲರ ಕಚೇರಿ ಪ್ರತ್ಯೇಕವಾಗಿ ತನಿಖೆ ನಡೆಸಲಿವೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...