ಭಟ್ಕಳದ ಇನ್ನಿಬ್ಬರಿಗೆ ಕೋವಿಡ್-19 ಸೋಂಕು ದೃಡ; ಮೂರಕ್ಕೇರಿದ ಕೊರೋನಾ ಪೀಡಿತರ ಸಂಖ್ಯೆ

Source: sonews | By Staff Correspondent | Published on 24th March 2020, 12:22 PM | Coastal News | Don't Miss |

ಭಟ್ಕಳ: ದುಬೈನಿಂದ ಮಾ. 21ರಂದು ಮಂಗಳೂರಿಗೆ ಬಂದಿದ್ದ ಭಟ್ಕಳ ಮೂಲದ ಇಬ್ಬರು ವ್ಯಕ್ತಿಗಳಲ್ಲಿ ಕೊರೋನ ವೈರಸ್ ಪತ್ತೆಯಾಗಿದೆ. 

40 ವರ್ಷದ ವ್ಯಕ್ತಿ ಅದೇ ದಿನ ಪರೀಕ್ಷೆಗೆ ಒಳಗಾಗಿದ್ದರು. ಅವರ ಗಂಟಲು ದ್ರವದ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.

ಮಾ. 21ರಂದು ದುಬೈನಿಂದ ಮಂಗಳೂರಿಗೆ ಬಂದು ರೈಲು ಮೂಲಕ ಭಟ್ಕಳಕ್ಕೆ ಬಂದಿದ್ದ ಇನ್ನೋರ್ವ (65) ವರ್ಷದ ವ್ಯಕ್ತಿಯಲ್ಲೂ ಕೊರೋನ ಸೋಂಕು ಪತ್ತೆಯಾಗಿದೆ. ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ವಿದೇಶದಿಂದ ವಾಪಸ್ಸಾದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಟ್ಕಳ ಉಪವಿಭಾಗ ಸದ್ಯ ಲಾಕ್ ಡೌನ್ ಇದೆ. ಸಾರ್ವಜನಿಕರು ಗಾಬರಿ ಪಡುವ ಅವಶ್ಯಕತೆ ಇಲ್ಲ. ಅವರ ಮನೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ಫ್ಯುಮಿಗೇಶನ್ ಮಾಡಲಾಗುವುದು. ಜನರು ಸಾಧ್ಯವಾದಷ್ಟು ಮನೆಗಳಲ್ಲಿಯೇ ಇರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ಹರೀಶ್ ಕುಮಾರ್ ತಿಳಿಸಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...