ಕೋವಿಡ್ ನಮಗೂ ನಮ್ಮ ಜೊತೆ ಇರುವವರಿಗೂ ಮಾರಕ : ನ್ಯಾಯಧೀಶ ನಾಗರಾಜಪ್ಪ. ಎ. ಕೆ

Source: SO News | By Laxmi Tanaya | Published on 4th December 2020, 10:04 PM | State News | Don't Miss |

ಹುಬ್ಬಳ್ಳಿ : ಕೋವಿಡ್ ಸಾಕ್ರಾಮಿಕ ರೋಗ ವೈಯಕ್ತಿಕವಾಗಿ ನಮಗೆ ಅಷ್ಟೇ ಅಲ್ಲದೇ ನಮ್ಮ ಜೊತೆ ಇರುವವರಿಗೂ ಮಾರಕ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ನಾಗರಾಜಪ್ಪ.ಎ.ಕೆ ಹೇಳಿದರು. 

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಆರೋಗ್ಯ ಮತ್ತು ವಾರ್ತಾ ಇಲಾಖೆ ಸಹೋಗದಲ್ಲಿ, ಗೋಪನಕೊಪ್ಪ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ, ಕೋವಿಡ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರಲ್ಲಿ ಕೊರೊನಾ ಬಗ್ಗೆ ಅರಿವು ಕಡಿಮೆಯಾಗಿದೆ. ಜನರು ಸಾಮಾಜಿಕ ಅಂತರವನ್ನು ಮರೆತು ವ್ಯವಹರಿಸುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ಪರಿಣಾಮ ಉಂಟುಮಾಡುವ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿದೆ. ಕೋವಿಡ್ ಕುರಿತು ಬೇಜವಬ್ದಾರಿ ಪ್ರದರ್ಶಿಸಿ ಇನ್ನೊಬ್ಬರ ಜೀವನಕ್ಕೆ ಎರವಾಗಬಾರದು. ಇದು ದೊಡ್ಡ ತಪ್ಪಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ಮಾಸ್ಕ್ ಧರಿಸುವುದು. ಸ್ಯಾನಿಟೈಜರ್ ಉಪಯೋಗ, ಸಾಮಾಜಿಕ ಅಂತರದ ಬಗ್ಗೆ ತಿಳಿ ಹೇಳುವ ಜೊತೆಗೆ, ಆರೋಗ್ಯ ಸಂಬಂದಿ ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ. ಎಲ್ಲರೂ ಎಚ್ಚರಿಕೆ ವಹಿಸಿ ಕೊರೊನಾವನ್ನು ಹೊಡೆದೊಡಿಸಬೇಕಿದೆ ಎಂದರು. 

ವೈದ್ಯಾಧಿಕಾರಿ ಫಾರೂಕ್ ಉಪ್ಪಿನ ಮಾತನಾಡಿ ಕೊರೊನಾ ಎರಡನೇ ಅಲೆ ಶುರುವಾಗುವ ಲಕ್ಷಣಗಳಿವೆ. ಕೊರೋನಾ ವೈರಾಣು ರೂಪಾಂತರ ಹೊಂದಿ, ಮೊದಲು ಕೋವಿಡ್ ಕಾಣಿಸಿಕೊಂಡವರಲ್ಲೇ ಮತ್ತೆ ಕಾಣಿಸಿಕೊಳ್ಳಬಹುದು‌. 30 ವರ್ಷದೊಳಗಿನ ಯುವ ಜನತೆ ಕೋವಿಡ್ ಬಗ್ಗೆ ಬೇಜವಬ್ದಾರಿ ನಡೆದುಕೊಳ್ಳುತ್ತಾರೆ. ಇವರು ಲಕ್ಷಣ ರಹಿತ ಸೊಂಕಿತರಾಗಿರುವ ಸಾಧ್ಯತೆ ಹೆಚ್ಚು. ಇವರಿಂದ ವಯಸ್ಸಾದವರು ಮಕ್ಕಳ ತೊಂದರೆಗೆ ಈಡಾಗುತ್ತಾರೆ. ವೈದ್ಯಕೀಯ ಸಿಬ್ಬಂದಿ ಮೊದಲಿಗಿಂತ ಹೆಚ್ಚು ಮುತುವರ್ಜಿಯಿಂದ ಕೆಲಸ ನಿರ್ವಹಿಸಬೇಕು ಎಂದರು.

ನ್ಯಾಯಧೀಶರು ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಮಾಸ್ಕ್ ಧರಿಸುವಂತೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಮಹೇಶ್ ಹಿರೇಮಠ ಸೇರಿದಂತೆ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...