ಕೋವಿಡ್ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಲು ನಿರಾಕರಣೆ.. ವೈದ್ಯರಿಗೆ ಶಾಸಕ ಖಾದರ್ ತರಾಟೆ

Source: so news | Published on 6th July 2020, 11:38 PM | Coastal News | Don't Miss |

ಮಂಗಳೂರು : ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರಿಗೆ ಕೋವಿಡ್ ಸೋಂಕು ದೃಢಗೊಂಡ ಬಳಿಕ ವೆನ್​ಲಾಕ್ ಕೋವಿಡ್ ಆಸ್ಪತ್ರೆಗೆ ಸಾಗ ಹಾಕಲು ನೋಡಿರುವ ಆರೋಪದ ಮೇಲೆ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಶಾಸಕ ಯು ಟಿ ಖಾದರ್ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದ ಹೊರವಲಯದ ಬೆಳ್ಮ ಎಂಬಲ್ಲಿನ ತುಂಬು ಗರ್ಭಿಣಿ ಹೆರಿಗೆಗೆಂದು ನಗರದ ಎಸ್​ಸಿಎಸ್ ಆಸ್ಪತ್ರೆಗೆ ಮೂರು ದಿನಗಳ ಹಿಂದೆ ದಾಖಲಾಗಿದ್ದರು. ಆದರೆ, ನಿನ್ನೆ ಆಕೆಯ ಗಂಟಲು ದ್ರವ ಮಾದರಿಯ ತಪಾಸಣಾ ವರದಿ ಬಂದಿದೆ. ಅದರಲ್ಲಿ ಆಕೆಗೆ ಸೋಂಕು ದೃಢಪಟ್ಟಿದೆ. ಆದರೆ, ಆ ಬಳಿಕ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ನಡೆಸಲಾಗುತ್ತದೆ ಎಂದು ಸಿದ್ಧತೆ ನಡೆಸಿರುವ ವೈದ್ಯರು ಸವಲತ್ತುಗಳ ಕೊರತೆಯ ನೆಪವೊಡ್ಡಿ ಗರ್ಭಿಣಿಯನ್ನು ವೆನ್​ಲಾಕ್​ ಕೋವಿಡ್ ಆಸ್ಪತ್ರೆಗೆ ಕಳುಹಿಸಲು ಫ್ಲಾನ್​ ಮಾಡಿರುವ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಗರ್ಭಿಣಿಯ ಕುಟುಂಬಸ್ಥರು ಬೆಳ್ಮ ಕಾರ್ಪೊರೇಟರ್ ಸತ್ತಾರ್ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಶಾಸಕ ಯು ಟಿ ಖಾದರ್​ಗೆ ಮಾಹಿತಿ ನೀಡಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಎಸ್​ಸಿಎಸ್ ಆಸ್ಪತ್ರೆಯಲ್ಲಿಯೇ ಹೆರಿಗೆ ಮಾಡಿಸಲು ಒಪ್ಪಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...