ಕೋವಿಡ್‌: 12ನೇ ತರಗತಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಸುಪ್ರೀಂ ಕೋರ್ಟ್ ಸಂತಸ

Source: PTI | By MV Bhatkal | Published on 3rd June 2021, 7:18 PM | National News |

ನವದೆಹಲಿ: ಕೇಂದ್ರ ಸರ್ಕಾರವು 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿರುವುದು ಸಂತಸ ವಿಷಯವಾಗಿದೆ ಎಂದಿರುವ ಸುಪ್ರೀಂಕೋರ್ಟ್‌, ಮೌಲ್ಯಮಾಪನಕ್ಕಾಗಿ ಅಳವಡಿಸಿಕೊಳ್ಳುವ ವಸ್ತುನಿಷ್ಠ ಮಾನದಂಡಗಳ ಕುರಿತು ಎರಡು ವಾರಗಳಲ್ಲಿ ಮಾಹಿತಿ ನೀಡುವಂತೆ ಸಿಬಿಎಸ್‌ಇ ಮತ್ತು ಸಿಐಸಿಎಸ್‌ಇಗೆ ಗುರುವಾರ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನ್ಯಾಯಪೀಠವು ಈ ಕುರಿತ ದಾಖಲೆಗಳನ್ನು ಎರಡು ವಾರಗಳಲ್ಲಿ ಸಲ್ಲಿಸುವಂತೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಸಿಐಎಸ್‌ಸಿಇ ಪರ ವಕೀಲ ಜೆ.ಕೆ.ದಾಸ್ ಅವರಿಗೆ ಸೂಚಿಸಿತು.
ಹಲವು ವಿದ್ಯಾರ್ಥಿಗಳು ಭಾರತ ಮತ್ತು ವಿದೇಶಗಳಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲಿದ್ದಾರೆ. ಹಾಗಾಗಿ ಅವರ 12ನೇ ತರಗತಿಯ ಮೌಲ್ಯಮಾಪನ ವಿಧಾನಕ್ಕೆ ಅಳವಡಿಸಿಕೊಳ್ಳುವ ವಸ್ತುನಿಷ್ಠ ಮಾನದಂಡಗಳ ದಾಖಲೆಗಳನ್ನು ಸಲ್ಲಿಸಬೇಕು. ಇದಕ್ಕಾಗಿ ಹೆಚ್ಚಿನ ಅವಧಿ ಕೊಡಲು ಆಗದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.
‘ಮಂಡಳಿಯ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿದಾರರು ಕೇಳಿದ ಪರಿಹಾರದಂತೆ ಇದೂ ಅಷ್ಟೇ ಮುಖ್ಯವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಕೋವಿಡ್‌ ಪಿಡುಗು ವ್ಯಾಪಕವಾಗಿರುವ ಕಾರಣ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ಮಂಗಳವಾರ ರದ್ದುಪಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...