ಕೋವಿಡ್ ಟೆಸ್ಟಿಂಗ್ ಫಲಿತಾಂಶ ಶೀಘ್ರದಲ್ಲಿ ನೀಡಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Source: SO News | By Laxmi Tanaya | Published on 1st May 2021, 8:01 AM | Coastal News | Don't Miss |

ಮಂಗಳೂರು : ಕೋವಿಡ್ ಸೋಂಕಿನ ನೂತನ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು  25 ಲಕ್ಷ ರೂ. ವೆಚ್ಚದಲ್ಲಿ ವೆನ್‍ಲಾಕ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ   ಅಳವಡಿಸಲಾಗುವುದು ಎಂದು  ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆ ನೀಡುವ  ಕುರಿತು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡುತ್ತಿದ್ದರು.

  ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯ ಫಲಿತಾಂಶ ವಿಳಂಬವಿಲ್ಲದೇ ದೊರೆಯಬೇಕು ಎಂಬ ಉದ್ದೇಶದಿಂದ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ 3 ನೇ ಹೆಚ್ಚುವರಿ ಪರೀಕ್ಷಾ  ಯಂತ್ರವನ್ನು 25 ಲಕ್ಷ ರೂ ವೆಚ್ಚದಲ್ಲಿ 3 ದಿನದ ಒಳಗಾಗಿ ಅಳವಡಿಸಲಾಗುವುದು. ಇದರಿಂದ ಹೆಚ್ಚು ಕೋವಿಡ್ ಟೆಸ್ಟ್ ಗಳನ್ನ  ಮಾಡಲು ಅನುಕೂಲವಾಗುತ್ತದೆ ಎಂದರು.

  ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರಬೇಕೆಂಬ ನಿಟ್ಟಿನಲ್ಲಿ ಜಾರಿಗೊಳಿಸಲಾಗಿರುವ ಕೊರೋನಾ ಕರ್ಪ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸಿದರೆ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು  ಎಂದು  ಮುಖ್ಯಮಂತ್ರಿಗಳು  ನಿನ್ನೆಯ ವಿಡಿಯೋ ಸಂವಾದದಲ್ಲಿ ತಿಳಿಸಿದ್ದು, ಅದನ್ನು ಜಿಲ್ಲೆಯಲ್ಲಿ ಕಟ್ಟಿನಿಟ್ಟಾಗಿ ಪಾಲಿಸಬೇಕು ಎಂದರು.

ಕೋವಿಡ್‍ನಿಂದ ಮರಣ ಹೊಂದಿದವರ  ಶವ ಸಾಗಾಣಿಕೆಗೆ ಉಚಿತ ಆಂಬುಲೆನ್ಸ್ ನೀಡುವುದರೊಂದಿಗೆ ಶವ ಸಂಸ್ಕಾರದ ವೆಚ್ಚವನ್ನು ಸಹ ಸರಕಾರವೇ ಭರಿಸಲಿದ್ದು, ಈ ಕೂಡಲೇ ತಾಲೂಕಿನ ತಹಸೀಲ್ದಾರ್ ಗಳಿಗೆ  ಹಣ ಬಿಡುಗಡೆ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದರು.

  ಕೊರೋನಾ ಕರ್ಪ್ಯೂನಿಂದಾಗಿ ನಗರ ಪ್ರದೇಶದಿಂದ ಜನರು ಗ್ರಾಮಗಳತ್ತ ವಲಸೆ ಬರುತ್ತಿದ್ದಾರೆ. ಅವರುಗಳಿಂದ ಸೋಂಕು ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ. ಇವುಗಳ ನಿಯಂತ್ರಣಕ್ಕೆ ಗ್ರಾಮಗಳ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಗಳನ್ನು ರಚನೆ ಮಾಡುವುದರೊಂದಿಗೆ ಕಾಳಜಿ ವಹಿಸಬೇಕು,  ರೋಗ ಇತರರಿಗೆ ಹರಡದಂತೆ ಎಚ್ಚರ ವಹಿಸಬೇಕು ಎಂದರು.

  ಕೋವಿಡ್ ನಿಯಂತ್ರಣದ ಮಾರ್ಗಸೂಚಿಗಳಾದ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ಸ್ಯಾನಿಟೈಸರ್‍ಗಳನ್ನು ಜನಸಾಮಾನ್ಯರು ತಪ್ಪದೇ ಪಾಲಿಸುವುದರೊಂದಿಗೆ ಜಾಗೃತರಾಗಬೇಕು. ಆತಂಕ ಪಡುವ ಅಗತ್ಯವಿಲ್ಲ ಎಂದರು.

  ಕೋವಿಡ್ ಟೆಸ್ಟ್ ಗಳನ್ನು ಮಾಡುವುದು ವಿಳಂಬವಾಗುವ ಸಂದರ್ಭವಿದ್ದಲ್ಲಿ ಅಗತ್ಯವೆಂದು ಕಂಡುಬಂದಾಗ ಖಾಸಗಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮಾಡಲು ಸರಕಾರದ ಅನುಮತಿ ಪಡೆದು ಪರೀಕ್ಷೆಗಳನ್ನು ಮಾಡಲು ಮುಂದಾಗಬೇಕು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವವರಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಗುರುತಿಸಿ, ಅವರನ್ನು ಹೋಂ ಕ್ವಾರಂಟೈನ್ ಇಡುವುದರ ಜೊತೆಗೆ ಮೊಬೈಲ್ ಸ್ವ್ಯಾಬ್ ಟೆಸ್ಟಿಂಗ್ ವಾಹನಗಳನ್ನು ಅವರಿದ್ದಲ್ಲಿಯೇ ಕೊಂಡೊಯ್ದು ಕೋವಿಡ್ ಟೆಸ್ಟ್‍ನ್ನು ಮಾಡಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

ತಾಲೂಕು ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ 50 ಐಸಿಯು ಘಟಕಗಳನ್ನು ಸ್ಥಾಪಿಸಿ, ಚಿಕಿತ್ಸೆ ನೀಡಬೇಕು. ಇದರಿಂದಾಗಿ ಜಿಲ್ಲಾ ಮಟ್ಟದ ಕೋವಿಡ್ ಕೇಂದ್ರಗಳಲ್ಲಿ ಒತ್ತಡ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಶಾಸಕ ರಾಜೇಶ್ ನಾಯ್ಕ್, ಕುಟುಂಬ ಕಲ್ಯಾಣ ಅಧಿಕಾರಿ ಕಿಶೋರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...