ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ಕೇಂದ್ರಗಳಲ್ಲಿ ಕೋವಿಡ್ ಲಸಿಕೆ. ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಚಾಲನೆ.

Source: SO News | By Laxmi Tanaya | Published on 16th January 2021, 7:34 PM | Coastal News | Don't Miss |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 6 ಕೇಂದ್ರಗಳಲ್ಲಿ  ಕೋವಿಡ್ ನಿಯಂತ್ರಣ ಲಸಿಕೆ ನೀಡುವ ಕಾರ್ಯಕ್ರಮ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಆಯುಷ್ ವಿಭಾಗದಲ್ಲಿ ನಡೆಯಿತು.

 ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.  ಇದೇ ವೇಳೆ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 ದಕ್ಷಿಣ ಕನ್ನಡ ಜಿಲ್ಲೆಗೆ 24,500 ಡೋಸ್ ಕೋವಿಡ್ ಲಸಿಕೆ ಯನ್ನು ಜಿಲ್ಲೆಯ 6 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕ ರ್ತೆಯರಿಗೆ  ಲಸಿಕೆಯನ್ನು ನೀಡಲಾಗುತ್ತದೆ. ಒಟ್ಟು 52,381 ಗುರುತಿಸಲಾದ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ.  ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಆಯುಷ್ ವಿಭಾಗ, ನಗರ ಪ್ರಾಥಮಿಕ ಆರೋಗ್ಯಕೇಂದ್ರ ಸುರತ್ಕಲ್ ಮಂಗಳೂರು, ತಾಲೂಕು ಆಸ್ಪತ್ರೆ ಬಂಟ್ವಾಳ, ತಾಲೂಕು ಆಸ್ಪತ್ರೆ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಪುತ್ತೂರು, ತಾಲೂಕು ಆಸ್ಪತ್ರೆ ಸುಳ್ಯದಲ್ಲಿ ಈ ಲಸಿಕೆ ನೀಡಲಾಗುತ್ತದೆ. ಒಂದು ಲಸಿಕಾ ಶಿಬಿರದಲ್ಲಿ ಒಂದು ದಿನಕ್ಕೆ ನೂರು ಮಂದಿ ಫಲಾನುಭವಿಗಳಿಗೆ ಮಾತ್ರ ಲಸಿಕೆಯನ್ನು ನೀಡಲಾಗುವುದು.

ಲಸಿಕಾ ಶಿಬಿರವು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಫಲಾನುಭವಿಗಳಿಗೆ ಮಾತ್ರ ಲಸಿಕೆಯನ್ನು ನೀಡಲಾಗುವುದು. ಶಿಬಿರದಲ್ಲಿ ಲಸಿಕೆಗೆ ಯಾವುದೇ ಫಲಾನುಭವಿಗಳ ನೋಂದಾವಣಿ ಇರುವುದಿಲ್ಲ. ಈಗಾಗಲೇ ನೋಂದಾವಣಿಯಾಗಿರುವ ಫಲಾನುಭವಿಗಳನ್ನು ಗುರುತಿಸಿಲಸಿಕೆಯನ್ನು ನೀಡಲಾಗುವುದು.

 ಕೋವಿಡ್-19 ವ್ಯಾಕ್ಸಿನೇಷನ್ ಆದ ನಂತರ ಪ್ರತಿಯೊಬ್ಬ ಫಲಾನುಭವಿಯೂ 30 ನಿಮಿಷಗಳ ಕಾಲ ಆರೋಗ್ಯ ಕಾರ್ಯ ಕರ್ತೆಯರ ನಿಗಾವಣೆಯಲ್ಲಿ ಕಡ್ಡಾಯವಾಗಿ ವಿಶ್ರಾಂತಿ ಪಡೆಯತಕ್ಕದ್ದು. ಲಸಿಕೆಯ ನಂತರ ಏನಾದರೂ ಅಡ್ಡ ಪರಿಣಾಮ ಕಾಣಿಸಿಕೊಂಡಲ್ಲಿ ವೈದ್ಯಕೀಯ ತಂಡದ ಮೂಲಕ ಚಿಕಿತ್ಸೆಗೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. 89 ಸರಕಾರಿ,17 ಖಾಸಗಿ ಸಂಸ್ಥೆ ಗಳನ್ನು ಲಸಿಕೆ ನೀಡಲು  ಗುರುತಿಸಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...