ಮತ ಚಲಾಯಿಸಿದ ಕೋವಿಡ್ ಸೋಂಕಿತರು

Source: SO News | By Laxmi Tanaya | Published on 29th October 2020, 6:31 AM | State News | Don't Miss |

ಧಾರವಾಡ :  ಬುಧವಾರ ನಡೆದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು.

ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50 ರಲ್ಲಿ  ಜಿಲ್ಲಾಧಿಕಾರಿ ನಿತೇಶ್. ಕೆ. ಪಾಟೀಲ ಹಾಗೂ ಉಪವಿಭಾಗಾಧಿಕಾರಿ ಡಾ: ಗೋಪಾಲಕೃಷ್ಣ ಬಿ. ಅವರ ಮಾರ್ಗದರ್ಶನದಲ್ಲಿ ಇಬ್ಬರು ಕೋವಿಡ್ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿದರು.

ಹೋಂ ಐಸೋಲೇಷನ್ ನಲ್ಲಿದ್ದ ಓರ್ವರು ಹಾಗೂ ಕೋವಿಡ್ ಕೇರ್ ಸೆಂಟರಿನಲ್ಲಿ ಇದ್ದ ಓರ್ವರು ಮತದಾನ ಮಾಡಿದರು. ಇವರು ಮತಗಟ್ಟೆಗೆ ಬಂದು ಹೋಗಲು ವ್ಯವಸ್ಥೆ ಕಲ್ಪಿಸಲಾಗಿತ್ತು.  ಮತದಾನದ ನಂತರ ಮತಗಟ್ಟೆಯನ್ನು ಪುನಃ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಎಸ್.ಎಂ. ಹೊನಕೇರಿ ಹೇಳಿದ್ದಾರೆ.

ಕೋವಿಡ್-19 ರ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ : ಕೋವಿಡ್-19 ರ ಹಿನ್ನೆಲೆಯಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯಿಂದ ತಪಾಸಣೆ, ಸ್ಯಾನಿಟೈಸರ್, ಮಾಸ್ಕ್, ಹ್ಯಾಂಡ್‍ಗ್ಲೌಸ್, ಫೇಸ್‍ಸೀಲ್ಡ್ ಬಳಕೆ ಮತ್ತು ಸಾಮಾಜಿಕ ಅಂತರದ ವ್ಯವಸ್ಥೆ ಮಾಡಲಾಗಿತ್ತು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...