ಅಣೆಕಟ್ಟಿನ ನೀರು ಬಿಡುವ ಎಚ್ಚರಿಕೆ. ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಶರಾವತಿ ನದಿ ಪಾತ್ರದ ಜನರಿಗೆ ಸೂಚನೆ.

Source: S O News Service | By Laxmi Tanaya | Published on 22nd September 2020, 6:58 PM | Coastal News | State News |

ಹೊನ್ನಾವರ : ಶಿವಮೊಗ್ಗ ಜಿಲ್ಲೆಯಲ್ಲಿ ಬಾರೀ ಮಳೆ ಸುರಿಯುತ್ತಿದ್ದು, ಲಿಂಗನಮಕ್ಕಿ  ಜಲಾಶಯಕ್ಕೆ ವ್ಯಾಪಕ ಪ್ರಮಾಣದ ನೀರು ಹರಿದು ಬರುತ್ತಿದೆ.  ಮಳೆ ಹೀಗೆ ಮುಂದುವರಿದರೆ ಜಲಾಶಯದ  ನೀರುಬಿಡಲಾಗುವುದು ಎಂದು ಸೂಚನೆ ನೀಡಲಾಗಿದೆ.

ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿ ಇದೆ. ಮಂಗಳವಾರ ನೀರಿನ ಮಟ್ಟ 1812.30 ಅಡಿ  ತಲುಪಿದೆ.  ನೀರಿನ ಒಳ ಹರಿವು ಕೂಡ 44 ಸಾವಿರ ಕ್ಯೂಸೆಕ್ ಇದೆ. ಮತ್ತೆ ಮಳೆ ಮುಂದುವರಿದರೆ ನೀರು ಬಿಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟ ನೀರು ಗೇರುಸೊಪ್ಪಾ ಜಲಾಶಯಕ್ಕೆ ಹರಿದು ಬರುತ್ತದೆ. ಇದು ಬ್ಯಾಲೇನ್ಸಿಂಗ್ ಡ್ಯಾಮ್ ಆಗಿರುವುದರಿಂದ ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟಷ್ಟು ನೀರನ್ನು ಬಿಡುವುದು ಅನಿವಾರ್ಯವಾಗುತ್ತದೆ.

ಆದ್ದರಿಂದ ಶರಾವತಿ ನದಿ ತೀರದ ಜನರು ತಮ್ಮ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಕೆಪಿಸಿಎಲ್ ನಿಂದ ಸೂಚನೆ ನೀಡಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...