ಕೆಎಸ್‍ಆರ್‍ಟಿಸಿ : ಜೂನ್ 25 ರಿಂದ ಎ.ಸಿ. ಬಸ್‍ಗಳ ಕಾರ್ಯಾಚರಣೆ ಆರಂಭ

Source: UNI | Published on 25th June 2020, 7:20 PM | State News | Don't Miss |

ಧಾರವಾಡ: ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಸಂಸ್ಥೆಯ ಎ/ಸಿ ಬಸ್‍ಗಳ ಕಾರ್ಯಾಚರಣೆಯನ್ನು ಸರ್ಕಾರದ ಅನುಮತಿಯ ಮೇರೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಾರಂಭಿಸಲಾಗುತ್ತಿದೆ. 
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜೂನ್ 25.2020 ರಿಂದ ಜಾರಿಗೆ ಬರುವಂತೆ ಹಂತ ಹಂತವಾಗಿ ಎ/ಸಿ ಬಸ್‍ಗಳ ಕಾರ್ಯಾಚರಣೆಯನ್ನು  ಪ್ರಾರಂಭಿಸಲಿದೆ.
ಪ್ರಸ್ತುತ ಹಂತದಲ್ಲಿ, ಎ/ಸಿ ಬಸ್ ಸೇವೆಗಳನ್ನು ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಂದ ಬೆಂಗಳೂರು, ಮೈಸೂರು ಸ್ಥಳಗಳಿಗೆ ಮತ್ತು ಆ ಸ್ಥಳಗಳಿಂದ ಸಾರಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ.
ಬಸ್ಸುಗಳೊಳಗಿನ ತಾಪಮಾನವನ್ನು ಸರ್ಕಾರದ ಮಾರ್ಗಸೂಚಿಗಳನ್ವಯ 24-25 ಡಿಗ್ರಿ ಸೆಲ್ಸಿಯಸ್‍ನಲ್ಲಿ ನಿರ್ವಹಿಸಲಾಗುತ್ತದೆ. ಇದಲ್ಲದೆ, ಕೋವಿಡ್-19 ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ, ರಾತ್ರಿ ಸೇವಾ ಬಸ್‍ಗಳಲ್ಲಿ ಯಾವುದೇ ರೀತಿಯ ಹೊದಿಕೆ ನೀಡಲಾಗುವುದಿಲ್ಲ. ಪ್ರಯಾಣಿಕರು ತಮ್ಮ ಸ್ವಂತ ಹೊದಿಕೆಗಳನ್ನು ಬಳಿಸಿಕೊಳ್ಳಲು ಕೋರಲಾಗಿದೆ.
ಪ್ರಯಾಣಿಕರು ಆನ್‍ಲೈನ್‍ನಲ್ಲಿ ಮುಂಚಿತವಾಗಿ www.ksrtc.in  ನಲ್ಲಿ ಸೇವೆಗಳಿಗಾಗಿ ಸಂಸ್ಥೆಯ ಫ್ರ್ಯಾಂಚೈಸೀ ಮತ್ತು ಮುಂಗಡ ಕಾಯ್ದಿರಿಸುವಿಕೆ ಕೌಂಟರ್‍ಗಳ ಮೂಲಕ ಟಿಕೇಟ ಕಾಯ್ದಿರಿಸಬಹುದು. ಪ್ರಯಾಣಿಕರು ಮೇಲಿನ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಹುಬ್ಬಳ್ಳಿಯ ವಾಕರಸಾ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...