ನೇತ್ರಾವತಿ ಸೇತುವೆಯಿಂದ ಹಾರಿ ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ

Source: sonews | By Staff Correspondent | Published on 30th July 2019, 3:43 PM | Coastal News | Don't Miss |

ಮಂಗಳೂರು: ಮಾಜಿ ಮುಖ್ಯ ಮಂತ್ರಿ, ಹಿರಿಯ ರಾಜಕರಣಿ ಎಸ್ ಎಂ ಕೃಷ್ಣ ಅವರ ಅಳಿಯ, ಉದ್ಯಮಿ ಸಿದ್ಧಾರ್ಥ ಅವರು ಮಂಗಳೂರು ಹೊರವಲಯದ ನೇತ್ರಾವತಿ ಸೇತುವೆಯಿಂದ ಸೋಮವಾರ ತಡ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹೊರವಲಯದ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ತಡ ರಾತ್ರಿಯ ಬಳಿಕ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವುದು ಕಂಡು ಬಂದು ವದಂತಿಗಳಿಗೆ ಕಾರಣವಾಗಿತ್ತು.

ಬಳಿಕ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಸ್ ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ ಎಂದು ತಿಳಿದುಬಂದಿದೆ.

ಇನೋವ ಕಾರಿನಲ್ಲಿ ತಮ್ಮ ಚಾಲಕನೊಂದಿಗೆ ಬಂದಿದ್ದ ಸಿದ್ಧಾರ್ಥ ಅವರು ಸೇತುವೆ ಸಮೀಪ ಕಾರು ನಿಲ್ಲಿಸಿ ವಾಕಿಂಗ್ ಮಾಡುತ್ತೇನೆ ಎಂದು ಇಳಿದು ಹೋಗಿ ನದಿಗೆ ಹಾರಿದ್ದಾರೆ ಎಂದು ಹೇಳಲಾಗಿದೆ.

ಆದರೆ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಿರಿಯ ಪೊಲೀಸರು ಈಗ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸರ್ವ ಪ್ರಯತ್ನಪಟ್ಟರೂ ನಾನು ವಿಫಲನಾದೆ: ಸಿಬ್ಬಂದಿಗೆ ಸಿದ್ಧಾರ್ಥ್ ಬರೆದ ಪತ್ರ ಬಹಿರಂಗ

ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಅಳಿಯ ಹಾಗೂ ಉದ್ಯಮಿ ಸಿದ್ಧಾರ್ಥ್ ತೊಕ್ಕೊಟ್ಟು ಸಮೀಪ ನೇತ್ರಾವತಿ ಸೇತುವೆಯ ಬಳಿ ನಾಪತ್ತೆಯಾಗಿ 15 ಗಂಟೆಗಳು ಕಳೆದರೂ, ಅವರ ಬಗ್ಗೆ ಸುಳಿವು ಲಭ್ಯವಾಗಿಲ್ಲ. ಅವರು ನಾಪತ್ತೆಯಾಗುವ ಮುನ್ನ ಸುದೀರ್ಘ ಪತ್ರ ಬರೆದಿರುವುದು ಮತ್ತು ಪತ್ರದಲ್ಲಿ ತನ್ನೆಲ್ಲ ಸಂಕಷ್ಟಗಳನ್ನು ತೋಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಜುಲೈ 27ರಂದು ತಮ್ಮ ಕಂಪನಿಯ ನೌಕರರಿಗೆ ಸಿದ್ದಾರ್ಥ್ ಬರೆದಿರುವ ಪತ್ರದಲ್ಲಿ, ಐಟಿ(ಆದಾಯ ತೆರಿಗೆ)ಯ ಹಿಂದಿನ ಡಿಜಿ ತಮಗೆ ಅತಿ ಹೆಚ್ಚು ಕಿರುಕುಳ ನೀಡಿದ್ದಾರೆ. 2 ಬಾರಿ ನನ್ನ ಕಂಪೆನಿಯ ಷೇರುಗಳನ್ನು ಜಪ್ತಿ ಮಾಡಿದರು, ಇದರಿಂದ ಕಂಪೆನಿಯ ಶೇರು ಮಾರಾಟ ಮಾಡಲು ಸಮಸ್ಯೆಯಾಯಿತು. ಆದಾಯ ತೆರಿಗೆ ಇಲಾಖೆಯಿಂದ ನಿರಂತರವಾಗಿ ನನಗೆ ಕಿರುಕುಳ ನೀಡಲಾಯಿತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

ತಾನು ಉದ್ಯಮಿಯಾಗಿ ವಿಫಲವಾಗಿದ್ದೇನೆ, ತಾನು ವ್ಯವಹಾರದಲ್ಲಿ ವೈಫಲ್ಯ ಅನುಭವಿಸಿದ್ದೇನೆ. ತನ್ನ ಎಲ್ಲ ತಪ್ಪುಗಳಿಗೆ ತಾನೇ ಕಾರಣ. ಎಂದು ತಿಳಿಸಿದ್ದಾರೆ.

ಬೆಳಗ್ಗೆ ಬೆಂಗಳೂರಿನಿಂದ ಹೊರಟು ರಾತ್ರಿ 7 ಗಂಟೆಗೆ ಹೊತ್ತಿಗೆ ಮಂಗಳೂರಿನ ಪಂಪ್ ವೆಲ್ ತಲುಪಿದ್ದ ಸಿದ್ಧಾರ್ಥ್ ಬಳಿಕ ತೊಕ್ಕೊಟ್ಟು ಕಡೆಗೆ ಹೊರಟಿದ್ದಾರೆ. ದಾರಿ ಮಧ್ಯೆ ಸೇತುವೆಯ ಬಳಿ ಕಾರನ್ನು ನಿಲ್ಲಿಸಲು ಚಾಲಕನಿಗೆ ಸೂಚಿಸಿದ್ದಾರೆ. ಕಾರಿನಿಂದ ಇಳಿದು ಮೊಬೈಲ್ ನಲ್ಲಿ ಮಾತನಾಡುತ್ತಾ ಸೇತುವೆಯಲ್ಲಿ ಮುಂದೆ ಸಾಗಿದ್ದರು. ಈ ವೇಳೆ ಚಾಲಕನಿಗೆ ಕಾರನ್ನು ತಿರುಗಿಸಿ ಬರುವಂತೆ ಚಾಲಕನಿಗೆ ಹೇಳಿದ್ದರು. ಆದರೆ ಚಾಲಕ ಕಾರನ್ನು ತಿರುಗಿಸಿ ಬರುವಷ್ಟರಲ್ಲಿ ಸಿದ್ಧಾರ್ಥ್ ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಸಿದ್ಧಾರ್ಥ್ ಸೇತುವೆಯಿಂದ ನದಿಗೆ ಹಾರಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಅವರ ಅವರಿಗಾಗಿ ಶೋಧ ಮುಂದುವರಿದಿದೆ. ಕಾರು ಚಾಲಕನಿಂದ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸಿದ್ಧಾರ್ಥ್ ಅವರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.  ಶೋಧ ಕಾರ್ಯಕ್ಕೆ ನೆರವು ನೀಡುವಂತೆ ಕೇಂದ್ರಕ್ಕೆ ರಾಜ್ಯದ ಬಿಜೆಪಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ಸಿದ್ಧಾರ್ಥ್ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಮಾವ ಎಸ್.ಎಂ. ಕೃಷ್ಣ ನಿವಾಸಕ್ಕೆ ಮಾಜಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಆಗಮಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...