ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ; ಗ್ರಾಮೀಣ ವಿದ್ಯಾರ್ಥಿಗಳದೇ ಮೇಲುಗೈ; 145 ವಿದ್ಯಾರ್ಥಿಗಳಿಗೆ 625 ಅಂಕ

Source: Vb | By I.G. Bhatkali | Published on 20th May 2022, 9:32 AM | State News |

ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ ಒಟ್ಟು 8,53,436 ವಿದ್ಯಾರ್ಥಿಗಳ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.90.29 ಫಲಿತಾಂಶವನ್ನು ಪಡೆದು, ಈ ವರ್ಷವೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ, ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬುಧವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿ ಮಾತನಾಡಿದ ಅವರು, ಈ ವರ್ಷ ಮಾ.28ರಿಂದ ಎ.11ರವರೆಗೆ ನಡೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಖಾಸಗಿ, ಪುನರಾವರ್ತಿತ ಸೇರಿ ನೂತನವಾಗಿ 8,73,859 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷೆ ಬರೆದ ಒಟ್ಟು 8,53,436 ವಿದ್ಯಾರ್ಥಿಗಳ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವರ್ಷ ಶೇ.85.63 ಫಲಿತಾಂಶ ಬಂದಿದೆ. 20,423 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು ಎಂದು ಮಾಹಿತಿ ನೀಡಿದರು.

ಜೂ.27ರಿಂದ ಪೂರಕ ಪರೀಕ್ಷೆ
ಉತ್ತರ ಪತ್ರಿಕೆಗಳ ಮರು ಎಣಿಕೆ, ಮರುಮೌಲ್ಯಮಾಪನಕ್ಕೆ ಆನ್‌ಲೈನ್ ಅರ್ಜಿ ಸಲ್ಲಿಸಲು ಹಾಗೂ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಪಡೆಯಲು ಮೇ 20ರಿಂದ ಮೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜೂ.27ರಿಂದ ಜು.4ರವರೆಗೆ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಮೇ 20ರಿಂದ ಮೇ 30ರವರೆಗೆ ನೋಂದಾಯಿಸಿಕೊಳ್ಳಲು ಸಚಿವರು ಸೂಚಿಸಿದರು.

ಪ್ರತಿಬಾರಿಯಂತೆ ಈ ಬಾರಿಯೂ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಪರೀಕ್ಷೆ ಬರೆದ 4,12,334 ವಿದ್ಯಾರ್ಥಿನಿಯರ ಪೈಕಿ 3,72,279 ಮಂದಿ ಉತ್ತೀರ್ಣರಾಗಿ ಶೇ

90.29 ಫಲಿತಾಂಶವನ್ನು ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ 4,41,199 ಬಾಲಕರ ಪೈಕಿ 3,58,602 ಮಂದಿ ತೇರ್ಗಡೆಯಾಗಿದ್ದು, 3.81.3 ಫಲಿತಾಂಶ ಪಡೆದಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಶೇ.91.32 ಫಲಿತಾಂಶ ಹಾಗೂ ನಗರದ ವಿದ್ಯಾರ್ಥಿಗಳು ಶೇ.86.64 ಫಲಿತಾಂಶ ದಾಖಲಾಗಿದೆ ಎಂದರು.

ಮಾಧ್ಯಮವಾರು ಫಲಿತಾಂಶ ಗಮನಿಸಿದರೆ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಶೇ.92.88 ಫಲಿತಾಂಶ ದಾಖಲಿಸಿದ್ದರೆ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಶೇ.87.65, ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಶೇ.76.09 ಫಲಿತಾಂಶ ದಾಖಲಿಸಿದ್ದಾರೆ. ರಾಜ್ಯಾದ್ಯಂತ ಒಟ್ಟು 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದ್ದು, ಬೆಂಗಳೂರಿನಲ್ಲಿ ಗುರುವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಸೆಸೆಲ್ಸಿ ಫಲಿತಾಂಶ ಪ್ರಕಟಿಸಿದರು.

ಅವುಗಳಲ್ಲಿ 15 ಖಾಸಗಿ ಶಾಲೆಗಳು, 3 ಅನುದಾನಿತ ಹಾಗೂ ಎರಡು ಸರಕಾರಿ ಶಾಲೆಗಳಾಗಿವೆ. ಉಳಿದ 3,920 ಶಾಲೆಗಳು ಶೇ.100 ಫಲಿತಾಂಶ ದಾಖಲಿಸಿವೆ ಎಂದು ಅವರು ಹೇಳಿದರು.

ಶೇ.10 ಮಾತ್ರ ಕಠಿಣ ಪ್ರಶ್ನೆಗಳನ್ನು ಪತ್ರಿಕೆಯಲ್ಲಿ ನೀಡಲಾಗಿದ್ದು, ಶೇ. 10ರಷ್ಟು ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. 175 ಅಂಕ ಪಡೆದವರು ಮಾತ್ರ ಇದಕ್ಕೆ ಎಲಿಜಿಬಲ್ ಆಗಿರುತ್ತಾರೆ. 35,931 ವಿದ್ಯಾರ್ಥಿಗಳಿಗೆ ಒಂದು ವಿಷಯದಲ್ಲಿ ಮಾತ್ರ ಗ್ರೇಸ್ ಮಾರ್ಕ್ಸ್ ನೀಡಿದ್ದೇವೆ. 3,940 ವಿದ್ಯಾರ್ಥಿಗಳಿಗೆ ಎರಡು ವಿಷಯ ದಲ್ಲಿ ಗ್ರೇಸ್ ಮಾರ್ಕ್ಸ್ ನೀಡಿದ್ದೇವೆ ಎಂದು ಅವರು ತಿಳಿಸಿದರು.

ಪ್ರಥಮ ಭಾಷೆಯಲ್ಲಿ 19,125 ವಿದ್ಯಾರ್ಥಿಗಳು, ದ್ವಿತೀಯ ಭಾಷೆಯಲ್ಲಿ 13,458 ವಿದ್ಯಾರ್ಥಿಗಳು, ತೃತೀಯ ಭಾಷೆಯಲ್ಲಿ 43,126 ವಿದ್ಯಾರ್ಥಿಗಳು, ಗಣಿತದಲ್ಲಿ 13,683 ವಿದ್ಯಾರ್ಥಿಗಳು, ವಿಜ್ಞಾನದಲ್ಲಿ 6,592 ವಿದ್ಯಾರ್ಥಿಗಳು, ಸಮಾಜ ವಿಜ್ಞಾನದಲ್ಲಿ 50,782 ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಎಂದು ಅವರು ಮಾಹಿತಿ ನೀಡಿದರು.

625 ಅಂಕ ಗಳಿಸಿದ 145 ವಿದ್ಯಾರ್ಥಿಗಳು: ರಾಜ್ಯಾದ್ಯಂತ 145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಅದರಲ್ಲಿ 21 ಸರಕಾರಿ ಶಾಲೆಯ ವಿದ್ಯಾರ್ಥಿಗಳು, 8 ಅನುದಾನಿತ ಶಾಲೆಯ ವಿದ್ಯಾರ್ಥಿ ಗಳು ಹಾಗೂ 119 ಖಾಸಗಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...