ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್‌ಗೆ ವರ್ಗಾವಣೆ; ನೂತನ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ನೇಮಕ

Source: Vb | By I.G. Bhatkali | Published on 24th February 2023, 5:50 PM | Coastal News | State News |

ಮಂಗಳೂರು: ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ರನ್ನು ಗುರುವಾರ ರಾಜ್ಯ ಸರಕಾರ ವರ್ಗಾವಣೆಗೊಳಿಸಿದೆ. ತೆರವಾದ ಅವರ ಸ್ಥಾನಕ್ಕೆ ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿ ದ್ದ 2011ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಲದೀಪ್ ಕುಮಾರ್ ಜೈನ್‌ರನ್ನು ನೇಮಿಸಲಾಗಿದೆ.

ಶಶಿಕುಮಾರ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರೈಲ್ವೆ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. 2021ರ ಜನವರಿ 1ರಂದು ಅಧಿಕಾರ ವಹಿಸಿಕೊಂಡಿದ್ದ ಶಶಿಕುಮಾರ್ ಎರಡು ವರ್ಷಗಳ ಕಾಲ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಆರಂಭದಲ್ಲಿ ಹಾಡು-ಸಂಗೀತ, ಕ್ರೀಡೆಗಳ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಶಶಿಕುಮಾರ್‌ ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿ ಬಂದೋಬಸ್ತ್, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಊಟೋಪಚಾರ ಮಾಡುವ ಮೂಲಕ ಗಮನ ಸೆಳೆದಿದ್ದರು. ಸಾರ್ವಜನಿಕರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಇತ್ತೀಚೆಗೆ ಮಂಗಳೂರಿನಲ್ಲಿ ಎಡಿಜಿಪಿ ನಡೆಸಿದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಶಶಿಕುಮಾರ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಅಲ್ಲದೆ ಮಾನವ ಹಕ್ಕು ಹೋರಾಟಗಾರರು ಕೂಡ ಕಮಿಷನರ್ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...