ಕುಮಟಾ: ಹಿಂಸೆಗೆ ಜಾರಿದ ಸಂಘಪರಿವಾರದ ಪ್ರತಿಭಟನೆ; ಪೊಲೀಸ್ ವ್ಯಾನ್ ಬೆಂಕಿಗಾಹುತಿ,ಹಲವು ಪೊಲೀಸರಿಗೆ ಗಾಯ

Source: sonews | By Staff Correspondent | Published on 11th December 2017, 4:58 PM | Coastal News | State News | Incidents | Don't Miss |

ಕುಮಟಾ: ಪರೇಶ್ ಮೇಸ್ತಾ ಸಾವು ಪ್ರಕರಣವನ್ನು ಖಂಡಿಸಿ ಬಿಜೆಪಿ ಹಾಗು ಸಂಘಪರಿವಾರ ಹಮ್ಮಿಕೊಂಡಿದ್ದ ರ್ಯಾಲಿಯಿಂದ ಕುಮಟಾ ಅಕ್ಷರಶಃ ಉದ್ವಿಘ್ನಗೊಂಡಿದೆ.

ಬಂದ್ ಕರೆಯ ಹಿನ್ನೆಲೆಯಲ್ಲಿ ಇಂದು ಕುಮಟಾದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿತ್ತು. ಬೆಳಗ್ಗಿನಿಂದಲೂ ಜನರು, ವಾಹನಗಳ ಓಡಾಟ ಇಲ್ಲದೆ ಕುಮಟಾ ಬಿಕೋ ಎನ್ನುತ್ತಿತ್ತು. ಇದೇ ಸಂದರ್ಭ ಬಿಜೆಪಿ ಹಾಗು ಸಂಘಪರಿವಾರ ರ್ಯಾಲಿಯೊಂದನ್ನು ನಡೆಸಿದ್ದು, ಭಟ್ಕಳದ ಕಡೆಗೆ ಬರುತ್ತಿದ್ದ ಬಸ್ ಗಳನ್ನು ತಡೆದು, ಮುಸ್ಲಿಂ ಪ್ರಯಾಣಿಕರನ್ನು ಗುರಿಯಾಗಿಸಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ಸಂದರ್ಭ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಿಭಟನಾನಿರತರನ್ನು ತಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಬಿಜೆಪಿ ಹಾಗು ಸಂಘಪರಿವಾರ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣವೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಆಕ್ರೋಶಗೊಂಡ ಪ್ರತಿಭಟನಕಾರರು ಪೊಲೀಸ್ ಜೀಪೊಂದಕ್ಕೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಐಜಿಪಿ ವಾಹನ ಚಾಲಕ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವು ಪೊಲೀಸರು ಗಾಯಗೊಂಡಿದ್ದಾರೆ.

ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ, ಓರ್ವ ಗಂಭೀರ: ಪ್ರತಿಭಟನಕಾರರು ನಡೆಸಿದ ಕಲ್ಲುತೂರಾಟದಿಂದ ಮಹಿಳಾ ಪೊಲೀಸ್ ಸಿಬ್ಬಂದಿಯ ತಲೆಗೆ ಗಾಯವಾಗಿದ್ದು, ರಕ್ತ ಒಸರಿದೆ. ಐಜಿಪಿಯವರ ವಾಹನ ಚಾಲಕ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲುತೂರಾಟವನ್ನು ಪೊಲೀಸರು ತಡೆದಿದ್ದು, ಈ ಸಂದರ್ಭ ಪ್ರತಿಭಟನಕಾರರು ಪೊಲೀಸರೇ ಮೇಲೆಯೇ ಕಲ್ಲು ತೂರಿದ್ದು, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...