ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ವ್ಯಕ್ತಿಯ ಸಾವು ..!

Source: S.O. News Service | By MV Bhatkal | Published on 8th July 2019, 7:52 PM | Coastal News | Don't Miss |

ಕುಂದಾಪುರ:ಮಳೆಗಾಲದಲ್ಲಿ ಸಮುದ್ರದ ಅಲೆಗಳು ದೈತ್ಯಾಕಾರವಾಗಿರುತ್ತದೆ.ಅದೇ ಅಲೆಗಳ ರಭಸಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಸಮುದ್ರ ಪಾಲಾದ ಘಟನೆ ಇಂದು ಕುಂದಾಪುರದ ಮರವಂತೆ ಬೀಚಿನಲ್ಲಿ ವರದಿಯಾಗಿದೆ.ಆ ವ್ಯಕ್ತಿಯ ಮೃತ ದೇಹವನ್ನು ಸತತ ಕಾರ್ಯಾಚರಣೆ ಬಳಿಕ ಮೇಲಕ್ಕೆತ್ತಿದ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀಮಹಾರಾಜಾ ವರಾಹ ಸ್ವಾಮಿ ದೇವಸ್ಥಾನ ಬಳಿ ಸಮುದ್ರದಲ್ಲಿ ನಡೆದಿದೆ.
ಮೂಲತಃ ಮಾರಣಕಟ್ಟೆ ಸಮೀಪದ ಚಿತ್ತೂರು ಗ್ರಾಮಪಂಚಾಯತ್ ವ್ಯಾಪ್ತಿಯ ನಾಯ್ಕಂಬ್ಳಿಯ ನಿವಾಸಿ ಚೇತನ್ ಶೆಟ್ಟಿ (45) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ.
ವಿದೇಶದಲ್ಲಿ ಹಲವು ವರ್ಷಗಳಿಂದ ಉದ್ಯೋಗದಲ್ಲಿದ್ದ ಚೇತನ್ ಶೆಟ್ಟಿ ಕಳೆದ ತಿಂಗಳಷ್ಟೇ ರಜೆಯಲ್ಲಿ ಊರಿಗೆ ಆಗಮಿಸಿದ್ದರು. ಭಾನುವಾರದಂದು ಸಮುದ್ರ ವಿಹಾರಕ್ಕೆಂದು ಮರವಂತೆ ಸಮುದ್ರಕ್ಕೆ ತೆರಳಿದ್ದು ಅಲ್ಲಿನ ಬಂಡೆ ಕಲ್ಲುಗಳ ಮೇಲಿದ್ದ ಅವರು ಅಲೆಗಳ ರಭಸಕ್ಕೆ ಸಿಲುಕಿ ನೀರು ಪಾಲಾಗಿದ್ದರು. ತದನಂತರ ಅಗ್ನಿಶಾಮಕ ದಳ, ಗಂಗೊಳ್ಳಿ ಪೊಲೀಸರು ಹಾಗೂ ಮೀನುಗಾರರು ಹುಡುಕಾಟ ನಡೆಸಿ ಚೇತನ್ ಶೆಟ್ಟಿ ಮೃತದೇಹವನ್ನು ಪತ್ತೆಮಾಡಿದ್ದಾರೆ. ಚೇತನ್ ಎಲ್ಲರೊಂದಿಗೂ ಒಳ್ಳೆಯ ಬಾಂಧವ್ಯವಿಟ್ಟುಕೊಂಡಿದ್ದು ಅವರ ಸಾವು ಆಪ್ತರನ್ನು ದುಃಖಕೀಡುಮಾಡಿದೆ.

ಕಳೆದೆರಡು ವರ್ಷಗಳ ಹಿಂದಷ್ಟೇ ಅವರ ಪತ್ನಿಯೂ ನಿಧನರಾಗಿದ್ದು, ಚೇತನ್ ಅವರ ಸಣ್ಣ ಪ್ರಾಯದ ಹೆಣ್ಣು ಮಗು ತಂದೆ-ತಾಯಿಯನ್ನು ಕಳೆದುಕೊಂಡಂತಾಗಿದೆ.ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...