ಕುಂದಾಪುರ : ಅಕ್ರಮ ಸಕ್ರಮದಲ್ಲಿಯೂ ಅವ್ಯವಹಾರ - ಆರು ಜನರ ವಿರುದ್ದ ಪ್ರಕರಣ ದಾಖಲು

Source: manju | By Arshad Koppa | Published on 4th November 2016, 12:01 PM | State News | Incidents | Don't Miss |

photo: ಗೋಪಾಲ ಪೂಜಾರಿ,ವಿಜಯ ಶೆಟ್ಟಿ,  ಹಿಂದಿನ ತಹಸೀಲ್ದಾರ್ ಗಾಯತ್ರಿ ನಾಯಕ್

ಕುಂದಾಪುರ : ಅಕ್ರಮ ಸಕ್ರಮ ಸಮಿತಿಯ ಸದಸ್ಯರ ಕುಟುಂಬಕ್ಕೆ ಹಲವು ಎಕ್ರೆ ಬೂಮಿಯನ್ನು ಅಧಿಕಾರ ದುರುಪಯೋಗಪಡಿಸಿಕೊಂಡು ಮಂಜೂರು ಮಾಡಿದ ಘಟನೆಗೆ ಸಂಬಂಧಿಸಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಸೇರಿದಂತೆ ಆರು ಜನರ ವಿರುದ್ಧ ಕುಂದಾಪುರದ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲಾದ ಘಟನೆ ನಡೆದಿದೆ. ಆ ಮೂಲಕ ಅಕ್ರಮ ಸಕ್ರಮ ಸಮಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಭ್ರಷ್ಟಾಚಾರ ವಿರುದ್ಧ ಗ್ರಾಮಸ್ಥರು ಸೆಟೆದು ನಿಮತಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಪ್ರಕರರಣ ದಾಖಲಿಸಿ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ವಿ ಪಾಟೀಲ್ ಕುಂದಾಪುರ ಡಿವೈಎಸ್ಪಿಯವರಿಗೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬೈಂದೂರು ವುಧಾನ ಸಭಾ ಸದಸ್ಯ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆಯಲ್ಲಿರುವ್ಷಕ್ರಮ ಸಕ್ರಮ ಸಮಿತಿಯಲ್ಲಿ ಕಾಲ್ತೋಡು ವಿಜಯ ಶೆಟ್ಟಿ, ಸಾಧು ಎಸ್. ಬಿಲ್ಲವ, ಭೋಜ ನಾಯಕ್ ಇದ್ದು, ಅಂದಿನ ತಹಸೀಲ್ದಾರ್ ಗಾಯತ್ರಿ ಎಸ್. ನಾಯಕ್ ಕಾರ್ಯದರ್ಶಿಯಾಗಿದ್ದರು. ಈ ಸಂದರ್ಭ ವಿಜಯ ಶೆಟ್ಟಿಯವರು ಸಮಿತಿಯನ್ನು ದುರುಪಯೋಗಪಡಿಸಿಕೊಂಡು ಅವರ ಪತ್ನಿ ಜ್ಯೋತಿ ಶೆಟ್ಟಿಯವರ ಹೆಸರಿಗೆ ಹಲವು ಎಕ್ರೆ ಭೂಮಿ ಮಂಜೂರು ಮಾಡಿಸಕೊಂಡಿದ್ದಲ್ಲದೇ ನಿಯಮದಂತೆ ಕೃಷಿ ಮಾಡಬೇಕಾದ ಭೂಮಿಯಲ್ಲಿ ಕೆಂಪು ಕಲ್ಲುಕ್ವಾರಿ ನಡೆಸುತ್ತಿದ್ದು ಇದು ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಎಂಬುದಾಗಿ ಸ್ಥಳೀಯರಾದ ಬಿ.ಎಸ್.ಸುರೇಶ್ ಶೆಟ್ಟಿ ಎಂಬುವರು ಕುಂದಾಪುರದ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗೀ ಪಿರ್ಯಾದಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ದೂರನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶ ರಾಜಶೇಖರ ವಿ ಪಾಟೀಲ್ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಕುಂದಾಪುರ ಡಿವೈಎಸ್ಪಿಗೆ ಆದೇಶಿಸಿದ್ದಾರೆ ಎಂಬುದಾಗಿ ದೂರುದಾರ ಪರ ವಕೀಲ ಕೆ.ಸಿ.ಶೆಟ್ಟಿ ತಿಳಿಸಿದ್ದಾರೆ.

Read These Next

ಭಟ್ಕಳ ಬೆಂಗ್ರೆಯಲ್ಲಿ ಕೊಳೆತು ಹೋಗುತ್ತಿರುವ ಭತ್ತದ ಸಶಿ; ದುಡಿಮೆಯ ಹಣವೆಲ್ಲ ಕೈ ಜಾರಿ ರೈತರು ಕಂಗಾಲು

ತಾಲೂಕಿನ ಮಳೆಯ ಸಂಕಷ್ಟಗಳು ನೆರೆ ಬಂದು ಹಿಂದಿರುಗಿದೊಡನೆ ಒಂದೊಂದಾಗಿ ಹೊರಗೆ ಬಂದು ಕಾಣಿಸಿಕೊಳ್ಳಲಾರಂಭಿಸಿವೆ. ಮಳೆಗಾಳಿಗೆ ಉರುಳಿ ...

ಪ್ರವಾಹ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ ರಾಜ್ಯಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್

ಕೃಷ್ಣಾ ನದಿಯಿಂದ ಬಂದ ಮಹಾಪ್ರವಾಹದಲ್ಲಿ ವಿವಿಧ ಗ್ರಾಮಗಳ ನಿರಾಶ್ರಿತರ ಶಿಬಿರಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ...

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ನಾಲ್ಕು ತಿಂಗಳಿಂದ ವೇತನವಿಲ್ಲದ ಶಿಕ್ಷಕರು ಕಂಗಾಲು; ಡಿಡಿಪಿಐ ಕಚೇರಿ ಮುಂದೆ ಧರಣಿ-ವೇತನ ಬಿಡುಗಡೆಗೆ ಆಗ್ರಹ

ಕೋಲಾರ: ಜಿಲ್ಲೆಯ ವಿವಿಧ ತಾಲ್ಲೂಕುಗಳ ಪ್ರೌಢಶಾಲಾ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿಂದ ಸಂಬಳ ಬಂದಿಲ್ಲ,ಕುಟುಂಬ ನಿರ್ವಹಣೆಗೆ ...