ಕುವೈಟ್: ಐಎಸ್ಎಫ್ ವೈದ್ಯಕೀಯ ಶಿಬಿರದ ಪ್ರಯೋಜನ ಪಡೆದ ನೂರಾರು ಅನಿವಾಸಿ ಭಾರತೀಯರು

Source: ifsc kuwait | By Arshad Koppa | Published on 27th August 2017, 9:32 AM | Gulf News | Guest Editorial |

ಅನಿವಾಸಿ ಭಾರತೀಯರ ಸಾಮಾಜಿಕ ಸಾಂಸ್ಕೃತಿಕ ಸಂಘಟನೆ, ಇಂಡಿಯನ್ ಸೋಶಿಯಲ್ ಫೋರಮ್ ಕುವೈಟ್, ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ದಿನಾಂಕ 25 ಆಗಸ್ಟ್ 2017ರಂದು ಫರ್ವಾನಿಯಾ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್ ನಲ್ಲಿ ನಡೆಯಿತು.

ಅನಿವಾಸಿ ಭಾರತೀಯರಲ್ಲಿ ವಿಶೇಷತಃ ಅಸಂಘಟಿತ, ದುರ್ಬಲ, ಕಾರ್ಮಿಕ ವರ್ಗಗಳ ಮಧ್ಯೆ ಆರೋಗ್ಯದ ಕುರಿತಾದ ಜಾಗೃತಿ ಮೂಡಿಸಲು ಹಾಗೂ ಭಾರತೀಯ ಮೂಲದ ತಜ್ಞ ವೈದ್ಯರಿಂದ ಸೂಕ್ತ ಸಲಹೆ ನೀಡುವ ಗುರಿಯಾದರಿಸಿ ಹಮ್ಮಿಕೊಂಡಿದ್ದ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ನೂರಾರು ಸಂಖ್ಯೆಯ ಅನಿವಾಸಿಗಳು ಪಡೆದುಕೊಂಡರು. ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಹಾಗೂ ನುರಿತ ವೈದ್ಯರುಗಳನ್ನೊಳಗೊಂಡ, ಮಧ್ಯಪ್ರಾಚ್ಯದ ಖಾಸಗಿ ವಲಯದ ಪ್ರಮುಖ ಆರೋಗ್ಯ ಕೇಂದ್ರಗಳಲ್ಲೊಂದಾದ ಬದ್ರ್ ಅಲ್ ಸಮಾ ಸಹಭಾಗಿತ್ವದಲ್ಲಿ ನಡೆದ ಶಿಬಿರದ ಪ್ರಯೋಜನ ಪಡೆಯುವುದಕ್ಕಾಗಿ ಮುಂಜಾನೆಯಿಂದಲೇ ಅಪಾರ ಸಂಖ್ಯೆಯಲ್ಲಿ ಅನಿವಾಸಿಗಳು ಸರತಿ ಸಾಲಿನಲ್ಲಿ ನಿಂತಿದ್ದರು.  

ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್, ಎಸ್ ಜಿ ಪಿ ಟಿ  (ಲಿವರ್ ಸ್ಕ್ರೀನಿಂಗ್), ಕ್ರಿಯೇಟಿನೈನ್ (ಮೂತ್ರಪಿಂಡಗಳ ಪರೀಕ್ಷೆ) ಮುಂತಾದ ಪರೀಕ್ಷೆಗಳು ಶಿಬಿರಾರ್ಥಿಗಳಿಗೆ ಉಚಿತವಾಗಿ ಲಭ್ಯವಿದ್ದವು. ಅಲ್ಲದೆ ಜನರಲ್ ಮೆಡಿಸಿನ್, ಮಕ್ಕಳ ವಿಭಾಗ, ಸ್ತ್ರೀ ರೋಗ ವಿಭಾಗ, ದಂತ ಚಿಕಿತ್ಸಾ ವಿಭಾಗ, ಜನರಲ್ ಸರ್ಜರಿ ಒಳಗೊಂಡಂತೆ ವಿವಿಧ ಕ್ಷೇತ್ರಗಳ ತಜ್ಞ ವೈದ್ಯರಿಂದ ಸಂದರ್ಶನ ಪಡೆದು ಅನಿವಾಸಿಗಳು ಉತ್ತಮ ಆರೋಗ್ಯಕ್ಕೆ ಸಂಬಂದಪಟ್ಟ ಸೂಕ್ತ ಸಲಹೆಗಳನ್ನು ಪಡೆದು ಕೊಂಡರು.

ಮುಂಜಾನೆ 7.30ಕ್ಕೆ ಆರಂಭವಾದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ನಾಯಕರೂ, ಸಮಾಜ ಸೇವಕರೂ ಆದ ಜನಾಬ್ ಹಸನ್ ಯೂಸುಫ್ ರವರು ಆರೋಗ್ಯ ತಪಾಸನ ಶಿಬಿರವನ್ನು ಅಧಿಕೃತವಾಗಿ ಉದ್ಘಾಟಿಸಿದರು, ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್ ವ್ಯವಸ್ಥಾಪಕರಾದ ಅಬ್ದುಲ್ ರಜಾಕ್’ರವರು ಆರೋಗ್ಯದ ಪ್ರಾಮುಖ್ಯತೆಯ ಕುರಿತು ವಿವರಿಸುತ್ತಾ ಅನಿವಾಸಿಗಳು ಕೆಲಸದ ಒತ್ತಡದಿಂದಾಗಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದಲ್ಲದೆ, ಹೃದಯ ಸಂಬಂಧಿಯಂತಹ ಗಂಭೀರ ಖಾಯಿಲೆಗಳ ಲಕ್ಷಣಗಳನ್ನು ಆರಂಭಿಕ ಹಂತದಲ್ಲಿ ಗುರುತಿಸಲು ವಿಫಲವಾಗುತ್ತಿರುವುದು ಕಳವಳಕಾರಿ ಎಂದು ವಿಷಾದಿಸಿದರು. ಈ ನಿಟ್ಟಿನಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸುತ್ತಿರುವ ಆರೋಗ್ಯ ತಪಾಸಣಾ ಶಿಬಿರವು ಶ್ಲಾಘನೀಯ  ಎಂದರು. ಐಎಸ್ಎಫ್ ಕರ್ನಾಟಕ ವಿಭಾಗದ ಅಧ್ಯಕ್ಷರಾದ ಇಮ್ತಿಯಾಜ್ ಅಹ್ಮದ್ ಅರ್ಕುಳರವರು ಸಭಿಕರನ್ನು ಉದ್ದೇಶಿಸಿ ಮಾತನಾಡುತ್ತಾ ಇಂಡಿಯನ್ ಸೋಶಿಯಲ್ ಫೋರಮ್’ನ ಕಾರ್ಯವೈಖರಿಯ ಬಗ್ಗೆ ವಿವರಣೆ ನೀಡಿದರು.

ಐ ಎಸ್ ಎಫ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಮಂಚಿ ಸ್ವಾಗತಿಸಿದರು. ಆಸೀಫ್ ಕಾಪು ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ಕ್ಷೇತ್ರದಲ್ಲಿ ಬದ್ರ್ ಸಮಾದ ವಿಶಿಷ್ಟ ಕೊಡುಗೆಗಾಗಿ ಈ ಸಂದರ್ಭದಲ್ಲಿ ಫಲಕ ನೀಡಿ ಗೌರವಿಸಲಾಯಿತು. 
 

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...