ಮಳೆ ಕೊರತೆ: ಆತಂಕದಲ್ಲಿ ಅವಿಭಜಿತ ದ.ಕ. ಜಿಲ್ಲೆ; ನದಿಗಳ ಒಳಹರಿವು ಕ್ಷೀಣ; ನೀರಿನ ಕೊರತೆಯ ಭೀತಿ

Source: Vb | By I.G. Bhatkali | Published on 2nd September 2023, 8:38 AM | Coastal News | State News |

ಮಂಗಳೂರು: ರಾಜ್ಯದಲ್ಲಿ ಬರದ ಸ್ಥಿತಿ ವಿಸ್ತಾರಗೊಳ್ಳುತ್ತಾ ಸಾಗಿರುವಂತೆಯೇ, ಸಮುದ್ರ ಹಾಗೂ ನದಿಗಳಿಂದ ಸುತ್ತುವರಿದಿರುವ ದ.ಕ. ಜಿಲ್ಲೆಯಲ್ಲಿ ಮಳೆಗಾಲದಲ್ಲಿಯೂ ಬಿಸಿಲ ಝಳಕ್ಕೆ ಜನಜೀವನ ನಲುಗುತ್ತಿದೆ. ಮಾತ್ರವಲ್ಲದೆ, ಜೀವ ನದಿಗಳಲ್ಲಿ ನೀರಿನ ಒಳಹರಿವು ಆಗಸ್ಟ್ ತಿಂಗಳಲ್ಲಿಯೇ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಈ ಬಾರಿ ವರ್ಷಾಂತ್ಯದಲ್ಲೇ ಕುಡಿಯುವ ನೀರಿನ ಆತಂಕಕ್ಕೆ ಕಾರಣವಾಗಿದೆ.

ಜುಲೈನಲ್ಲಿ ಒಂದೆರಡು ವಾರದ ಮಳೆ ಹೊರತುಪಡಿಸಿದರೆ, ಈ ಬಾರಿ ಮಳೆಗಾಲದ ವಾತಾವರಣ ಕಂಡು ಬಂದಿಲ್ಲ. ಜುಲೈ ತಿಂಗಳಲ್ಲಿ ವಾಡಿ ಕೆಗಿಂತ ತುಸು ಹೆಚ್ಚು ಮಳೆ ಸುರಿದಿತ್ತು. (ಜುಲೈನಲ್ಲಿ ವಾಡಿ ಕೆಯಂತೆ 1,232 ಮಿ.ಮೀ ಮಳೆಯಾಗುತ್ತಿದ್ದು, ಈ ಬಾರಿ ಜುಲೈನಲ್ಲಿ 1,486 ಮಿ.ಮೀ ಮಳೆ ದಾಖಲಾಗಿತ್ತು).

ಆಗಸ್ಟ್‌ ನಲ್ಲಿ ಶೇ. 73 ಮಳೆ ಕೊರತೆ: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಮಾಹಿತಿಯ ಪ್ರಕಾರ, ದ.ಕ. ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ವಾಡಿಕೆಯಂತೆ ಸುರಿಯಬೇಕಾಗಿದ್ದ 892 ಮಿ.ಮೀ. ಮಳೆಯ ಬದಲಿಗೆ ಸುರಿದಿರುವುದು ಕೇವಲ 239 ಮಿ.ಮೀ. ಮಾತ್ರ(ಶೇ.73 ಮಳೆ ಕೊರತೆ), ಜೂನ್ 1ರಿಂದ 4.31ರವರೆಗೆ ಜಿಲ್ಲೆಯಲ್ಲಿ 3,065ಮಿ.ಮೀ. ಮಳೆಯಾಗಬೇಕಿದ್ದು, ಸುರಿದಿರುವುದು 2,069 ಮಿ.ಮೀ. ಮಾತ್ರ. ಈ ಮೂಲಕ ಈ ಅವಧಿಯಲ್ಲಿ ಶೇ. 32ರಷ್ಟು ಮಳೆ ಕೊರತೆಯಾಗಿದೆ. ಜನವರಿಯಿಂದ ಆಗಸ್ಟ್‌ವರೆಗಿನ ಲೆಕ್ಕಾಚಾರದ ಪ್ರಕಾರ 3,308 ಮಿ.ಮೀ. ಮಳೆಯ ಬದಲಿಗೆ ಆಗಿರುವುದು 2,188 ಮಿ.ಮೀ. ಮಾತ್ರ, ಈ ಅವಧಿಯಲ್ಲಿ ಶೇ.34ರಷ್ಟು ಮಳೆ ಕೊರತೆ ಜಿಲ್ಲೆಯಲ್ಲಿ ದಾಖಲಾಗಿದೆ.

ತುಂಬೆ ಡ್ಯಾಂ ಗೇಟ್ ಬಂದ್: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ತುಂಬೆ ಆಣೆಕಟ್ಟಿನಲ್ಲಿ ಮಳೆಗಾಲದಲ್ಲಿ ಸಾಮಾನ್ಯವಾಗಿ ಗೇಟುಗಳನ್ನು ತೆರೆಯಲಾಗುತ್ತದೆ. ಪಶ್ಚಿಮ ಘಟ್ಟದಿಂದ ಹರಿದು ಬರುವ ಮಳೆ ನೀರು ನದಿಯ ಒಡಲು ಸೇರಿ ಅಲ್ಲಿಂದ ಅಣೆಕಟ್ಟಿನ ಗೇಟುಗಳ ಮೂಲಕ ಸಮುದ್ರ ಸೇರುತ್ತದೆ. ಕರಾವಳಿಯಲ್ಲಿ ಅಕ್ಟೋಬರ್, ನವೆಂಬರ್‌ನಲ್ಲಿಯೂ ಸಾಮಾನ್ಯವಾಗಿ ಆಗಾಗ್ಗೆ ಮಳೆ ಸುರಿಯುವುದರಿಂದ ನದಿಗಳಿಗೆ ಪಶ್ಚಿಮ ಘಟ್ಟಗಳಿಂದ ಡಿಸೆಂಬ‌ವರೆಗೂ ಒಳಹರಿವು ಸಾಮಾನ್ಯವಾಗಿ ರುವುದರಿಂದ ಬಹುತೇಕವಾಗಿ ಅಣೆಕಟ್ಟಿನ ಗೇಟ್ ಗಳನ್ನು ಡಿಸೆಂಬರ್ ವೇಳೆಗೆ ಮುಚ್ಚಲಾಗುತ್ತದೆ. ಆದರೆ ಈ ಬಾರಿ ಮಳೆಗಾಲದಲ್ಲಿಯೇ ಅಣೆಕಟ್ಟಿನ ಗೇಟ್‌ಗಳನ್ನು ಬಂದ್‌ ಮಾಡಲಾಗಿದೆ. ಅಣೆಕಟ್ಟಿಗೆ ನೀರಿನ ಒಳಹರಿವು ಕಡಿಮೆಯಾಗಿರುವ ಕಾರಣ ಒಟ್ಟು 30 ಗೇಟ್‌ಗಳಲ್ಲಿ ಒಂದು ಮಾತ್ರ ತೆರೆದಿದೆ. ಕಳೆದ ಫೆಬ್ರವರಿ ತಿಂಗಳಿನಿಂದಲೇ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ಕಾಡಲಾರಂಭಿಸಿತ್ತು. ಹವಾಮಾನ ಇಲಾಖೆಯ ಪ್ರಕಾರ ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಮಳೆಯಾಗುವ ಸೂಚನೆ ನೀಡಲಾಗಿದೆ. ಒಂದು ವೇಳೆ ಮಳೆ ಕೊರತೆ ಇದೇ ರೀತಿ ಮುಂದುವರಿದರೆ ಈ ಬಾರಿ ನೀರಿನ ಸಮಸ್ಯೆ ವರ್ಷಾಂತ್ಯಕ್ಕೆ ಕಾಣಿಸಿಕೊಳ್ಳುವ ಆತಂಕವನ್ನು ತಳ್ಳಿಹಾಕುವಂತಿಲ್ಲ. ಈಗಾಗಲೇ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹಕ್ಕೆ ಜಿಲ್ಲಾಡಳಿತ ಸೇರಿದಂತೆ ಸ್ಥಳೀಯಾಡಳಿತ ಗಮನ ಹರಿಸುವ ಜತೆಗೆ ನೀರು ಪೋಲಾಗದಂತೆ ಸಾರ್ವಜನಿಕರೂ ಎಚ್ಚರ ವಹಿಸುವುದು ಅಗತ್ಯವಾಗಿದೆ.

ಮೂಲದಲ್ಲೇ ಸೊರಗುತ್ತಿವೆ ನದಿಗಳು: ದ.ಕ. ಜಿಲ್ಲೆಯ ಜೀವ ನದಿಗಳಾದ ನೇತ್ರಾವತಿ, ಫಲ್ಗುಣಿ, ನಂದಿನಿ, ಸೌಪರ್ಣಿಕ, ಕುಮಾರಧಾರ ನದಿಗಳು ತುಂಬಿ ಹರಿಯಬೇಕಾದರೆ ಚಾರ್ಮಾಡಿ, ಶಿರಾಡಿ, ಬಿಸಿಲೆ ಘಾಟಿಯಲ್ಲಿ ಜುಲೈ, ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗಬೇಕು. ಆದರೆ ಈ ಬಾರಿ ಪರಿಸ್ಥಿತಿ ವ್ಯತಿರಿಕ್ತವಾಗಿದೆ. ಬರದ ಛಾಯೆ ಸಂಪೂರ್ಣವಾಗಿ ಆವರಿಸಿದಂತಿದೆ ಎನ್ನುತ್ತಾರೆ ಪರಿಸರ ಹೋರಾಟಗಾರರು. ಪ್ರತಿ ವರ್ಷ ಮಳೆಗಾಲದ ಈ ಅವಧಿಯಲ್ಲಿ ತುಂಬಿ ಹರಿಯುವ ನೇತ್ರಾವತಿ ನದಿ ಬೆಳ್ತಂಗಡಿ ಭಾಗದಲ್ಲಿಯೇ ಸೊರಗಿರುವುದು ಕಂಡುಬರುತ್ತಿದೆ.

ಪುತ್ತೂರು ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ಪೂರೈಕೆಯ ಪ್ರಮುಖ ಜೀವನದಿ ಕುಮಾರಧಾರದಲ್ಲೂ ನೀರಿನ ಒಳಹರಿವು ಕ್ಷೀಣಿಸಿದೆ. ಸಾಮಾನ್ಯವಾಗಿ ಮಾರ್ಚ್- ಎಪ್ರಿಲ್ ತಿಂಗಳ ನದಿ ನೀರಿನ ಪರಿಸ್ಥಿತಿ ಈಗ ಕಂಡು ಬರುತ್ತಿದೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...