ಲಡಾಖ್ ಸಂಘರ್ಷ: ಭಾರತ,ಚೀನಾ ನಡುವೆ ಮತ್ತೊಂದು ಸುತ್ತಿನ ಬ್ರಿಗೇಡ್ ಕಮಾಂಡರ್ ಮಟ್ಟದ ಮಾತುಕತೆ

Source: PTI | Published on 2nd September 2020, 10:35 PM | National News | Don't Miss |

ನವದೆಹಲಿ: ಪೂರ್ವ ಲಡಾಖ್‌ನ ಪಾಂಗೊಂಗ್ ಸರೋವರ ಪ್ರದೇಶದಲ್ಲಿ ಚೀನಾದ "ಪ್ರಚೋದನಕಾರಿ ಕ್ರಮಗಳ" ನಂತರ ಆ ಪ್ರದೇಶದ ಪರಿಸ್ಥಿತಿ ಬುಧವಾರ ಮತ್ತಷ್ಟು ಸೂಕ್ಷ್ಮವಾಗಿದ್ದು, ಉದ್ವಿಗ್ನತೆಯನ್ನು ನಿವಾರಿಸಲು ಎರಡೂ ಕಡೆಯ ಸೇನಾ ಕಮಾಂಡರ್‌ಗಳು ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಪಾಂಗೊಂಗ್ ಸರೋವರ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ತಗ್ಗಿಸುವ ಉದ್ದೇಶದಿಂದ ಉಭಯ ದೇಶಗಳ ಸೇನೆ ಚುಶುಲ್‌ನಲ್ಲಿ ಬ್ರಿಗೇಡ್ ಕಮಾಂಡರ್ ಮಟ್ಟದ ಮಾತುಕತೆ ನಡೆಸಿದವು ಎಂದು ಅವರು ಹೇಳಿದ್ದಾರೆ.
ಸೋಮವಾರ ಮತ್ತು ಮಂಗಳವಾರ ಸಹ ಇದೇ ರೀತಿಯ ಮಾತುಕತೆ ನಡೆದಿದ್ದು, ಇಂದು ಆರು ಗಂಟೆಗಳ ಕಾಲ ಮಾತುಕತೆ ನಡೆದಿದೆ. ಆದರೆ ಮಾತುಕತೆ ಫಲಪ್ರದವಾಗಿಲ್ಲ.
ಮೂಲಗಳ ಪ್ರಕಾರ, ಭಾರತ ಕೆಲವು ದಿನಗಳಿಂದ ಪೂರ್ವ ಲಡಾಕ್‌ನ ಪ್ರಮುಖ ಬೆಟ್ಟದ ತುದಿಗಳು ಮತ್ತು ಸ್ಥಳಗಳನ್ನು ಆಕ್ರಮಿಸಿಕೊಳ್ಳುವ ಮೂಲಕ ತಾಂತ್ರಿಕೆ ಗೆಲುವು ಸಾಧಿಸಿದೆ.
ಆ.29-30 ರ ರಾತ್ರಿ ಭಾರತೀಯ ಸೇನೆ ಚೀನಾ ಸಿಬ್ಬಂದಿಗಳ ಚಲನವಲನಗಳನ್ನು ಗುರುತಿಸಿದ್ದು, ಲಡಾಕ್ ನ ಪ್ಯಾಂಗಾಂಗ್ ತ್ಸೋ ಲೇಕ್ ನ ಪೂರ್ವದಲ್ಲಿರುವ ಚುಶುಲ್ ನಲ್ಲಿ ಅತಿಕ್ರಮಣ ಮಾಡುವ ಚೀನಾ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...